ಛತ್ತೀಸ್‌ಗಢ | ಐಇಡಿ ಸ್ಫೋಟ, ಯುವಕ ಸಾವು: ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ

Date:

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಐಇಡಿ ಸ್ಫೋಟವಾಗಿ 20 ವರ್ಷದ ಯುವಕನೋರ್ವ ಸಾವನ್ನಪ್ಪಿದ್ದಾನೆ. ಈ ಐಇಡಿಯನ್ನು ಮಾವೋವಾದಿಗಳು ಇಟ್ಟಿದ್ದಾರೆ ಎಂದು ಆರೋಪಿಸಿರುವ ಭದ್ರತಾ ಪಡೆಗಳು ಸದ್ಯ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಭಾನುವಾರ ಸಮೀಪದ ಉಸೂರ್ ಪೊಲೀಸ್ ಠಾಣೆ ವ್ಯಾಪ್ತಿಯ ಕಸ್ತೂರಿಪಾಡ್ ಗ್ರಾಮದ ನಿವಾಸಿ ಆಯ್ತಾ ಕುಹ್ರಾಮಿ ಹತ್ತಿರದ ಕಾಡಿಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಯುವಕ ಆಕಸ್ಮಿಕವಾಗಿ ಐಇಡಿ ಸಮೀಪ ಹೋಗಿದ್ದು ಅದು ಸ್ಫೋಟಗೊಂಡಿದೆ. ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಛತ್ತೀಸ್‌ಗಢ| ಬಸ್ತಾರ್‌ ಮತಗಟ್ಟೆ ಬಳಿ ಸ್ಫೋಟ: ಸಿಆರ್‌ಪಿಎಫ್ ಯೋಧ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚಿನ ಐಇಡಿಗಳನ್ನು ಇರಿಸಲಾಗಿದೆಯೇ ಎಂದು ಪರಿಶೀಲಿಸಲು ಭದ್ರತಾ ಸಿಬ್ಬಂದಿಗಳು ಸದ್ಯ ಪ್ರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಅರಣ್ಯಗಳು ಮತ್ತು ದೂರದ ಪ್ರದೇಶಗಳಿಗೆ ಹೋಗುವಾಗ ಗ್ರಾಮಸ್ಥರು ತೀವ್ರ ಎಚ್ಚರಿಕೆ ವಹಿಸಬೇಕು. ಯಾವುದೇ ಅನುಮಾನಾಸ್ಪದ ವಸ್ತುಗಳು, ಚಟುವಟಿಕೆಗಳು ಅಥವಾ ವಸ್ತುಗಳು ಕಂಡುಬಂದರೆ ಸಮೀಪದ ಪೊಲೀಸ್ ಠಾಣೆ ಅಥವಾ ಭದ್ರತಾ ಶಿಬಿರಕ್ಕೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ.

ಛತ್ತೀಸ್‌ಗಢದಲ್ಲಿ ಮಾವೋವಾದಿ ನಾಯಕರುಗಳು ಮತ್ತು ಭದ್ರತಾ ಪಡೆಗಳ ನಡುವೆ ನಿರಂತರವಾಗಿ ಸಂಘರ್ಷ ನಡೆಯುತ್ತಿದೆ. ಕಾಡುಗಳಲ್ಲಿರುವ ಮಾವೋವಾದಿಗಳು ತಮ್ಮನ್ನು ಬಂಧಿಸಲು ಬರುವ ಭದ್ರತಾ ಪಡೆಗಳನ್ನು ಗುರಿಯಾಗಿಸಿ ಈ ಐಇಡಿಗಳನ್ನು ಇರಿಸುತ್ತಾರೆ ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ.

ಕೇಂದ್ರದಲ್ಲಿ ಮೋದಿ ಸರ್ಕಾರ ಬಂದ ಬಳಿಕ ಅಂದರೆ 2014ರಿಂದ ಮಾವೋವಾದಿ ನಾಯಕರುಗಳನ್ನು ಎನ್‌ಕೌಂಟರ್ ನೆಪದಲ್ಲಿ ನೇರವಾಗಿ ಹತ್ಯೆ ಮಾಡಲಾಗುತ್ತಿದೆ. 2014ರಿಂದ ಈವರೆಗೆ ಒಟ್ಟು 2,089ಕ್ಕೂ ಹೆಚ್ಚು ಮಾವೋವಾದಿಗಳನ್ನು ಎನ್‌ಕೌಂಟರ್‌ಗಳಲ್ಲಿ ಹತ್ಯೆ ಮಾಡಲಾಗಿದೆ. ಆದರೆ ಮಾವೋವಾದಿ ನಾಯಕರುಗಳು ಹೇಳುವಂತೆ 4 ಸಾವಿರಕ್ಕೂ ಅಧಿಕ ಮಂದಿಯನ್ನು ಭದ್ರತಾ ಪಡೆ ಹತ್ಯೆಗೈದಿದೆ, ಇದರಲ್ಲಿ ಆದಿವಾಸಿಗಳೂ ಸೇರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...