ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

Date:

30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ ಬಿಂಬಿಸಿಕೊಂಡು, ಏಳು ಮಂದಿ ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಪ್ರಕರಣ ಮಧ್ಯ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಆದೇಶದಂತೆ ಒಂಬತ್ತು ಮಂದಿಯ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು,7 ದಿನಗಳ ಒಳಗಾಗಿ ವರದಿ ನೀಡುವಂತೆ ಆದೇಶಿಸಲಾಗಿದೆ.

ಎಸ್‌ಸಿ/ಎಸ್‌ಟಿ ವಿದ್ಯಾರ್ಥಿ ವೇತನಕ್ಕೆ ಅರ್ಹರಾದ ಬಾಲಕಿಯರಿಗೆ ಆರೋಪಿ ಬೃಜೇಶ್ ಪ್ರಜಾಪತಿ ಬಲೆ ಬೀಸುತ್ತಿದ್ದ ಎಂದು ಹೇಳಲಾಗಿದೆ. ಧ್ವನಿ ಬದಲಾವಣೆ ಆ್ಯಪ್ ಬಳಸಿಕೊಂಡು ತಾನು ಶಿಕ್ಷಕಿ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಸ್ಕಾಲರ್ ಶಿಪ್ ಅರ್ಜಿಗಳ ಸಮಸ್ಯೆ ಬಗೆಹರಿಸುವ ಸಲುವಾಗಿ ತನ್ನನ್ನು ಭೇಟಿ ಮಾಡುವಂತೆ ಹೇಳುತ್ತಿದ್ದ. ಈ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ ಅವರ ಮೊಬೈಲ್ ಮೊಬೈಲ್ ಗಳನ್ನು ಕಸಿದುಕೊಂಡು ಅವರು ನೆರವಿಗಾಗಿ ಕರೆ ಮಾಡದಂತೆ ತಡೆಯುತ್ತಿದ್ದ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಣೆಯಾದ ಮಹಿಳೆಯರು ಮತ್ತು ಸಾಮಾಜಿಕ ವಿಡಂಬನೆ

ಆರೋಪಿಯಿಂದ ಇದುವರೆಗೆ 16 ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೇವಲ ನಾಲ್ಕು ಮಂದಿಯಿಂದ ಮಾತ್ರ ಅಧಿಕೃತ ದೂರು ಬಂದಿದೆ. ಒಬ್ಬಾಕೆ ಯುವತಿ ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ಈತನನ್ನು ಭೇಟಿ ಮಾಡಿದ್ದು, ಇಬ್ಬರ ಮೇಲೂ ಅತ್ಯಾಚಾರ ಎಸಗಿದ್ದಾನೆ ಎಂದು ಸಿಂಧಿ ಎಸ್ಪಿ ರವೀಂದ್ರ ವರ್ಮಾ ತಿಳಿಸಿದ್ದಾರೆ. ಇತರ ಆರು ಮಂದಿ ಕಾಲೇಜು ವಿದ್ಯಾರ್ಥಿನಿಯರಾಗಿದ್ದು, 19 ರಿಂದ 20 ವರ್ಷದವರು.

ನಿರುದ್ಯೋಗಿಯಾಗಿರುವ ಪ್ರಜಾಪತಿಯ ಈ ದಂಧೆ ಈ ವರ್ಷದ ಏಪ್ರಿಲ್ ನಿಂದ ಆರಂಭವಾಗಿದ್ದರೂ, ಈತನ ವಿರುದ್ಧ ದೂರು ನೀಡಲು ವಿದ್ಯಾರ್ಥಿನಿಯರು ಹೆದರಿದ್ದರು. ಮೇ 16ರಂದು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಧೈರ್ಯದಿಂದ ಮಜೂಲಿ ಠಾಣೆಗೆ ಬಂದು ದೂರು ನೀಡಿದ್ದಾಳೆ ಎಂದು ಪೊಲೀಸರು ವಿವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...