ಮಣಿಪುರ ಹಿಂಸಾಚಾರ | ದಾಳಿಕೋರರಿಂದ ಸ್ವಯಂಸೇವಕನ ಹತ್ಯೆ; ಶಸ್ತ್ರಾಸ್ತ್ರಗಳ ಲೂಟಿ

Date:

ಮಣಿಪುರದ ಇಂಫಾಲ್ ಜಿಲ್ಲೆಯ ಚಿಂಗಾರೆಲ್ ತೇಜ್‌ಪುರದಲ್ಲಿರುವ 5ನೇ ಭಾರತೀಯ ರಿಸರ್ವ್ ಬೆಟಾಲಿಯನ್ ಸ್ಟೇಷನ್‌ ಮೇಲೆ ಗಲಭೆಕೋರ ಗುಂಪೊಂದು ಮಂಗಳವಾರ ರಾತ್ರಿ ದಾಳಿ ನಡೆಸಿದೆ. ದಾಳಿಯಲ್ಲಿ ಸ್ವಯಂಸೇವಕನೊಬ್ಬ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಮಂಗಳವಾರ ರಾತ್ರಿ ಸುಮಾರು 10 ಗಂಟೆ ಸಮಯದಲ್ಲಿ ಘಟನೆ ನಡೆದಿದೆ. ಬೆಟಾಲಿಯನ್‌ ಟ್ರೂಫ್‌ ಮೇಲೆ ದಾಳಿ ನಡೆಸಿರುವ ದಾಳಿಕೋರರು ಅಲ್ಲಿದ್ದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಲೂಟಿ ಮಾಡಿದೆ ಎಂದು ಹೇಳಲಾಗಿದೆ.

ಮೃತನನ್ನು 24 ವರ್ಷ ವಯಸ್ಸಿನ ಓಕ್ರಮ್ ಸನಾಟನ್ ಎಂದು ಗುರುತಿಸಲಾಗಿದೆ. ಓಕ್ರಮ್ ಅವರು ಇಂಫಾಲ್ ಜಿಲ್ಲೆಯ ಪಂಗೇ ಒಕ್ರಾಮ್ ಲೈಕೇಯ್‌ ಪ್ರದೇಶದವರು. ದಾಳಿಯ ವೇಳೆ ಗಾಯಗೊಂಡು ಅವರು ಸಾವನ್ನಪ್ಪಿದ್ದಾರೆ. ಗಾಯಗೊಂಡಿದ್ದ ಇನ್ನಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾಳಿಕೋರರು ಲೂಟಿ ಮಾಡಿದ ಶಸ್ತ್ರಾಸ್ತ್ರಗಳಲ್ಲಿ ಆರು AK-47 ಗನ್‌ಗಳು, ನಾಲ್ಕು ಕಾರ್ಬೈನ್‌ಗಳು, ಮೂರು ರೈಫಲ್‌ಗಳು ಮತ್ತು ಎರಡು ಲಘು ಮೆಷಿನ್ ಗನ್‌ಗಳು ಮತ್ತು ಮದ್ದುಗುಂಡುಗಳಿದ್ದವು ಎಂದು ಸ್ಥಳೀಯ ಪೊಲೀಸ್ ಮೂಲಗಳು ತಿಳಿಸಿವೆ.

ಕಳೆದ ವರ್ಷ ಮೇ ತಿಂಗಳಲ್ಲಿ ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಸಂಘರ್ಷ ಆರಂಭವಾದಾಗಿನಿಂದ ಚಿಂಗಾರೆಲ್ ತೇಜ್‌ಪುರ ಪ್ರದೇಶವು ಗುಂಪು ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ.

ಇದುವರೆಗೆ, ಮಣಿಪುರದ ಕುಕಿ ಮತ್ತು ಮೈಥೇಯಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಯಲ್ಲಿ ಕನಿಷ್ಠ 180 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮೈಥೇಯಿಗಳು ರಾಜ್ಯದ ಜನಸಂಖ್ಯೆಯ 50%ಕ್ಕಿಂತ ಹೆಚ್ಚು ಜನರನ್ನು ಹೊಂದಿದ್ದಾರೆ. ಮಂಗಳವಾರ ರಾತ್ರಿ ಗುಂಪು ದಾಳಿ ನಡೆದ ಇಂಫಾಲ್ ಜಿಲ್ಲೆ ಸೇರಿದಂತೆ ಕಣಿವೆ ಜಿಲ್ಲೆಗಳಲ್ಲಿ ಅವರೇ ಬಹುಸಂಖ್ಯಾತರಾಗಿದ್ದಾರೆ.

ಗುಂಪು ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ಹಿಂದಿರುಗಿಸುವಂತೆ ಬಿರೇನ್ ಸಿಂಗ್ ಅವರ ಸರ್ಕಾರವು ಜನರನ್ನು ಒತ್ತಾಯಿಸಿದೆ. ಆದರೆ, ಇದುವರೆಗೆ ರಾಜ್ಯ ಪೊಲೀಸರು ವಶಪಡಿಸಿಕೊಂಡಿರುವುದು ಲೂಟಿಯಾದ ಶಸ್ತ್ರಾಸ್ತ್ರಗಳ ಪೈಕಿ ಕೇವಲ 1% ಶಸ್ತ್ರಾಸ್ತ್ರಗಳು ಮಾತ್ರ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...