ದಶಕ ಪೂರೈಸಿದ ‘ಮನ್ ಕಿ ಬಾತ್‌’ ಬಗ್ಗೆ ಪ್ರಧಾನಿ ಮೋದಿ ಮಾತು

Date:

ದೇಶದ ಜನರು ಸಕಾರಾತ್ಮಕ ವಿಚಾರಗಳು, ಸಾಧಕರ ಸ್ಪೂರ್ತಿದಾಯಕ ಕಥೆಗಳನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ಸಮಸ್ಯೆಗಳ ಬಗ್ಗೆ, ದೇಶದ ವಿವಿಧ ಭಾಗಗಳ ಜನರ ಪ್ರಯತ್ನ ಸಾಧನೆಗಳನ್ನು ಶ್ಲಾಘಿಸುವುದರೊಂದಿಗೆ ರೇಡಿಯೊ ಕಾರ್ಯಕ್ರಮವು 10 ವರ್ಷಗಳನ್ನು ಪೂರೈಸಿದೆ’ಎಂದು ಹೇಳಿದರು.

ಜನರು ಯಾವಾಗಲೂ ನಕಾರಾತ್ಮಕ ಅಥವಾ ಅತಿರಂಜಿತ ವಿಷಯಗಳಿಗೆ ಮಾತ್ರ ಕಿವಿಯಾಗುತ್ತಾರೆ ಎಂಬ  ಭಾವನೆಯಿದೆ. ಆದರೆ ಮನ್ ಕಿ ಬಾತ್ ಕಾರ್ಯಕ್ರಮ ಅದನ್ನು ಸುಳ್ಳು ಮಾಡಿ ಜನರು ಸಕಾರಾತ್ಮಕ ವಿಷಯಗಳಿಗೂ ಆಸಕ್ತಿ ತೋರಿಸುತ್ತಾರೆ ಎನ್ನುವುದನ್ನು ತೋರಿಸಿಕೊಟ್ಟಿದೆ ಎಂದು ಪ್ರಧಾನಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದರ ಕುರಿತು ಮಾತನಾಡಿದ ಅವರು, ಸುಮಾರು 300 ಪುರಾತನ ವಸ್ತುಗಳನ್ನು ಭಾರತಕ್ಕೆ ಹಿಂದಿರುಗಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಜನರು ತಮ್ಮ ಪರಂಪರೆಯ ಬಗ್ಗೆ ಹೆಮ್ಮೆಪಡಲು ಪ್ರಾರಂಭಿಸಿದಾಗ, ಜಗತ್ತು ಅವರ ಭಾವನೆಗಳನ್ನು ಗೌರವಿಸುತ್ತದೆ. ಸರ್ಕಾರ ಕಳೆದ 10 ವರ್ಷಗಳಲ್ಲಿ ವಿವಿಧ ದೇಶಗಳಿಂದ ಹೆಚ್ಚಿನ ಸಂಖ್ಯೆಯ ಪ್ರಾಚೀನ ಕಲಾಕೃತಿಗಳು ಭಾರತಕ್ಕೆ ಹಿಂತಿರುಗುವಂತೆ ಮಾಡಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಧಾನಸೌಧದಲ್ಲೇ ಅತ್ಯಾಚಾರ? ಇದು ಕೇವಲ ತನಿಖೆಯಿಂದ ಬಗೆಹರಿಯುವ ಸಂಗತಿಯಲ್ಲ

‘ಮೇಕ್ ಇನ್ ಇಂಡಿಯಾ’ ಕೂಡ 10 ವರ್ಷಗಳನ್ನು ಪೂರೈಸುತ್ತಿದೆ. ಪ್ರತಿ ವಲಯದಲ್ಲಿ ರಫ್ತು ಹೆಚ್ಚುತ್ತಿದೆ ಮತ್ತು ವಿದೇಶಿ ನೇರಹೂಡಿಕೆ (ಎಫ್‌ಡಿಐ) ಹೆಚ್ಚಳವು ಅದರ ಯಶಸ್ಸಿಗೆ ಸಾಕ್ಷಿಯಾಗಿದೆ. ಇದು ಸ್ಥಳೀಯ ಉತ್ಪಾದಕರಿಗೆ ಸಾಕಷ್ಟು ಸಹಾಯಮಾಡಿದೆ ಎಂದರು.

ಗಾಂಧಿ ಜಯಂತಿಯಂದು ಆರಂಭಿಸಿದ್ದ ‘ಸ್ವಚ್ಛ ಭಾರತ್’ಯೋಜನೆ ಸಹ 10 ವರ್ಷ ಪೂರೈಸಿದ್ದು, ಅಭೂತ ಪೂರ್ವ ಯಶಸ್ಸು ಕಂಡಿದೆ. ಇದು ಮಹಾತ್ಮಾ ಗಾಂಧಿ ಅವರಿಗೆ ಸಲ್ಲಿಸಿದ ನಮನವಾಗಿದೆ. ಈ ಮುಂಗಾರಿನ ಋತುವಿನಲ್ಲಿ ಭಾರತದಲ್ಲಿ ಸಮೃದ್ಧ ಮಳೆಯಾಗಿದೆ ಎಂದ ಅವರು, ನೀರನ್ನು ಸಂರಕ್ಷಿಸಲು ದೇಶದ ವಿವಿಧ ಭಾಗಗಳಲ್ಲಿ ಮಾಡುತ್ತಿರುವ ಪ್ರಯತ್ನಗಳ ಪ್ರಸ್ತಾಪಿಸಿ, ಶ್ಲಾಘಿಸಿದರು. ಜತೆಗೆ ನೀರನ್ನು ಮಿತವಾಗಿ ಬಳಸಿ, ಮರುಬಳಕೆ ಮಾಡಿ ಎಂದು ಕರೆ ನೀಡಿದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...