ಮಣಿಪುರ ಹಿಂಸಾಚಾರ | ವಿಡಿಯೋ: ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಪ್ರತಿಭಟನಾಕಾರರ ಯತ್ನ

Date:

ಮಣಿಪುರದಲ್ಲಿ ಮೈಥೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಮಣಿಪುರದ ರಾಜಧಾನಿ ಇಂಫಾಲ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದಾಳಿಗಳು ಹೆಚ್ಚಾಗಿವೆ. ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದ ಮೇಲೆ ಮೈಥೇಯಿ ಸಮುದಾಯದ ಸಂಘಟನೆ ‘ಅರಾಂಬೈ ಟೆಂಗೋಲ್’ನ (ಎಟಿ) ಪ್ರಮುಖ ನಾಯಕ ಕಾನನ್ ಸಿಂಗ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಬಂಧನವನ್ನು ಖಂಡಿಸಿ ಸಮುದಾಯ ಯುವಕರು ಪ್ರತಿಭಟನೆ ನಡಸಿದ್ದಾರೆ. ಮಾತ್ರವಲ್ಲದೆ, ತಲೆ ಮೇಲೆ ಪೆಟ್ರೋಲ್ ಸುರಿದುಕೊಂಡಿದ್ದು, ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ಶನಿವಾರ, ಕಾನನ್ ಸಿಂಗ್‌ ಎಂಬಾತನ್ನು ಪೊಲೀಸರು ಬಂಧಿಸಿದ್ದು, ಶನಿವಾರ ರಾತ್ರಿ ಇಂಫಾಲ್‌ನಲ್ಲಿ ಹಲವಾರು ಮಂದಿ ಪ್ರತಿಭಟನೆ ನಡೆಸಿದ್ದಾರೆ. ರಸ್ತೆಗಳಲ್ಲಿ ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂಬ ಆರೋಪಗಳೂ ಇವೆ.

ಪ್ರತಿಭಟನೆಗೆ ಸಂಬಂಧಿಸಿದ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ವಿಡಿಯೋವೊಂದರಲ್ಲಿ, ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿರುವ ಯುವಕರ ಗುಂಪೊಂದು ಪೆಟ್ರೋಲ್ ಬಾಟಲಿಗಳನ್ನು ತಂದು, ತಮ್ಮ ಮೇಲೆ ಸುರಿದುಕೊಳ್ಳುತ್ತಿರುವುದು ಸೆರೆಯಾಗಿದೆ. ಅವರಲ್ಲಿ ಓರ್ವ ಯುವಕ, “ನಾವು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದೇವೆ. ಪ್ರವಾಹದ ಸಮಯದಲ್ಲಿ ನೀವು (ಆಡಳಿತ) ಮಾಡಬೇಕಿದ್ದ ಕೆಲಸಗಳನ್ನು ನಾವು ಮಾಡಿದ್ದೇವೆ. ಈಗ ನೀವು ನಮ್ಮನ್ನು ಬಂಧಿಸುತ್ತಿದ್ದೀರಿ. ನಮ್ಮನ್ನು ನಾವು ಕೊಂದುಕೊಳ್ಳುತ್ತೇವೆ” ಎಂದು ಹೇಳಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಕನ್ ಸಿಂಗ್‌ ಈ ಹಿಂದೆ ಪೊಲೀಸ್‌ ಕಾನ್ಸ್‌ಸ್ಟೆಬಲ್ ಆಗಿದ್ದರು. 2024ರ ಫೆಬ್ರವರಿಯಲ್ಲಿ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮೊಯಿರಾಂಗ್ದೆಮ್ ಅಮಿತ್ ಅವರ ಮನೆಯ ಮೇಲಿನ ದಾಳಿ ಮತ್ತು ಹಿರಿಯ ಪೊಲೀಸ್‌ ಅಧಿಕಾರಿಯ ಅಪಹರಣ ಪ್ರಕರಣದಲ್ಲಿ ಕಾಕನ್ ಸಿಂಗ್‌ ಕೂಡ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಬಳಿಕ, ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು. ನಂತರ, ಅವರು ‘ಅರಾಂಬೈ ಟೆಂಗೋಲ್’ ಸಂಘಟನೆ ಸೇರಿಸಿದ್ದರು ಎಂದು ವರದಿಯಾಗಿದೆ.

ಕಳೆದ ಮೂರು ವರ್ಷಗಳಿಂದ ಜನಾಂಗೀಯ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಸುಮಾರು 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಆದಾಗ್ಯೂ, ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಿಲ್ಲ. ಹಿಂಸಾಚಾರವನ್ನು ತಡೆಯುವ ಪ್ರಯತ್ನ ಮಾಡಿಲ್ಲ. ಸದ್ಯ, ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗಿದೆ. ಬಿಷ್ಣುಪುರ, ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ತೌಬಲ್ ಹಾಗೂ ಕಾಕ್ಚಿಂಗ್ – ಐದು ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಇಂಟರ್‌ನೆಟ್‌ ಸೇವೆಯನ್ನು ಐದು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.

ಇದೇ ವರ್ಷದ ಫೆಬ್ರವರಿ 9 ರಂದು ಮಣಿಪುರಲ್ಲಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ರಾಜೀನಾಮೆ ನೀಡಿ, ಸರ್ಕಾರವನ್ನು ವಿಸರ್ಜಿಸಿದರು. ಸದ್ಯ, ಮಣಿಪುರದಲ್ಲಿ ಜನರಿಂದ ಆಯ್ಕೆಯಾದ ಸರ್ಕಾರವಿಲ್ಲ. ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ರಾಜ್ಯಾಪಾಲ ಎ.ಕೆ ಭಲ್ಲಾ ನೇತೃತ್ವದಲ್ಲಿ ಕಾರ್ಯಾಂಗವು ರಾಜ್ಯವನ್ನು ನಿಭಾಯಿಸುತ್ತಿದೆ. ಈ ನಡುವೆ, ಸರ್ಕಾರ ರಚನೆಗೆ ಬಿಜೆಪಿ ಮತ್ತೆ ಮುಂದಾಗಿದೆ. ರಾಜ್ಯಪಾಲರನ್ನು ಭೇಟಿ ಮಾಡಿ, ಸರ್ಕಾರ ರಚನೆ ಕುರಿತು ಚರ್ಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...