ಮಣಿಪುರ ಹಿಂಸಾಚಾರ | ಸರ್ಕಾರ, ಏಜೆನ್ಸಿಗಳಿಂದ ತನಿಖಾ ವರದಿ ಕೇಳಿದ ಸುಪ್ರೀಂ

Date:

ಮಣಿಪುರ ಹಿಂಸಾಚಾರ ಪ್ರಕರಣದಲ್ಲಿ ತನಿಖಾ ವರದಿ ನೀಡುವಂತೆ ಸರ್ಕಾರ ಮತ್ತು ತನಿಖಾ ತಂಡಗಳಿಗೆ ಸುಪ್ರೀಂ ಕೋರ್ಟ್ ಕೇಳಿದೆ. ತನಿಖೆ ಎಲ್ಲಿಯವರೆಗೆ ತಲುಪಿದೆ, ಯಾವುದಾದರೂ ಪ್ರಕರಣದಲ್ಲಿ ಚಾರ್ಜ್‌ಶೀಟ್ ಫೈಲ್ ಮಾಡಲಾಗಿದೆಯೇ ಎಂದು ಸರ್ಕಾರ, ಎನ್‌ಐಎ ಮತ್ತು ಸಿಬಿಐಗೆ ಪ್ರಶ್ನಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ಎನ್‌ಐಎ ಮುಖ್ಯವಾಗಿ ಎರಡು ವಿಚಾರಗಳಲ್ಲಿ ಸ್ಪಷ್ಟಣೆಯನ್ನು ಕೇಳಿದೆ. “ಆರೋಪಪಟ್ಟಿ ಸಲ್ಲಿಸಿದ ನಂತರ ಅಸ್ಸಾಂನಲ್ಲಿ ವಿಚಾರಣೆ ನಡೆಸಬೇಕೆ ಮತ್ತು ಅಪರಾಧದ ದಿನಾಂಕದಂದು ಬಾಲಾಪರಾಧಿ ಎಂದು ಕಂಡುಬಂದ ಆರೋಪಿಯ ಪ್ರಕರಣದಲ್ಲಿ ಅನುಸರಿಸಬೇಕಾದ ವಿಧಾನಗಳ ಬಗ್ಗೆ ಸ್ಪಷ್ಟನೆ ನೀಡಬೇಕು” ಎಂದು ಎನ್‌ಐಎಗೆ ಸೂಚಿಸಿದೆ.

“ನಾವು ಎಷ್ಟು ಪ್ರಕರಣಗಳನ್ನು ಎದುರಿಸುತ್ತಿದ್ದೇವೆ ಎಂಬುದರ ಕುರಿತು ಸ್ವಲ್ಪ ವಿಚಾರ ಮಾಡೋಣ. ಅಸ್ಸಾಂನಲ್ಲಿ ವಿಚಾರಣೆ ನಡೆಯಬೇಕೆ ಎಂಬುದರ ಕುರಿತು ಸ್ವಲ್ಪ ನೆರವು ನೀಡುವಂತೆ ನಾವು ಅವರಿಗೆ ಮನವಿ ಮಾಡುತ್ತೇವೆ” ಎಂದು ಮಣಿಪುರ ಅಡ್ವೊಕೇಟ್ ಜನರಲ್‌ಗೆ ಪೀಠವು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಎರಡು ತಿಂಗಳ ಅವಧಿಯಲ್ಲಿ ಜಿಲ್ಲಾಧಿಕಾರಿ ನಿವಾಸದ ಮೇಲಿನ ದಾಳಿ ಸೇರಿ ಹಲವು ಹಿಂಸಾಚಾರ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಥವಾ ಕಾನೂನು ಜಾರಿ ಸಂಸ್ಥೆಗಳಿಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸ್ಥಿತಿ ರಕ್ಷಣೆ ಕುರಿತಾಗಿ ನಿರ್ದೇಶನವನ್ನು ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ನಾಗರಿಕ ಸಮಾಜದ ಸಂಘಟನೆಗಳಿಗೆ ನಾವು ಈ ಕುರಿತಾಗಿ ನಿರ್ದೇಶ ನೀಡಲಾಗುವುದಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ರಕ್ಷಣೆಗಾಗಿಯೇ ರಾಜ್ಯ ಸರ್ಕಾರವಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾ ನ್ಯಾಯಪೀಠ ಅಭಿಪ್ರಾಯಪಟ್ಟಿದ್ದಾರೆ.

ಮಣಿಪುರ ಹಿಂಸಾಚಾರ ಘಟನೆಗಳಿಗೆ ಸಂಬಂಧಿಸಿ ಆದೇಶ ನೀಡಲು ಸುಪ್ರೀಂ ಕೋರ್ಟ್, ನ್ಯಾಯಮೂರ್ತಿ ಮಿತ್ತಲ್ ನೇತೃತ್ವದಲ್ಲಿ ಮೂವರು ಸದಸ್ಯರ ಸಮಿತಿಯನ್ನು ರಚಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...