ಮಣಿಪುರದಲ್ಲಿ ಹೆಚ್ಚಾದ ಪ್ರತಿಭಟನೆ: 5 ದಿನ ಇಂಟರ್‌ನೆಟ್ ಸೇವೆ ಸ್ಥಗಿತ

Date:

ಮೈತೇಯಿ ಸಮುದಾಯದ ಅರಂಬಾಯಿ ತೆಂಗೋಲ್ ಸಂಘಟನೆಯ ನಾಯಕನ ಬಂಧನದ ವಿರುದ್ಧ ಮಣಿಪುರದಲ್ಲಿ ಪ್ರತಿಭಟನೆಗಳು ಹೆಚ್ಚಾದ ಹಿನ್ನೆಲೆ ರಾಜ್ಯದ ಐದು ಕಣಿವೆಯ ಜಿಲ್ಲೆಗಳ ಪ್ರಾದೇಶಿಕ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿಯಿಂದ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

ಶನಿವಾರ ರಾತ್ರಿ 11.45ರಿಂದ ಜಾರಿಗೆ ಬರುವಂತೆ 5 ದಿನಗಳವರೆಗೆ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ತೌಬಲ್, ಬಿಷ್ಣುಪುರ ಮತ್ತು ಕಕ್ಟಿಂಗ್ ಜಿಲ್ಲೆಗಳಲ್ಲಿ ವಿಎಸ್‌ಎಟಿ, ವಿಪಿಎನ್ ಸೇರಿದಂತೆ ಇಂಟರ್‌ನೆಟ್ ಹಾಗೂ ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಆದೇಶಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮೋದಿ ಶರಣಾಗಿದ್ದಾರೆ’ ಎಂಬ ರಾಹುಲ್ ಹೇಳಿಕೆಯು ಹಲವು ಪ್ರಶ್ನೆಗಳನ್ನು ಎತ್ತುತ್ತದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವು ಸಮಾಜ ವಿರೋಧಿ ಶಕ್ತಿಗಳು ಸಾಮಾಜಿಕ ಜಾಲತಾಣವನ್ನು ಬಳಸಿಕೊಂಡು ದ್ವೇಷ ಭಾಷಣ ಮತ್ತು ದ್ವೇಷದ ವೀಡಿಯೋಗಳನ್ನು ಪ್ರಸಾರ ಮಾಡಿ ಸಾರ್ವಜನಿಕರನ್ನು ಕೆರಳಿಸುವ ಶಂಕೆ ಹೆಚ್ಚಿದೆ. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಆದೇಶವನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಆಯುಕ್ತ ಎನ್.ಅಶೋಕ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನಾಕಾರರು ಮೈತೆಯಿ ಸ್ವಯಂಸೇವಕ ಗುಂಪು ಅರಂಬಾಯಿ ತೆಂಗೋಲ್‌ಗೆ ಸೇರಿದವರಾಗಿದ್ದು, ತಮ್ಮ ನಾಯಕನ ಬಿಡುಗಡೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ. ಅಲ್ಲದೇ ರಸ್ತೆಗಳಲ್ಲಿ ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಇದೇ ಗುಂಪು ಹಿಂದಿನ ಜನಾಂಗೀಯ ಹಿಂಸಾಚಾರದ ಸಮಯದಲ್ಲಿ ಕುಕಿ ಗ್ರಾಮಗಳ ಮೇಲೆ ದಾಳಿ ಮಾಡಿದ ಆರೋಪವನ್ನು ಕೂಡ ಹೊಂದಿದೆ.

ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಇಲ್ಲಿಯವರೆಗೆ 258 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 5,600 ಕ್ಕೂ ಹೆಚ್ಚು ಸರ್ಕಾರಿ ಶಸ್ತ್ರಾಸ್ತ್ರಗಳು ಮತ್ತು 6.5 ಲಕ್ಷ ಸುತ್ತು ಮದ್ದುಗುಂಡುಗಳನ್ನು ಲೂಟಿ ಮಾಡಲಾಗಿದೆ. 60,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು ಸಾವಿರಾರು ಜನರು ಇನ್ನೂ ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...