ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಒಂಬತ್ತು ಜನ ಸಾವು, ಹತ್ತು ಮಂದಿಗೆ ಗಾಯ

Date:

ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಮುಂದುವರಿದಿದೆ. ಖಮೆನ್‌ಲೋಕ್‌ನ ಹಳ್ಳಿಯೊಂದರ ಮೇಲೆ ಶಸ್ತ್ರಸಜ್ಜಿತ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಕನಿಷ್ಠ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದು, 10 ಮಂದಿ  ಗಾಯಗೊಂಡಿದ್ದಾರೆ.

ಇಂಫಾಲ್ ಪೂರ್ವ ಜಿಲ್ಲೆ ಮತ್ತು ಕಾಂಗ್ಪೋಕಿ ಜಿಲ್ಲೆಯ ಗಡಿಯಲ್ಲಿರುವ ಖಮೆಲೋಕ್ ಗ್ರಾಮವನ್ನು ಸುತ್ತುವರೆದ ಭಯೋತ್ಪಾದಕರು, ಮಂಗಳವಾರ ತಡ ರಾತ್ರಿ 1 ಗಂಟೆಯ ಸುಮಾರಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ದಾಳಿ ನಡೆಸಿದ್ದಾರೆ. ಹಿಂಸಾಚಾರದಲ್ಲಿ ಗಾಯಗೊಂಡವರನ್ನು ಇಂಫಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇತೀ ಪ್ರಾಬಲ್ಯದ ಇಂಫಾಲ್ ಪೂರ್ವ ಜಿಲ್ಲೆ ಮತ್ತು ಬುಡಕಟ್ಟು ಜನಾಂಗದ ಬಹುಸಂಖ್ಯಾತ ಕಾಂಗ್ಪೋಕ್ಪಿ ಜಿಲ್ಲೆಯ ಗಡಿಯಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಣಿಪುರದಲ್ಲಿ ಕುಕಿ ಮತ್ತು ಮೇತೀ ಸಮುದಾಯಗಳ ನಡುವೆ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರ ಇನ್ನೂ ನಿಂತಿಲ್ಲ. ಇದುವರೆಗೂ ನೂರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ.

ರಾಜ್ಯದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಸೇನೆ ಮತ್ತು ಅಸ್ಸಾಂ ರೈಫಲ್ಸ್‌ನ ಸುಮಾರು 10,000 ಯೋಧರನ್ನು ನಿಯೋಜಿಸಲಾಗಿದೆ. ಸರ್ಕಾರ ಮತ್ತು ಪೊಲೀಸ್ ಇಲಾಖೆ ಶಾಂತಿ ಕಾಪಾಡಲು ಕರ್ಫ್ಯೂ, ಮತ್ತು ಜೂನ್‌ 15ರವರೆಗೆ ಇಂಟರ್‌ನೆಟ್ ಸ್ಥಗಿತಗೊಳಿಸಿದರೂ ಉದ್ವಿಗ್ನ ಸ್ಥಿತಿ ಕಡಿಮೆಯಾಗಿಲ್ಲ.

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದ ಸ್ಥಳಾಂತರಗೊಂಡ 50,000ಕ್ಕೂ ಹೆಚ್ಚು ಜನರು, ರಾಜ್ಯಾದ್ಯಂತ 349 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಇದ್ದಾರೆ. 253 ಚರ್ಚ್‌ಗಳು ಮತ್ತು ಹಲವು ದೇವಸ್ಥಾನಗಳನ್ನು ಸುಟ್ಟು ಹಾಕಲಾಗಿದೆ ಎಂದು ವರದಿಗಳಿವೆ ಹೇಳಿದೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...