ಮಣಿಪುರದಲ್ಲಿ ಮತ್ತೆ ಉದ್ವಿಗ್ನತೆ: ಪ್ರತಿಭಟನಾಕಾರರು, ಭದ್ರತಾ ಪಡೆಯ ನಡುವೆ ಘರ್ಷಣೆ

Date:

ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ಭಾನುವಾರ ಮತ್ತೆ ಉದ್ವಿಗ್ನತೆ ಉಂಟಾಗಿದೆ. ರಾಜಭವನದ ಕಡೆಗೆ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಯು ಶೆಲ್‌ಗಳು ಮತ್ತು ಅಣಕು ಬಾಂಬ್‌ಗಳನ್ನು ಹಾರಿಸಿದ್ದಾರೆ. ಇದರಿಂದಾಗಿ ಪ್ರತಿಭಟನಾಕಾರರು, ಭದ್ರತಾ ಪಡೆಯ ನಡುವೆ ಘರ್ಷಣೆ ಉಂಟಾಗಿದೆ.

ಶಿರುಯಿ ಲಿಲಿ ಉತ್ಸವದ ವರದಿ ಮಾಡಲು ಉಖ್ರುಲ್‌ಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಾಧ್ಯಮ ತಂಡವನ್ನು ಮಾರ್ಗಮಧ್ಯೆ ಭದ್ರತಾ ಸಿಬ್ಬಂದಿಗಳು ತಡೆದಿದ್ದು, ವಾಹನದಲ್ಲಿ ಪ್ರದರ್ಶಿಸಲಾದ ‘ಮಣಿಪುರ ರಾಜ್ಯ ಸಾರಿಗೆ’ ಎಂಬ ಪದಗಳನ್ನು ಮರೆಮಾಡಲು ಸೂಚಿಸಿದ್ದಾರೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಮಣಿಪುರ: ಸ್ವಾತಂತ್ರ್ಯ ಹೋರಾಟಗಾರರ ಪತ್ನಿಯನ್ನು ಜೀವಂತವಾಗಿ ಸುಟ್ಟ ದುಷ್ಕರ್ಮಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆಗೆ ಸಂಬಂಧಿಸಿದಂತೆ ಕ್ಷಮೆಯಾಚಿಸದ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ವಿರುದ್ಧ ಮೈತೇಯಿ ಸಂಘಟನೆಯ ಮಣಿಪುರ ಸಮಗ್ರತೆಯ ಸಮನ್ವಯ ಸಮಿತಿ (COCOMI) ಪ್ರತಿಭಟನೆಗೆ ಕರೆ ನೀಡಿತು. ಇದು ಮಣಿಪುರದ ಗುರುತು, ಹೆಮ್ಮೆ ಮತ್ತು ಗೌರವವನ್ನು ದುರ್ಬಲಗೊಳಿಸುವ ಕೃತ್ಯವೆಂದು ಸಮಿತಿ ಆರೋಪಿಸಿದೆ. ಸರಣಿ ಪ್ರತಿಭಟನಾ ಕಾರ್ಯಕ್ರಮಗಳನ್ನು ಘೋಷಿಸಿದೆ.

ಈ ಅಭಿಯಾನದ ಭಾಗವಾಗಿ ಪ್ರತಿಭಟನಾಕಾರರು ಭಾನುವಾರ ರಾಜಭವನದ ಕಡೆಗೆ ಮೆರವಣಿಗೆ ನಡೆಸಿದರು. ಆದರೆ ಭದ್ರತಾ ಪಡೆಗಳು ಅವರನ್ನು ತಡೆದಿದ್ದು ಈ ವೇಳೆ ಘರ್ಷಣೆ ಉಂಟಾಗಿದೆ. ಘರ್ಷಣೆಯಲ್ಲಿ ಐವರು ಪ್ರತಿಭಟನಾಕಾರರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

“ಮಹಿಳೆಯರು ಸೇರಿದಂತೆ ಯಾವುದೇ ಶಸ್ತ್ರಾಸ್ತ್ರ ಹೊಂದಿರದ ಜನರ ಮೇಲೆ ಇಂತಹ ಆಕ್ರಮಣ ನಡೆಸುವುದು ತೀವ್ರ ಕಳವಳಕಾರಿ. ಇಂತಹ ಪ್ರತಿಕೂಲ ಕ್ರಮಗಳನ್ನು ಶೀಘ್ರವೇ ನಿಲ್ಲಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಇನ್ನು ಏಳು ಸದಸ್ಯರ COCOMI ನಿಯೋಗವು ಮಂಗಳವಾರ ಕೇಂದ್ರ ಗೃಹ ಸಚಿವಾಲಯದೊಂದಿಗೆ ಸಭೆ ನಡೆಸಲಿದೆ. ಇದಕ್ಕಾಗಿ ಸೋಮವಾರ ನವದೆಹಲಿಗೆ ತೆರಳಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...