ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

Date:

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌ ಅವರ ಗುರುಗ್ರಾಮದಲ್ಲಿರುವ ನಿವಾಸದ ಹೊರಗೆ ಅಪರಿಚಿತರು ಕಳೆದ ವಾರ ಗುಂಡಿನ ದಾಳಿ ನಡೆಸಿದ್ದು, ಮೂವರಲ್ಲಿ ಒಬ್ಬ ಆರೋಪಿಯನ್ನು ಇಂದು(ಆಗಸ್ಟ್ 22) ಬೆಳಿಗ್ಗೆ ಹರಿಯಾಣದ ಫರಿದಾಬಾದ್‌ನಲ್ಲಿ ಎನ್‌ಕೌಂಟರ್ ನಡೆಸಿ ಪೊಲೀಸರು ಬಂಧಿಸಿದ್ದಾರೆ.

ಫರಿದಾಬಾದ್‌ನ ಜವಾಹರ್ ಕಾಲೋನಿಯ ನಿವಾಸಿ ಇಶಾಂತ್ ಅಲಿಯಾಸ್ ಇಶು ಗಾಂಧಿ ಎಂದು ಗುರುತಿಸಲಾದ ಆರೋಪಿ ಫರಿದಾಬಾದ್ ಅಪರಾಧ ವಿಭಾಗದ ತಂಡದ ಮೇಲೆ ಮೊದಲು ಗುಂಡಿನ ದಾಳಿ ನಡೆಸಿದ್ದಾನೆ. ಅರ್ಧ ಡಜನ್‌ಗೂ ಹೆಚ್ಚು ಸುತ್ತು ಗುಂಡು ಹಾರಿಸಿದ್ದಾನೆ ಎಂದು ಹೇಳಲಾಗಿದೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಯಾದವ್ ನಿವಾಸದ ಹೊರಗೆ ಗುಂಡಿನ ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗಸ್ಟ್ 17ರಂದು ಬೆಳಿಗ್ಗೆ ಸುಮಾರು 5.30ರಿಂದ 6 ಗಂಟೆಯ ನಡುವೆ ಗುಂಡಿನ ದಾಳಿ ನಡೆದಿದೆ. ಬೈಕ್‌ನಲ್ಲಿ ಬಂದ ಮೂವರು ಸೆಕ್ಟರ್ 57ರಲ್ಲಿರುವ ಯಾದವ್ ಮನೆಯ ಮೇಲೆ 25ಕ್ಕೂ ಅಧಿಕ ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಈ ವೇಳೆ ಯಾದವ್ ಮನೆಯಲ್ಲಿ ಇರಲಿಲ್ಲ, ಯಾವುದೋ ಕೆಲಸಕ್ಕಾಗಿ ಹರಿಯಾಣದ ಹೊರಗೆ ಹೋಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಮನೆಯಲ್ಲಿ ಕುಟುಂಬಸ್ಥರು ಇದ್ದರು. ಆದರೆ ಯಾರಿಗೂ ಹಾನಿಯಾಗಿಲ್ಲ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮೂವರು ವ್ಯಕ್ತಿಗಳು ಮನೆಯ ಹೊರಗೆ ಬೈಕ್‌ನಲ್ಲಿ ಬರುತ್ತಿರುವುದು ಕಂಡುಬಂದಿದೆ. ಕೆಲವು ನಿಮಿಷಗಳ ನಂತರ ಈ ಪೈಕಿ ಇಬ್ಬರು ಯೂಟ್ಯೂಬರ್‌ನ ಮನೆ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕೆಲವು ಸಮಯ ನಿಲ್ಲಿಸಿ ಮತ್ತೆ ದಾಳಿ ಮುಂದುವರೆಸಿರುವುದು, ಬಳಿಕ ಸ್ಥಳದಿಂದ ಪರಾರಿಯಾಗಿರುವುದು ಕಂಡುಬಂದಿದೆ.

ಘಟನೆಯ ಕೆಲವು ಗಂಟೆಗಳ ನಂತರ, ಕುಖ್ಯಾತ ಹಿಮಾಂಶು ಭೌ ಗ್ಯಾಂಗ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಗುಂಡಿನ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಯೂಟ್ಯೂಬರ್ ಜೂಜಾಟವನ್ನು ಉತ್ತೇಜಿಸುತ್ತಿದ್ದಾರೆ ಎಂಬ ಕಾರಣಕ್ಕೆ ಈ ದಾಳಿ ನಡೆಸಿರುವುದಾಗಿ ಹೇಳಿದೆ. ಪೋರ್ಚುಗಲ್ ಮೂಲದ ಪರಾರಿಯಾಗಿರುವ ದರೋಡೆಕೋರ ಹಿಮಾಂಶು ಭೌ ನೇತೃತ್ವದ ಗ್ಯಾಂಗ್ ಇದು ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಹಾವಿನ ವಿಷ ಪ್ರಕರಣ | ಬಲಪಂಥೀಯ ಯೂಟ್ಯೂಬರ್ ಎಲ್ವಿಶ್ ಯಾದವ್ ಬಂಧನ

ಇನ್ನು ವಿದೇಶಿಯರನ್ನು ಆಹ್ವಾನಿಸಿ, ವಿಷಕಾರಿ ಹಾವುಗಳ ವಿಷವನ್ನು ಬಳಸಿಕೊಂಡು ರೇವ್ ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಆರೋಪದಲ್ಲಿ ಬಿಗ್‌ಬಾಸ್ ಸ್ಪರ್ಧಿ, ಯೂಟ್ಯೂಬರ್ ಎಲ್ವಿಶ್ ಯಾದವ್‌ ಅವರನ್ನು ನೋಯ್ಡಾ ಪೊಲೀಸರು ಕಳೆದ ವರ್ಷ ಮಾರ್ಚ್‌ನಲ್ಲಿ ಬಂಧಿಸಿದ್ದರು. ಸದ್ಯ ಎಲ್ವಿಶ್ ಜಾಮೀನು ಮೇಲೆ ಹೊರಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.

2023ರ ನವೆಂಬರ್‌ ತಿಂಗಳಲ್ಲಿ ನೋಯ್ಡಾದಲ್ಲಿ ಆಯೋಜನೆಗೊಂಡಿದ್ದ ರೇವ್ ಪಾರ್ಟಿಗೆ ದಾಳಿ ನಡೆಸಿ ನೋಯ್ಡಾ ಪೊಲೀಸರು ಐವರನ್ನು ಬಂಧಿಸಿದ್ದರು. ಈ ವೇಳೆ ಐದು ನಾಗರ ಹಾವು ಸೇರಿ ಒಟ್ಟಾಗಿ ಒಂಬತ್ತು ಹಾವುಗಳನ್ನು ಮತ್ತು ಹಾವಿನ ವಿಷವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದರು. ಅದು ಮಾತ್ರವಲ್ಲದೆ ಎಲ್ವಿಶ್ ಯಾದವ್ ಮತ್ತು ಅವರ ಸಹಚರರು ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...