ಮಣಿಪುರ | ಗುಂಡಿನ ಚಕಮಕಿ; 11 ಕುಕಿ ಬಂಡುಕೋರರ ಹತ್ಯೆ, ಸಿಆರ್‌ಪಿಎಫ್ ಯೋಧ ಹುತಾತ್ಮ

Date:

ಸೋಮವಾರ ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 11 ಕುಕಿ ಬಂಡುಕೋರರ ಹತ್ಯೆ ಮಾಡಲಾಗಿದೆ. ಈ ಸಂದರ್ಭದಲ್ಲೇ ಓರ್ವ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿರುವುದಾಗಿ ವರದಿಯಾಗಿದೆ.

ಬೊರೊಬೆಕ್ರಾ ಉಪವಿಭಾಗದ ಜಕುರಾಡೋರ್ ಕರೋಂಗ್‌ನಲ್ಲಿ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿಗೆ ಗಾಯಗಳಾಗಿವೆ. ಈ ಪೈಕಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಬೊರೊಬೆಕ್ರಾ ಪೊಲೀಸ್ ಠಾಣೆ ಮತ್ತು ಸಿಆರ್‌ಪಿಎಫ್ ಶಿಬಿರದ ಮೇಲೆ ಮಧ್ಯಾಹ್ನ 2.30 ರ ಸುಮಾರಿಗೆ ಬಂಡುಕೋರರು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವು ಬಂಡುಕೋರರು 100 ಮೀಟರ್ ದೂರದಲ್ಲಿರುವ ಜಕುರಾದೋರ್ ಕರೋಂಗ್ ಮಾರುಕಟ್ಟೆಗೆ ನುಗ್ಗಿ ಹಲವಾರು ಅಂಗಡಿಗಳನ್ನು ಸುಟ್ಟುಹಾಕಿದರು. ಕೆಲವು ಮನೆಗಳ ಮೇಲೆ ದಾಳಿ ಮಾಡಿದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಇಬ್ಬರು ಮಹಿಳೆಯರ ಹತ್ಯೆ

ಭದ್ರತಾ ಪಡೆಗಳು ಪ್ರತಿದಾಳಿ ನಡೆಸುತ್ತಿದ್ದಂತೆ, ಭಾರೀ ಗುಂಡಿನ ಚಕಮಕಿ ಪ್ರಾರಂಭವಾಯಿತು. ಈ ಗುಂಡಿನ ಚಕಮಕಿಯಲ್ಲಿ 11 ಮಂದಿ ಬಂಡುಕೋರರ ಹತ್ಯೆ ಮಾಡಲಾಗಿದೆ. ಒಂದು ಗಂಟೆಗೂ ಅಧಿಕ ಕಾಲ ಗುಂಡಿನ ಚಕಮಕಿ ನಡೆದಿದೆ ಅಧಿಕಾರಿಗಳು ಹೇಳಿದ್ದಾರೆ.

ಇನ್ನು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪರಿಹಾರ ಶಿಬಿರವಿದ್ದು, ಅಲ್ಲಿ ವಾಸಿಸುತ್ತಿದ್ದ ಐವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಐವರನ್ನು ಬಂಡುಕೋರರು ಅಪಹರಿಸಿದ್ದಾರೆಯೇ ಅಥವಾ ಗುಂಡಿನ ದಾಳಿಯಿಂದ ತಪ್ಪಿಸಿಕೊಳ್ಳಲು ಐವರು ತಲೆಮರೆಸಿಕೊಂಡಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಸದ್ಯ ಅವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಇತ್ತೀಚೆಗೆ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಓರ್ವ ಮಹಿಳೆಗೆ ಗುಂಡು ಹಾರಿಸಿ, ಅತ್ಯಾಚಾರ ಎಸಗಿ ಸುಟ್ಟು ಕೊಲ್ಲಲಾಗಿದೆ. ಇನ್ನೋರ್ವ ಮಹಿಳೆಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...