ಎರಡನೇ ಪತಿಯಿಂದ ಇಬ್ಬರು ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ; ಪತ್ನಿ ದೂರಿನ ಬಳಿಕ ಕಾಮುಕನ ಬಂಧನ

Date:

ತನ್ನ ಮಲಮಕ್ಕಳ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ತನ್ನ ಎರಡನೆ ಪತಿ ತನ್ನ ಎರಡು ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ದೂರು ದಾಖಲಿಸಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮಹಿಳೆ ಗಾಜಿಯಾಬಾದ್‌ನ ಕವಿನಗರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತನ್ನ ಎರಡನೇ ಪತಿ ಆರು ತಿಂಗಳ ಹಿಂದೆ ತನ್ನ ಅಪ್ರಾಪ್ತ ಮಲಮಕ್ಕಳಿಬ್ಬರಿಗೂ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾಳೆ.

ಇದನ್ನು ಓದಿದ್ದೀರಾ? ಅತ್ಯಾಚಾರ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬುಧವಾರದಂದು ತನ್ನ ಪತಿ ತನ್ನ 14 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗುತ್ತಿರುವುದನ್ನು ತಾನು ನೋಡಿದ ಬಳಿಕ ಮಹಿಳೆಗೆ ತನ್ನ ಮಕ್ಕಳ ಮೇಲೆ ನಿರಂತರ ಅತ್ಯಾಚಾರ ನಡೆಯುತ್ತಿರುವುದು ತಿಳಿದುಬಂದಿದೆ” ಎಂದು ಸಹಾಯಕ ಪೊಲೀಸ್ ಆಯುಕ್ತ (ಕವಿನಗರ) ಅಭಿಷೇಕ್ ಶ್ರೀವಾಸ್ತವ್ ಹೇಳಿದ್ದಾರೆ.

“ತನ್ನ ಮಲತಂದೆ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆಯ 16 ವರ್ಷದ ಮಗಳು ಕೂಡಾ ಆರೋಪಿಸಿದ್ದಾಳೆ. ತಮ್ಮ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಯಾರಿಗಾದರು ಹೇಳಿದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿಯು ಹೆಣ್ಣು ಮಕ್ಕಳಿಗೆ ಬೆದರಿಕೆ ಹಾಕಿದ್ದಾನೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಅತ್ಯಾಚಾರಗೈದು ಮಹಿಳೆಯನ್ನು ಎಸೆದು ಹೋದ ವಿಕೃತ ಕಾಮುಕರು

ತನ್ನ ಪತಿಗೆ ತನ್ನ ಅತ್ತೆಯೇ ಬೆಂಬಲ ನೀಡುತ್ತಿದ್ದರು. ಅತ್ತೆಯ ಸಹಾಯದಿಂದ ಇಬ್ಬರು ಹೆಣ್ಣು ಮಕ್ಕಳ ಮೇಲೆ ತನ್ನ ಪತಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಶ್ರೀವಾಸ್ತವ್ ಹೇಳಿದರು.

ದೂರುದಾರ ಮಹಿಳೆ ತನ್ನ ಮೊದಲ ಪತಿಯಿಂದ ವಿಚ್ಛೇದನ ಪಡೆದ ನಂತರ ಆರೋಪಿಯನ್ನು ಮದುವೆಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...