ಮಣಿಪುರ | ಮುಂದುವರೆದ ಹಿಂಸಾಚಾರ; ಪೊಲೀಸ್‌ ಶಸ್ತ್ರಾಗಾರದಿಂದ ಶಸ್ತ್ರಗಳು ಲೂಟಿ, ಸೇನಾಧಿಕಾರಿ ಸಾವು

Date:

ಕಳೆದ ಮೂರು ತಿಂಗಳಿಂದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ಅಂತ್ಯ ಕಾಣುತ್ತಿಲ್ಲ. ಇಂದು (ಆಗಸ್ಟ್ 04) ಮತ್ತೆ ಭುಗಿಲೆದ್ದ ಗಲಭೆಯಲ್ಲಿ ಪೊಲೀಸ್‌ ಶಸ್ತ್ರಾಗಾರದಿಂದ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಗಲಭೆಕೋರರ ಗುಂಪು ಲೂಟಿ ಮಾಡಿದೆ. ರಾಜಧಾನಿ ಸನಿಹದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಸೇನಾಧಿಕಾರಿ ಮೃತಪಟ್ಟಿದ್ದಾರೆ.

ರಾಜಧಾನಿ ಇಂಫಾಲದಲ್ಲಿನ ಪೊಲೀಸ್‌ ಶಸ್ತ್ರಾಗಾರಕ್ಕೆ ನುಗ್ಗಿದ ಗುಂಪೊಂದು ಎಕೆ ಸರಣಿಯ ಬಂದೂಕುಗಳು, ವಿವಿಧ ಕ್ಯಾಲಿಬರ್‌ಗಳ 19 ಸಾವಿರಕ್ಕೂ ಹೆಚ್ಚಿನ ಸುತ್ತುಗಳ ಗುಂಡುಗಳು, ಘಾತಕ್‌ ಸರಣಿಯ ಬಂದೂಕುಗಳು, ಹಲವು ಪಿಸ್ತೂಲುಗಳು, 25 ಗುಂಡು ನಿರೋಧಕ ಜಾಕೆಟ್‌ಗಳು, 125 ಹ್ಯಾಂಡ್‌ ಗ್ರೆನೇಡ್‌ಗಳು ಸೇರಿದಂತೆ ಹಲವು ಶಸ್ತ್ರಗಳನ್ನು ಲೂಟಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಪೊಲೀಸರು ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ಗುಂಡು ಹಾರಿಸುವ ಹಾಗೂ ಗಲಭೆ ಘಟನೆಗಳು ಕಡಿಮೆ ನಡೆದಿವೆ. ಪರಿಸ್ಥಿತಿ ಉದ್ವಿಗ್ನವಾಗಿರುವುದರಿಂದ ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಸಂಪೂರ್ಣ ಕರ್ಫ್ಯೂ ವಿಧಿಸಲಾಗಿದೆ. ಪೂರ್ವ ಮತ್ತು ಪಶ್ಚಿಮ ಇಂಫಾಲ್ ಜಿಲ್ಲೆಗಳಲ್ಲಿ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸುಮ್ಮನಿರದಿದ್ದರೆ ನಿಮ್ಮ ಮನೆಗಳಿಗೆ ಇಡಿ ಕಳಿಸಬೇಕಾಗುತ್ತದೆ: ವಿಪಕ್ಷ ಸದಸ್ಯರಿಗೆ ಕೇಂದ್ರ ಸಚಿವೆ ಎಚ್ಚರಿಕೆ

ಆದಾಗ್ಯೂ, ರಾಜ್ಯ ಸರ್ಕಾರ ಪೂರ್ವ ಮತ್ತು ಪಶ್ಚಿಮ ಇಂಫಾಲ್ ಜಿಲ್ಲೆಗಳಲ್ಲಿ ಕರ್ಫ್ಯೂವನ್ನು ಬೆಳಗ್ಗೆ 5 ರಿಂದ ಮಧ್ಯಾಹ್ನ 12ರವರೆಗೆ ಸಡಿಲಗೊಳಿಸಿದೆ. ಇದರಿಂದ ಸಾಮಾನ್ಯ ಜನತೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅನುಕೂಲವಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.  

ಪಶ್ಚಿಮ ಇಂಫಾಲ್ ಜಿಲ್ಲೆಯ ಸೆಂಜಮ್ ಚಿರಾಂಗ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮಣಿಪುರ ರೈಫಲ್ಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಗುರುವಾರ(ಆಗಸ್ಟ್ 4), ಬಿಷ್ಣುಪುರ್ ಜಿಲ್ಲೆಯ ಕಾಂಗ್ವೈ ಮತ್ತು ಫೌಗಕ್ಚಾವೊ ಪ್ರದೇಶಗಳಲ್ಲಿ ಸೇನೆ ಮತ್ತು ಆರ್‌ಪಿಎಫ್ ಸಿಬ್ಬಂದಿ ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ ನಂತರ ನಡೆದ ಘರ್ಷಣೆಯಲ್ಲಿ 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...