ಮಣಿಪುರ: ಸ್ವಾತಂತ್ರ್ಯ ಹೋರಾಟಗಾರರ ಪತ್ನಿಯನ್ನು ಜೀವಂತವಾಗಿ ಸುಟ್ಟ ದುಷ್ಕರ್ಮಿಗಳು

Date:

ಇತ್ತೀಚಿಗಷ್ಟೆ ಮಣಿಪುರ ರಾಜ್ಯದಲ್ಲಿ ಇಬ್ಬರು ಮಹಿಳೆಯರ ಸಾಮೂಹಿಕ ಅತ್ಯಾಚಾರ, ಕೊಲೆ, ಬೆತ್ತಲೆ ಮೆರವಣಿಗೆ ಮಾಡಿದ ಆಘಾತಕಾರಿ ಘಟನೆ ಹೊರ ಬಿದ್ದ ನಂತರ ಸ್ವಾತಂತ್ರ್ಯ ಹೋರಾಟಗಾರರ ಪತ್ನಿಯನ್ನು ಮನೆಯಲ್ಲಿ ಕೂಡಿ ಹಾಕಿ ಜೀವಂತವಾಗಿ ಸುಟ್ಟು ಹಾಕಿದ ಕೃತ್ಯ ಬೆಳಕಿಗೆ ಬಂದಿದೆ.

ಮೇ 28 ರಂದು ಕಾಕ್ಚಿಂಗ್‌ ಜಿಲ್ಲೆಯ ಸೆರೋ ಗ್ರಾಮಕ್ಕೆ ನುಗ್ಗಿದ್ದ ಶಸ್ತ್ರಸಜ್ಜಿತ ಗಲಭೆಕೋರರ ಗುಂಪು ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಎಸ್‌ ಚುರಚಂದ್‌ ಸಿಂಗ್‌ ಅವರ ಪತ್ನಿ ಇಬೆತೋಬಿ (80) ಅವರನ್ನು ಮನೆಯಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚಿತ್ತು. ನೆರವಿಗೆ ಅಂಗಲಾಚಿದರೂ ವೃದ್ಧೆಯ ಮಾತುಗಳು ಅಗ್ನಿಯ ಜಾಲ್ವೆಯಲ್ಲಿ ಯಾರಿಗೂ ಕೇಳಲಿಲ್ಲ. ಕೊನೆಗೆ ವಯಸ್ಸಾದ ವೃದ್ಧೆ ಬೆಂಕಿಯಲ್ಲೇ ಬೆಂದು ಹೋದರು.

ಮಹಿಳೆಯರ ಪತಿ ಎಸ್ ಚುರಾಚಂದ್ ಸಿಂಗ್ ಅವರು ತಮ್ಮ 80ನೇ ವಯಸ್ಸಿನಲ್ಲಿ ಕೆಲ ವರ್ಷಗಳ ಹಿಂದೆ ಸಾವನ್ನಪ್ಪಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಅವರನ್ನು ಮಾಜಿ ರಾಷ್ಟ್ರಪತಿ ದಿವಂಗತ ಎ ಪಿ ಜೆ ಅಬ್ದುಲ್ ಕಲಾಂ ಅವರು ಕೂಡ ಗೌರವಿಸಿದ್ದರು. ಇವರನ್ನು ರಕ್ಷಿಸಲು ಕುಟುಂಬದವರು ಆಗಮಿಸುವಷ್ಟರಲ್ಲಿ ಮನೆ ಸಂಪೂರ್ಣ ಸುಟ್ಟು ಕರುಕಲಾಗಿತ್ತು ಎಂದು ಇವರ ಮೊಮ್ಮಗ ಪ್ರೇಮಕಾಂತ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಟ್ವಿಟರ್‌ ಹಕ್ಕಿಗೆ ಶೀಘ್ರ ಗುಡ್‌ಬೈ; ಚೀನಾ ಆ್ಯಪ್‌ ಸ್ವರೂಪ ನೀಡಲು ಮುಂದಾದ ಮಸ್ಕ್

ಸದ್ಯ ವೃದ್ಧೆಯ ಮೊಮ್ಮಗ ಪ್ರೇಮಕಾಂತ್ ಶಾಸಕರೊಬ್ಬರ ಸ್ಥಳದಲ್ಲಿ ಆಶ್ರಯ ಪಡೆದಿದ್ದಾರೆ. ಮಣಿಪುರದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದು ಹಿಂಸಾಚಾರದ ಘಟನೆಗಳು ಮುಂದುವರಿದಿರುವುದರಿಂದ ಅನೇಕರು ತಮ್ಮ ಸ್ವಗ್ರಾಮಗಳಿಂದ ಸ್ಥಳಾಂತರಗೊಂಡಿದ್ದಾರೆ. ಮಣಿಪುರ ರಾಜ್ಯದಲ್ಲಿ ಕಳೆದ ಎರಡು ತಿಂಗಳಿಗಿಂತ ಇಂಟರ್‌ನೆಟ್‌ ಸ್ಥಗಿತಗೊಳಿಸಲಾಗಿದೆ.

ಗ್ರಾಮದ ಮೇಲೆ ದಾಳಿ ನಡೆಸಿದ ಶಶಸ್ತ್ರಧಾರಿಗಳ ಗುಂಪು ಸ್ವಾತಂತ್ರ್ಯ ಹೋರಾಟಗಾರರ ಪತ್ನಿಯಾಗಿಯರುವ 80 ವರ್ಷದ ಇಬೆತೊಂಬಿ ಮನೆಯಲ್ಲಿರುವಾಗ ಹೊರಗಿನಿಂದ ಚಿಲಕ ಹಾಕಿ ಬೆಂಕಿ ಹಚ್ಚಿದ್ದರು.

“ನಾನು ಅಜ್ಜಿಯನ್ನು ರಕ್ಷಿಸಲು ಪ್ರಯತ್ನಿಸಿದ ಸಂದರ್ಭದಲ್ಲಿ ಗುಂಡಿನ ದಾಳಿಯಿಂದ ಸ್ಪಲ್ಪದರಲ್ಲೇ ತಪ್ಪಿಸಿಕೊಂಡೆ” ಎಂದು ಪ್ರೇಮಕಾಂತ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...