ವಿದೇಶಿ ವೈದ್ಯ ಎಂದು ಮ್ಯಾಟ್ರಿಮೋನಿಯಲ್ ಸೈಟ್‌ ಮೂಲಕ 22 ಮಹಿಳೆಯರಿಗೆ 4.5 ಕೋಟಿ ರೂ. ವಂಚನೆ

Date:

ತಾನು ಇಂಗ್ಲೆಂಡ್‌ ಮೂಲದ ಹೃದಯ ತಜ್ಞನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ಮ್ಯಾಟ್ರಿಮೋನಿಯಲ್ ಸೈಟ್‌ ಮೂಲಕ 22 ಮಹಿಳೆಯರಿಗೆ 4.5 ಕೋಟಿ ರೂ.ಗಳಿಗೂ ಹೆಚ್ಚು ಹಣ ವಂಚಿಸಿದ ಪ್ರಕರಣ ಗುಜರಾತ್‌ನಲ್ಲಿ ಬೆಳಕಿಗೆ ಬಂದಿದೆ.

ವಂಚಕನಿಂದ ಅಹಮದಾಬಾದ್‌ನ ಚರ್ಮರೋಗ ತಜ್ಞ ಮಹಿಳೆಯೊಬ್ಬರು 18 ಲಕ್ಷ ರೂ. ಕಳೆದುಕೊಂಡು ಮಹಿಳಾ ಸಹಾಯವಾಣಿಯನ್ನು ಸಂಪರ್ಕಿಸಿದ ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಭೇಟಿಯಾದ ನಂತರ ತನ್ನ ಹೆಸರು ಡಾ. ದಿಲೀಪ್ ಕುಮಾರ್, ಬ್ರಿಟನ್‌ನಲ್ಲಿ ಹೃದಯ ತಜ್ಞನಾಗಿದ್ದೇನೆ ಎಂದು ಮಹಿಳೆಗೆ ವಂಚಕ ಹೇಳಿಕೊಂಡಿದ್ದ.

ಮಹಿಳೆಯ ದೂರಿನ ನಂತರ ಪೊಲೀಸರು ತನಿಖೆಯ ಜಾಡು ಹಿಡಿದಾಗ ಹಲವು ಮಹಿಳೆಯರನ್ನು ಇದೇ ರೀತಿ ನಂಬಿಸಿ ವಂಚಿಸಿದ್ದ. ಮೋಸಕ್ಕೊಳಗಾದ ಚರ್ಮರೋಗ ತಜ್ಞರು ಆರಂಭದಲ್ಲಿ ವಂಚನೆಯ ಬಲೆಗೆ ಬಿದ್ದಿರುವುದನ್ನು ಒಪ್ಪಿಕೊಳ್ಳಲು ನಿರಾಕರಿಸಿದರು. ಪೊಲೀಸರು ಹಲವು ಪ್ರಕರಣಗಳ ಬಗ್ಗೆ ಹೇಳಿದಾಗ ಸತ್ಯವನ್ನು ತಿಳಿದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಯು ಸಾಮಾಜಿಕ ಮಾಧ್ಯಮಗಳು ಮತ್ತು ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗಳಲ್ಲಿ ತನ್ನ ಪ್ರೊಫೈಲ್‌ಗಳನ್ನು ರಚಿಸುವ ಮೂಲಕ ಸಾಮಾನ್ಯವಾಗಿ 30 ರಿಂದ 40 ವರ್ಷದೊಳಗಿನ ಮಹಿಳೆಯರಿಗೆ ವಿವಾಹವಾಗುವುದಕ್ಕೆ ವಧುವನ್ನು ಹುಡುಕ್ಕುತ್ತಿರುವುದಾಗಿ ಹೇಳಿಕೊಂಡು ನಂಬಿಸುತ್ತಿದ್ದ.

ಈ ಸುದ್ದಿ ಓದಿದ್ದೀರಾ? ಭಾರತದ ವಿಷಪೂರಿತ ಕೆಮ್ಮಿನ ಸಿರಪ್‌ ಮಾರುಕಟ್ಟೆಗೆ ಬರಲು ಲಂಚ ನೀಡಿಕೆ: ಉಜ್ಬೇಕಿಸ್ತಾನ್

ಮಹಿಳೆಯರ ನಂಬಿಕೆ ಗಳಿಸಿದ ನಂತರ ಅವರಿಂದ ಹಣವನ್ನು ಕೇಳುತ್ತಿದ್ದ. ವಂಚಕ ವೈದ್ಯನು ವೈದ್ಯಕೀಯವಾಗಿ ತಾನು ಸಂಕಷ್ಟದಲ್ಲಿದ್ದೇನೆ, ದುಬಾರಿ ಉಡುಗೊರೆ, ವೈದ್ಯಕೀಯ ಸಲಕರಣೆಗಳ ಖರೀದಿ ಮುಂತಾದ ಕಾರಣಗಳನ್ನು ನೀಡಿ ಮಹಿಳೆಯರಿಂದ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದ. ಮೋಸ ಹೋಗಿದ್ದ ಹಲವು ಮಹಿಳೆಯರು ಆರಂಭದಲ್ಲಿ ದೂರು ನೀಡಲು ಹಿಂದೇಟು ಹಾಕಿದ್ದರು. ಸಾಕಷ್ಟು ಮನವೊಲಿಕೆಯ ನಂತರ, ಅವರು ವಂಚನೆಗೊಳಗಾಗಿರುವ ಬಗ್ಗೆ ತಿಳಿಸಿದರು.

ನಕಲಿ ಹೃದಯತಜ್ಞನ ಬಲೆಗೆ ಇನ್ನು ಹಲವು ಮಹಿಳೆಯರು ಬಲಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಇವರೆಲ್ಲ ಪೊಲೀಸರನ್ನು ಸಂಪರ್ಕಿಸಲು ಭಯಪಡುತ್ತಿದ್ದಾರೆ. ಈ ಘಟನೆಯ ನಂತರ ಆನ್‌ಲೈನ್‌ನಲ್ಲಿ ವ್ಯಕ್ತಿಗಳೊಂದಿಗೆ ಸಂವಹನ ನಡೆಸುವಾಗ ಜಾಗರೂಕತೆ ಮತ್ತು ಎಚ್ಚರಿಕೆಯಿಂದ ಇರಬೇಕೆಂದು ಪೊಲೀಸರು ತಿಳಿಸಿದ್ದಾರೆ. ವಂಚಕನ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...