ಮಣಿಪುರ ಹಿಂಸಾಚಾರ | ಜೂನ್‌ 24 ರಂದು ಸರ್ವಪಕ್ಷ ಸಭೆ ಕರೆದ ಗೃಹ ಸಚಿವ ಅಮಿತ್‌ ಶಾ

Date:

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಸುಮಾರು 50 ದಿನಗಳ ನಂತರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೂನ್ 24 ರಂದು ರಾಜ್ಯದ ಪರಿಸ್ಥಿತಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆದಿದ್ದಾರೆ.

ಜೂನ್‌ 24ರಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯಲ್ಲಿ ಸಭೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವಾಲಯದ ವಕ್ತಾರರು ಬುಧವಾರ(ಜೂನ್‌ 22) ಟ್ವೀಟ್ ಮಾಡಿದ್ದಾರೆ. ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ100 ಕ್ಕೂ ಹೆಚ್ಚು ಜನರು ಮೃತಪಟ್ಟು ಮತ್ತು 50 ಸಾವಿರಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಬುಧವಾರ ತಡರಾತ್ರಿ ಅಮಿತ್ ಶಾ ಅವರನ್ನು ಭೇಟಿಯಾದ ನಂತರ ಸರ್ವಪಕ್ಷ ಸಭೆಯನ್ನು ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೃಹ ಸಚಿವರು ಮೇ 29 ರಿಂದ ಜೂನ್ 1 ರವರೆಗೆ ಮಣಿಪುರಕ್ಕೆ ಭೇಟಿ ನೀಡಿದ್ದರು ಮತ್ತು ಕುಕಿ ಮತ್ತು ಮೀತೀ ಪ್ರತಿನಿಧಿಗಳನ್ನು ಭೇಟಿ ಮಾಡಿ ಶಾಂತಿ ಸ್ಥಾಪನೆಗಾಗಿ ಮನವಿ ಮಾಡಿದ್ದರು. ಆದರೂ ರಾಜ್ಯದಲ್ಲಿ ಹಿಂಸಾಚಾರ ಮುಂದುವರಿದಾಗ ಎರಡು ಗುಂಪುಗಳೊಂದಿಗೆ ಮಾತುಕತೆ ನಡೆಸುವಂತೆ ಶಾ ಅವರು ಮುಖ್ಯಮಂತ್ರಿಗೆ ಸೂಚಿಸಿದ್ದರು.

ಈ ಸುದ್ದಿ ಓದಿದ್ದೀರಾ? ಮೋದಿಯನ್ನು ಹೊಗಳುವ ಅಮೆರಿಕ ಅಧ್ಯಕ್ಷರ ಅಸಲಿಯತ್ತೇನು? ಇಲ್ಲಿದೆ ನೋಡಿ…

ಮಣಿಪುರದ ಹಲವಾರು ಶಾಸಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ನಿರೀಕ್ಷೆಯಲ್ಲಿ ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ಅಮೆರಿಕ ಮತ್ತು ಈಜಿಪ್ಟ್‌ ಪ್ರವಾಸದಲ್ಲಿರುವ ಪ್ರಧಾನಿ ಅವರು ಜೂನ್ 26 ರವರೆಗೆ ಸ್ವದೇಶಕ್ಕೆ ವಾಪಸ್‌ ಬರುವುದಿಲ್ಲ.

ಈ ಸಂದರ್ಭದಲ್ಲಿಯೇ ಮೀತೀ ಶಾಸಕರನ್ನು ಒಳಗೊಂಡ ನಿಯೋಗವು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮಣಿಪುರದ ಬಿಜೆಪಿ ಉಸ್ತುವಾರಿ ಸಂಬಿತ್ ಪಾತ್ರ ಅವರನ್ನು ಭೇಟಿ ಮಾಡಿತು.

ಈ ನಡುವೆ, ಹಿಂಸಾಚಾರದಿಂದ ನಿರಾಶ್ರಿತರಾದ 11,785 ಜನರಿಗೆ ಪರಿಹಾರ ನೀಡಲು ಮಿಜೋರಾಂ ಸರ್ಕಾರ ಕೇಂದ್ರದಿಂದ ₹ 10 ಕೋಟಿ  ಕೇಳಿದೆ. ಮಿಜೋರಾಂ ಮುಖ್ಯಮಂತ್ರಿ ಝೋರಾಮ್‌ತಂಗ ಅವರು ಮೇ 16 ಮತ್ತು ಮೇ 23 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಣದ ನೆರವು ಕೋರಿ ಪತ್ರ ಬರೆದಿದ್ದಾರೆ.

ಕಾಂಗ್ರೆಸ್ ಆಕ್ರೋಶ

ಕೇಂದ್ರ ಗೃಹ ಮಂತ್ರಿಗಳು ಹಿಂಸಾಚಾರ ನಡೆದು 50 ದಿನಗಳ ನಂತರ ಸರ್ವಪಕ್ಷ ಸಭೆ ಕರೆದಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, “ಮಣಿಪುರದಲ್ಲಿ 50ಕ್ಕೂ ಹೆಚ್ಚು ಸಾವು ಸಂಭವಿಸಿದ ನಂತರ ಸರ್ವಪಕ್ಷ ಸಭೆ ಕರೆದಿರುವುದು ತುಂಬ ತಡವಾಗಿದೆ. ನಮ್ಮ ನಾಯಕಿ ಸೋನಿಯಾ ಗಾಂಧಿಯವರು ವಿಡಿಯೋ ಮೂಲಕ ಮನವಿ ಜನತೆಗೆ ಶಾಂತಿ ಸಂದೇಶ ನೀಡಿದ ನಂತರ ಸರ್ಕಾರ ಎಚ್ಚೆತ್ತುಕೊಂಡಿದೆ. ಅಲ್ಲದೆ ಪ್ರಧಾನಿಯವರು ವಿದೇಶಿ ಪ್ರವಾಸದಲ್ಲಿರುವಾಗ ಸಭೆ ಕರೆಯಲಾಗಿದೆ. ಪ್ರಧಾನಿಯವರು ಸರ್ವಪಕ್ಷ ಸಭೆಗೆ ಗೈರುಹಾಜರಾಗಿರುವುದು ಅವರ ಹೇಡಿತನ ಮತ್ತು ವೈಫಲ್ಯಗಳನ್ನು ಎದುರಿಸಲು ಸರ್ಕಾರಕ್ಕೆ ಇಷ್ಟವಿಲ್ಲದಿರುವುದನ್ನು ತೋರಿಸುತ್ತದೆ” ಎಂದು ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...