ಮದುವೆಯಾಗಲ್ಲ ಎಂದಿದ್ದಕ್ಕೆ ಗೆಳತಿ ಮನೆಗೆ ಬೆಂಕಿ ಇಟ್ಟ ಯುವಕ

Date:

ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವಕನೊಬ್ಬ ತನ್ನ ಗೆಳತಿಯ ಮನೆಗೆ ಬೆಂಕಿ ಹಚ್ಚಿರುವ ಘಟನೆ ಒಡಿಶಾದ ಭದ್ರಕ್ ಜಿಲ್ಲೆಯ ಆನಂದಪುರದಲ್ಲಿ ನಡೆದಿದೆ. ಆರೋಪಿಯನ್ನು ಪಕ್ಕದ ಗ್ರಾಮ ವಿದ್ಯಾಧರಪುರದ ನಿವಾಸಿ ಜ್ಯೂತಿ ರಂಜನ್‌ ದಾಸ್ ಎಂದು ಗುರುತಿಸಲಾಗಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಆನಂದಪುರದ ಗ್ರಾಮದ ಯುವತಿ ಮತ್ತು ರಂಜನ್ ದಾಸ್‌ ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. ಆದರೆ, ತನ್ನನ್ನು ಮದುವೆಯಾಗುವಂತೆ ರಂಜನ್ ಯುವತಿಯ ಬೆನ್ನುಬಿದ್ದಿದ್ದ. ನಿರಂತರವಾಗಿ ಒತ್ತಡ ಹಾಕುತ್ತಿದ್ದ. ಆತನ ಕಿರುಕುಳದಿಂದ ಬೇಸತ್ತಿದ್ದ ಯುವತಿ ಪೊಲೀಸರಿಗೆ ದೂರು ನೀಡಿದ್ದರು ಎಂದು ವರದಿಯಾಗಿದೆ.

ತನ್ನ ವಿರುದ್ಧ ದೂರು ನೀಡಿದ್ದಕ್ಕೆ ಯುವತಿಗೆ ರಂಜನ್ ಕೊಲೆ ಬೆದರಿಕೆ ಹಾಕಿದ್ದ. ಕೊನೆಯದಾಗಿ ಭೇಟಿಯಾಗುವಂತೆ ಒತ್ತಾಯಿಸಿದ್ದ. ಆತನನ್ನು ಭೇಟಿಯಾಗಲು ಯುವತಿ ನಿರಾಕರಿಸಿದ್ದಾರೆ. ಇದರಿಂದ ಕುಪಿತಗೊಂಡ ರಂಜನ್, ಯುವತಿಯ ಮನೆಗೆ ಬೆಂಕಿ ಹಚ್ಚಿದ್ದಾನೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಕಿಯು ಇಡೀ ಪ್ರದೇಶವನ್ನು ಆವರಿಸಿಕೊಂಡಿದ್ದು, ಸುಮಾರು ಐದು ಶೆಟ್‌ಗಳನ್ನು ಸುಟ್ಟುಹೋಗಿವೆ. ಘಟನೆಯಲ್ಲಿ 15 ಲಕ್ಷ ರೂ. ಮೌಲ್ಯದ ಆಸ್ತಿ ನಾಶವಾಗಿದೆ ಎಂದು ವರದಿಯಾಗಿದೆ.

ಘಟನೆ ಸಂಬಂಧ ಧಾಮ್‌ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿ ಯುವಕ ಪರಾರಿಯಾಗಿದ್ದು, ಆತನಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...