ಮದುವೆಯಾಗಲು ನಿರಾಕರಿಸಿದ ಯುವತಿಗೆ ಗುಂಡಿಕ್ಕಿ ಕೊಲೆ: ತಾನೂ ಆತ್ಮಹತ್ಯೆಗೆ ಶರಣಾದ ಯುವಕ

Date:

ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಯುವಕನೋರ್ವ ಯುವತಿಗೆ ಗುಂಡಿಕ್ಕಿ ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ನಡೆದಿದೆ. ಖಾಸಗಿ ಅತಿಥಿಗೃಹದಲ್ಲಿ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ.

ಆರೋಪಿಯನ್ನು ಜಾಕಿ ನಾಟ್ ಎಂದು ಗುರುತಿಸಲಾಗಿದ್ದು, ಕಾಜಲ್ ಕುಮಾರಿ ಎಂಬ ಯುವತಿಯನ್ನು ಕೊಂದಿದ್ದಾನೆ. ಇಬ್ಬರೂ ಬೇರೆ ಬೇರೆ ಜಾತಿಗೆ ಸೇರಿದವರು ಎಂಬ ಕಾರಣಕ್ಕೆ ಕಾಜಲ್ ಮದುವೆಯಾಗಲು ನಿರಾಕರಿಸಿದ್ದಳು. ಆದರೆ ಯುವಕ ಆಕೆಯನ್ನು ಕೊಂದಿದ್ದಾನೆ ಎಂದು ತಾಯಿ ದೂರಿದ್ದಾರೆ.

ಇದನ್ನು ಓದಿದ್ದೀರಾ? ಹಾಸನ | ಮದುವೆಗೆ ನಿರಾಕರಿಸಿದ ಪ್ರೇಯಸಿ; ವಿಷಸೇವಿಸಿ ಯುವಕ ಆತ್ಮಹತ್ಯೆ 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಜಲ್ ಕುಮಾರಿ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಆಕೆಯ ಸಾವಿಗೆ ಕೆಲವು ಗಂಟೆಗಳ ಮೊದಲು, ಕಾಜಲ್‌ ಮಾರುಕಟ್ಟೆಗೆ ಹೋಗಿದ್ದಳು. ನಂತರ ಹೋಟೆಲ್ ಒಂದರಲ್ಲಿ ನನ್ನ ಮಗಳ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲಾಗಿದೆ ಎಂದು ಬಲ್ಲಿಯಾ ಮೂಲದ ವ್ಯಕ್ತಿಯೊಬ್ಬರು ನನಗೆ ತಿಳಿಸಿದರು” ಎಂದು ತಾಯಿ ದೂರಿನಲ್ಲಿ ಹೇಳಿದ್ದಾರೆ.

“ಅವಳು ನನ್ನವಳಾಗಲು ಸಾಧ್ಯವಾಗದಿದ್ದರೆ, ಬೇರೆ ಯಾರೊಂದಿಗೂ ಇರಬಾರದು ಎಂದು ಆತ ಹೇಳುತ್ತಿದ್ದ. ಆತನೇ ಕೊಂದಿದ್ದಾನೆ” ಎಂದು ತಾಯಿ ಆರೋಪಿಸಿದ್ದಾರೆ. ಆದರೆ ಜಾಕಿಯ ತಂದೆ ಪರಾಸ್ ನಾಟ್ ಮಾತ್ರ ಇದರ ಹಿಂದೆ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ.

ಉಪ-ವಿಭಾಗೀಯ ಪೊಲೀಸ್ ಅಧಿಕಾರಿ (SDPO) ದಿಲೀಪ್ ಕುಮಾರ್ ಸ್ಥಳಕ್ಕೆ ತಲುಪಿ ಸ್ಥಳ ಪರಿಶೀಲಿಸಿದ್ದಾರೆ. ಪೊಲೀಸರು ಪಿಸ್ತೂಲು ಮತ್ತು ಶೆಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಹೇಳಲಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ, ಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...