ಸೋಂಕಿಗೆ ಚಿಕಿತ್ಸೆ ಪಡೆಯಲು ಬಂದ ಯುವಕ ಜನನಾಂಗವನ್ನೇ ಕತ್ತರಿಸಿದ ವೈದ್ಯರು

Date:

ಸೋಂಕಿಗೆ ಚಿಕಿತ್ಸೆಗಾಗಿ ಬಂದಿದ್ದ ಯುವಕ ಆತನ ಒಪ್ಪಿಗೆ ಇಲ್ಲದೆ, ವೈದ್ಯರು ಆತನ ಜನನಾಂಗವನ್ನೇ ಕತ್ತರಿಸಿರುವ ಘಟನೆ ಅಸ್ಸಾಂನ ಕ್ಯಾಚರ್ ಜಿಲ್ಲೆಯಲ್ಲಿ ನಡೆದಿದೆ. ಬಯಾಪ್ಸಿ ಪರೀಕ್ಷೆಯ ವೇಳೆ, ವೈದ್ಯರು ಯುವಕನ ಜನನಾಂಗವನ್ನು ತೆಗೆದುಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಮಣಿಪುರದ ಜಿರಿಬಮ್ ಮೂಲದ 28 ವರ್ಷದ ಯುವಕ ಅತಿಕುರ್ ರೆಹಮಾನ್ ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದರು. ಸೋಂಕಿಗೆ ಚಿಕಿತ್ಸೆ ಪಡೆಯಲು ಕ್ಯಾಚರ್ ಜಿಲ್ಲೆಯ ಸಿಲ್ಚಾರ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ, ಆತನಿಗೆ ಬಯಾಪ್ಸಿ ಪರೀಕ್ಷೆ ನಡೆಸಲಾಗಿದೆ. ಬಳಿಕ, ಆತನ ಒಪ್ಪಿಗೆಯೇ ಇಲ್ಲದೆ ವೈದ್ಯರು ಆತನ ಜನನಾಂಗವನ್ನು ಕತ್ತರಿಸಿದ್ದಾರೆ.

ಯುವಕನಿಗೆ ಪ್ರಜ್ಞೆ ಬಂದಾಗ, ತನ್ನ ಜನನಾಂಗವನ್ನು ವೈದ್ಯರು ತೆಗೆದುಹಾಕಿರುವುದು ಗೊತ್ತಾಗಿದೆ. ಸಂತ್ರಸ್ತ ಯುವಕ ಆಸ್ಪತ್ರೆಯ ವಿರುದ್ಧ ಅಸ್ಸಾಂ ಸರ್ಕಾರ ಮತ್ತು ಪೊಲೀಸರಿಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜನನಾಂಗ ಸೋಂಕಿನಿಂದಾಗಿ ಜೂನ್ 19 ರಂದು ನಾನು ಸಿಲ್ಚಾರ್‌ನ ಖಾಸಗಿ ಆಸ್ಪತ್ರೆಗೆ ಹೋಗಿದ್ದೆ. ವೈದ್ಯರು ಬಯಾಪ್ಸಿ ಪರೀಕ್ಷೆ ಮಾಡಿಸಲು ಸಲಹೆ ನೀಡಿದರು. ನನ್ನ ಬಯಾಪ್ಸಿ ಪರೀಕ್ಷೆಯ ಸಮಯದಲ್ಲಿ, ಅವರು ನನ್ನ ಒಪ್ಪಿಗೆಯಿಲ್ಲದೆ ಶಸ್ತ್ರಚಿಕಿತ್ಸೆಯ ಮೂಲಕ ನನ್ನ ಜನನಾಂಗವನ್ನು ತೆಗೆದುಹಾಕಿದ್ದಾರೆ. ನಾನು ಎಚ್ಚರವಾದಾಗ, ನನ್ನ ಜನನಾಂಗವನ್ನು ತೆಗೆದುಹಾಕಲಾಗಿದೆ ಎಂಬುದು ನನಗೆ ಗೊತ್ತಾಯಿತು. ನಾನು ವೈದ್ಯರನ್ನು ಕೇಳಿದಾಗ, ಅವರು ಸರಿಯಾಗಿ ಪ್ರತಿಕ್ರಿಯಿಸಲಿಲ್ಲ” ಎಂದು ಸಂತ್ರಸ್ತ ಅತಿಕುರ್ ರೆಹಮಾನ್ ಆರೋಪಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಸುವುದರಿಂದ ಉಂಟಾಗುವ ಬಿಕ್ಕಟ್ಟುಗಳೇನು ಬಲ್ಲಿರಾ?

“ಈಗ, ನಾನು ಅಸಹಾಯಕನಾಗಿದ್ದೇನೆ. ಏನು ಮಾಡಬೇಕೆಂದು ತಿಳಿಯುತ್ತಿಲ್ಲ. ನನ್ನ ಜೀವನ ಹಾಳಾಗಿಹೋಗಿದೆ. ನಾನು ವೈದ್ಯರನ್ನು ಹಲವಾರು ಬಾರಿ ಸಂಪರ್ಕಿಸಲು ಪ್ರಯತ್ನಿಸಿದೆ. ಆದರೆ ಅವರು ನನ್ನ ಫೋನ್‌ ಕರೆಗಳಿಗೆ ಪ್ರತಿಕ್ರಿಯಿಸುತ್ತಿಲ್ಲ. ನಾನು ಮಾನಸಿಕವಾಗಿ ನೊಂದಿದ್ದೇನೆ” ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತುರ್ತಾಗಿ ಮಧ್ಯಪ್ರವೇಶಿಸಿ, ನನಗೆ ನ್ಯಾಯಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...