ಎರಡುವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; ಆರೋಪಿಯ ಎನ್‌ಕೌಂಟರ್‌

Date:

ಉತ್ತರ ಪ್ರದೇಶದ ಲಕ್ನೋ ಮೆಟ್ರೋ ನಿಲ್ದಾಣದ ಬಳಿ ಎರಡೂವರೆ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಎನ್‌ಕೌಂಟರ್ ಮಾಡಲಾಗಿದೆ. ಆರೋಪಿಯನ್ನು 26 ವರ್ಷದ ದೀಪಕ್ ವರ್ಮಾ ಎಂದು ಗುರುತಿಸಲಾಗಿದೆ.

ಈ ಹಿಂದೆ ಆರೋಪಿ ದೀಪಕ್ ವರ್ಮಾ ಬಗ್ಗೆ ಸುಳಿವು ನೀಡಿದರೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದರು. ಶುಕ್ರವಾರ ಮುಂಜಾನೆ ಅಲಂಬಾಗ್ ಪ್ರದೇಶದಲ್ಲಿ ಪತ್ತೆಯಾದ ಆರೋಪಿಯ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ(ಕೇಂದ್ರ ವಲಯ) ಆಶಿಶ್ ಶ್ರೀವಾಸ್ತವ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಲೈಂಗಿಕ ದೌರ್ಜನ್ಯ ಆರೋಪಿ ‘ಎನ್‌ಕೌಂಟರ್’; ಘಟನೆ ಬಗ್ಗೆ ಸಿಐಡಿ ತನಿಖೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಕ್ನೋ ಮೆಟ್ರೋ ನಿಲ್ದಾಣದ ಅಡಿಯಲ್ಲಿ ವಾಸಿಸುವ ದಂಪತಿಗಳು ಗುರುವಾರ ತಮ್ಮ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂದು ಅಲಂಬಾಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆಯ ತನಿಖೆಗಾಗಿ ಪೊಲೀಸರು ಐದು ತಂಡಗಳನ್ನು ರಚಿಸಿದ್ದರು. ಜೊತೆಗೆ ಆರೋಪಿಯ ಸುಳಿವು ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದರು.

ಮೆಟ್ರೋ ನಿಲ್ದಾಣದಲ್ಲಿ ಅಳವಡಿಸಲಾದ ಸಿಸಿಟಿವಿ ಪರಿಶೀಲಿಸಲಾಗಿದ್ದು ಗುರುವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬಿಳಿ ಸ್ಕೂಟರ್‌ನಲ್ಲಿ ಒಬ್ಬ ವ್ಯಕ್ತಿ ಮಗುವನ್ನು ಬಲವಂತವಾಗಿ ಮೆಟ್ರೋ ನಿಲ್ದಾಣದ ಲಿಫ್ಟ್ ಹಿಂದೆ ಕರೆದುಕೊಂಡು ಹೋಗಿರುವುದು ಕಂಡು ಬಂದಿದೆ ಎಂದು ವರದಿಯಾಗಿದೆ.

“ನಾವು ಸ್ಕೂಟರ್ ನಂಬರ್ ಪರಿಶೀಲಿಸಿದೆವು. ಈ ವೇಳೆ ಆರೋಪಿಯ ಐಶ್‌ಬಾಗ್ ಪ್ರದೇಶದ ನಿವಾಸಿ ದೀಪಕ್ ವರ್ಮಾ ಎಂದು ತಿಳಿದುಬಂದಿದೆ. ಗುರುವಾರ ತಡರಾತ್ರಿ, ಆರೋಪಿ ಪರಾರಿಯಾಗುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಒಂದು ತಂಡ ಸ್ಥಳಕ್ಕೆ ತಲುಪಿ ಆತನನ್ನು ತಡೆಯುವ ಪ್ರಯತ್ನ ಮಾಡಿದೆ. ಆದರೆ ಆರೋಪಿ ಗುಂಡು ಹಾರಿಸಿದ್ದಾನೆ. ಈ ವೇಳೆ ಎನ್‌ಕೌಂಟರ್‌ ನಡೆದಿದ್ದು, ಗುಂಡಿನ ದಾಳಿಯಲ್ಲಿ ವರ್ಮಾ ಗಂಭೀರವಾಗಿ ಗಾಯಗೊಂಡಿದ್ದನು. ಲೋಕಬಂಧು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾನೆ” ಎಂದು ಪೊಲೀಸ್ ಅಧಿಕಾರಿ ಆಶಿಶ್ ಶ್ರೀವಾಸ್ತವ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಅತ್ಯಾಚಾರಕ್ಕೊಳಗಾದ 13 ವರ್ಷದ ಬಾಲಕಿ ಗರ್ಭಿಣಿ : ಆಸ್ಪತ್ರೆಯಲ್ಲಿ ಸಾವು

ಆರೋಪಿ ನೀರು ಮಾರಾಟ ಮಾಡುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಇನ್ನು ಸದ್ಯ ಬಾಲಕಿ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

2016ರಿಂದ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಅಧಿಕವಾಗಿದೆ. ಅದರಲ್ಲಿಯೂ ಪ್ರಮುಖವಾಗಿ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಗರ್ಭಪಾತ, ಅತ್ಯಾಚಾರ-ಕೊಲೆ – ಇಂತಹ ಅಪರಾಧಗಳು ಹೆಚ್ಚಾಗುತ್ತಿದೆ. ಎನ್‌ಜಿಒ ಸಿಆರ್‌ವೈ ವರದಿಯ ಪ್ರಕಾರ ದೇಶದಲ್ಲಿ 2016ರಿಂದ 2022ರ ನಡುವೆ ಅಪ್ರಾಪ್ತರ ಮೇಲೆ ಅತ್ಯಾಚಾರ ಪ್ರಕರಣಗಳು ಸುಮಾರು ಶೇಕಡ 96ರಷ್ಟು ಏರಿಕೆಯಾಗಿದೆ. 2020 ಹೊರತುಪಡಿಸಿ 2016ರಿಂದ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. 2021ರಿಂದ 2022ರ ನಡುವೆ ಶೇಕಡ 6.9ರಷ್ಟು ಪ್ರಕರಣಗಳು ಅಧಿಕವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...