ಮಣಿಪುರ ಹಿಂಸಾಚಾರ| ಪೊಲೀಸ್ ಠಾಣೆ, ಅರಣ್ಯ ಕಚೇರಿಗೆ ಬೆಂಕಿ; ಸುಟ್ಟು ಕರಕಲು

Date:

ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದ್ದು ಶನಿವಾರ ನಸುಕಿನಲ್ಲಿ ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಪೊಲೀಸ್ ಔಟ್‌ಪೋಸ್ಟ್, ಅರಣ್ಯ ಬೀಟ್ ಕಚೇರಿ ಮತ್ತು ಅರಣ್ಯ ವ್ಯಾಪ್ತಿಯ ಕಚೇರಿಯನ್ನು ಸುಟ್ಟು ಹಾಕಿದ್ದಾರೆ.

ನಾಲ್ಕೈದು ಗ್ರಾಮಗಳಲ್ಲಿ ಸುಮಾರು ಹನ್ನೆರಡು ಮನೆಗಳಿಗೂ ಬೆಂಕಿ ಹಚ್ಚಲಾಗಿದೆ. ಈ ಮನೆಗಳು ಮೈತಿ ಸಮುದಾಯದವರಿಗೆ ಸೇರಿದ್ದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ಸಂಜೆ ಸೋಬಮ್ ಶರತ್‌ಕುಮಾರ್ ಸಿಂಗ್ (59) ಎಂಬ ಮೈತಿ ಸಮುದಾಯದ ವ್ಯಕ್ತಿಯ ಕೊಲೆಯಾದ ಬಳಿಕ ಹಿಂಸಾಚಾರ ಮತ್ತೆ ಆರಂಭವಾಗಿದೆ. ಹತ್ಯೆಯ ಸುದ್ದಿ ಹರಡುತ್ತಿದ್ದಂತೆ ಸ್ಥಳೀಯರು ಅಲ್ಲಲ್ಲಿ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಹಾಗೆಯೇ ಜಿರಿಬಾಮ್ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಮಣಿಪುರದಲ್ಲಿ ಮಕಾಡೆ ಮಲಗಿದ ಬಿಜೆಪಿ

ಮತ್ತೆ ಹಿಂಸಾಚಾರ ಆರಂಭವಾಗುತ್ತಿದ್ದಂತೆ ಜಿಲ್ಲೆಯಲ್ಲಿ ಅನಿರ್ದಿಷ್ಟ ಅವಧಿಗೆ ಕರ್ಫ್ಯೂ ವಿಧಿಸಲಾಗಿದೆ. ಇನ್ನು ಮನೆಗೆ ಬೆಂಕಿ ಬೀಳುತ್ತಿದ್ದಂತೆ ಮನೆ ಕಳೆದುಕೊಂಡ, ಹಿಂಸಾಚಾರದಿಂದಾಗಿ ಅಪಾಯದಲ್ಲಿದ್ದ, ಹತ್ತಿರದ ಹಳ್ಳಿಯ 200ಕ್ಕೂ ಹೆಚ್ಚು ಜನರನ್ನು ಜಿರಿಬಾಮ್ ಪಟ್ಟಣದ ತಾತ್ಕಾಲಿಕ ಆಶ್ರಯದಲ್ಲಿ ನೆಲೆಸಿದ್ದಾರೆ.

“ಸರ್ಕಾರದಿಂದ ಆಹಾರ, ಹಾಸಿಗೆ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಪರಿಸ್ಥಿತಿ ಸಹಜವಾದ ನಂತರ ಅವರು ತಮ್ಮ ಗ್ರಾಮಗಳಿಗೆ ಮರಳುತ್ತಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಆದರೆ ಅನಿರೀಕ್ಷಿತವಾಗಿದೆ. ಪೀಡಿತ ಪ್ರದೇಶಗಳಿಗೆ ಭದ್ರತಾ ಪಡೆಗಳನ್ನು ನಿಯೋಜಿಸಲಾಗುತ್ತಿದೆ” ಎಂದು ಜಿಲ್ಲಾಧಿಕಾರಿ ಕೃಷ್ಣ ಕುಮಾರ್ ಮಾಹಿತಿ ನಿಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...