ಪಾನ್‌ ಉಗುಳಲು ಹೋಗಿ ಬಸ್‌ನಿಂದ ಬಿದ್ದು ವ್ಯಕ್ತಿ ಸಾವು

Date:

ಪ್ರಯಾಣಿಕರೊಬ್ಬರು ಚಲಿಸುತ್ತಿದ್ದ ಬಸ್‌ನಲ್ಲಿ ಪಾನ್‌ ಉಗುಳಲು ಬಸ್‌ನ ಬಾಗಿಲು ತೆರೆದಿದ್ದು, ಆಯತಪ್ಪಿ ಹೊರಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಲಕ್ನೋದ ರಾಮ್ ಜಿವಾನ್ ಎಂದು ಗುರುತಿಸಲಾಗಿದೆ. ಅವರು ತಮ್ಮ ಪತ್ನಿ ಸಾವಿತ್ರಿ ಅವರೊಂದಿಗೆ ಉತ್ತರ ಪ್ರದೇಶದ ಅಜಂಗಢದಿಂದ ಲಕ್ನೋಗೆ ಪ್ರಯಾಣಿಕ ಎಸಿ ಬಸ್‌ನಲ್ಲಿ ತೆರಳುತ್ತಿದ್ದರು. ಎಸಿ ಬಸ್‌ ಆದ್ದರಿಂದ ಬಸ್‌ನಲ್ಲಿ ಕಿಟಕಿಗಳು ಇರಲಿಲ್ಲ. ಹೀಗಾಗಿ, ಬಾಯಲ್ಲಿದ್ದ ಪಾನ್‌ ಉಗುಳಲು ಚಲಿಸುತ್ತಿದ್ದ ಬಸ್‌ನ ಬಾಗಿಲು ತೆರೆದಿದ್ದಾರೆ. ಈ ವೇಳೆ ಆಯತಪ್ಪಿ ರಸ್ತೆಗೆ ಬಿದ್ದು, ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಬಸ್‌ಅನ್ನು ತಕ್ಷಣವೇ ನಿಲ್ಲಿಸಿದ್ದು, ಉತ್ತರ ಪ್ರದೇಶ ಎಕ್ಸ್‌ಪ್ರೆಸ್‌ವೇಸ್ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಅಥಾರಿಟಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...