ಸಿಎಎ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನೂರಾರು ಅರ್ಜಿ: ವಿಚಾರಣೆಗೆ ಸಮ್ಮತಿ

Date:

ಕೇಂದ್ರ ಸರ್ಕಾರವು ಮಾರ್ಚ್ 11ರಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) 2019 ಜಾರಿ ಮಾಡಿದ್ದು, ಈ ಕಾನೂನಿಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಿಎಎ ವಿರುದ್ಧವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಸಲಾಗಿದ್ದು, ಕಾನೂನು ಸಮರ ಏರ್ಪಡಲಿದೆ.

ಸಿಎಎ ಯಾವುದೇ ದಾಖಲೆಯಿಲ್ಲದೆಯೇ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ 2014ರ ಡಿಸೆಂಬರ್‌ 31ಕ್ಕೂ ಮುನ್ನ ಭಾರತಕ್ಕೆ ಬಂದ ಮುಸ್ಲಿಮೇತರರಿಗೆ ಭಾರತದ ಪೌರತ್ವವನ್ನು ಈ ಕಾಯ್ದೆಯು ನೀಡುತ್ತದೆ. ಈ ಕಾನೂನು ತಾರತಮ್ಯದಿಂದ ಕೂಡಿದೆ ಎಂದು ತೀವ್ರ ವಿರೋಧ ವ್ಯಕ್ತವಾಗಿದೆ.

ಸುಪ್ರೀಂ ಕೋರ್ಟ್‌ನಲ್ಲಿ 2019ರ ಡಿಸೆಂಬರ್‌ನಿಂದ ಸಿಎಎ ವಿರುದ್ಧ ಸಲ್ಲಿಸಲಾದ ಇನ್ನೂರಕ್ಕೂ ಅಧಿಕ ಪ್ರಕರಣಗಳು ಬಾಕಿ ಉಳಿದಿದೆ. ಈಗ ಕೇಂದ್ರ ಸಿಎಎ ಜಾರಿ ಮಾಡಿದ ಬಳಿಕ ಮತ್ತೆ ಹಲವಾರು ಅರ್ಜಿಗಳು ಸಲ್ಲಿಸಲಾಗಿದ್ದು, ಈಗ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆಗೆ ಸಜ್ಜಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಿಎಎ ಅನುಷ್ಠಾನ ತಡೆಗಾಗಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಸಮ್ಮತಿ

ಸಿಎಎ ಕಾಯ್ದೆಯು 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಪ್ರಣಾಳಿಕೆಯ ಭಾಗವಾಗಿದ್ದು ಈಗ 2023ರ ಚುನಾವಣೆ ಬರುತ್ತಿದ್ದಂತೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ಜಾರಿ ಮಾಡಿದೆ. ಕಾಯ್ದೆಗೆ 2019ರಲ್ಲಿ ಅನುಮೋದನೆ ಲಭಿಸಿದ್ದರೂ ಕೂಡಾ ಕೇಂದ್ರ ಸರ್ಕಾರವು ಚುನಾವಣೆ ಸಮೀಪಿಸುತ್ತಿದ್ದಂತೆ ಕಾಯ್ದೆ ಜಾರಿಗೊಳಿಸಿ ಟೀಕೆಗೆ ಒಳಗಾಗಿದೆ. ಹಾಗೆಯೇ ಕೇಂದ್ರದ ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ಕೂಡ ನಡೆಯುತ್ತಿದೆ.

ಈ ಕಾಯ್ದೆಯ ಜಾರಿಗೆ ತಡೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ನೂರಾರು ಅರ್ಜಿಗಳು ಸಲ್ಲಿಕೆಯಾಗಿದ್ದು, ಅರ್ಜಿದಾರರಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ಭಾರತ ಪ್ರಜಾಸತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ಮತ್ತು ಅಸ್ಸಾಂನ ಕಾಂಗ್ರೆಸ್ ನಾಯಕ ದೇಬಬ್ರತಾ ಸೈಕಿಯ ಸೇರಿದ್ದಾರೆ. ಮಾರ್ಚ್ 16ರಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೂಡ ಸಿಎಎ ವಿರುದ್ಧ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ.

ಇನ್ನು ಸಿಎಎ ವಿರುದ್ಧದ ಅರ್ಜಿಗಳ ವಿಚಾರಣೆಯನ್ನು ಮಾರ್ಚ್ 19ರಂದು ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ನೇತೃತ್ವದ ಪೀಠವು 190 ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದೆ. ಐಯುಎಂಎಲ್ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಕೋರ್ಟ್ ಮೆಟ್ಟಿಲೇರಿದ ಬಳಿಕ ಸುಪ್ರೀಂ ವಿಚಾರಣೆಯ ಘೋಷಣೆ ಮಾಡಿದೆ.

ಸಿಎಎ ವಿರುದ್ಧ ರಾಜ್ಯ ಸರ್ಕಾರಗಳು

ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿಗಳು ಈಗಾಗಲೇ ಸಿಎಎ ವಿರುದ್ಧ ಧ್ವನಿ ಎತ್ತಿದ್ದಾರೆ. ಈ ನಡುವೆ ಸಿಎಎ (ತಿದ್ದುಪಡಿ) ಕಾಯ್ದೆ 2024 ಅನ್ನು ವಿರುದ್ಧ ಕಾನೂನು ಸಮರಕ್ಕೆ ಮುಂದಾದ ಮೊದಲ ರಾಜ್ಯ ಕೇರಳವಾಗಿದೆ.

ಮಾರ್ಚ್ 12ರಂದು ದ್ರಾವಿಡ ಮುನ್ನೇತ್ರ ಕಳಗಂ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ “ನಮ್ಮ ರಾಜ್ಯದಲ್ಲಿ ಸಿಎಎ ಜಾರಿ ಮಾಡುವುದಿಲ್ಲ” ಎಂದು ಘೋಷಿಸಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಿಎಎ ಜಾರಿಯಿಂದಾಗುವ ಅಪಾಯಗಳ ಬಗ್ಗೆ ಜನರಿಗೆ ತಿಳಿಸಲು ಆರಂಭಿಸಿದ್ದಾರೆ. ಕೇರಳ ಸರ್ಕಾರವು 2020ರಲ್ಲೇ ಸಿಎಎ ವಿರುದ್ಧ ಅರ್ಜಿ ಸಲ್ಲಿಸಿದ್ದು, ಮಾರ್ಚ್ 14ರಂದು ಮರು ಅರ್ಜಿ ಸಲ್ಲಿಸಿದೆ.

ಸಿಎಎ ವಿರುದ್ಧವಾಗಿ ಡಿವೈಎಫ್‌ಐ ಪರ ವಕೀಲರಾದ ಬಿಜು ಪಿ ರಮಣ್ ಮತ್ತು ಸುಭಾಷ್ ಚಂದ್ರಣ್ ಕೆ ಆರ್‌ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಐಯುಎಂಎಲ್ ಅರ್ಜಿಯ ಬಳಿಕ 200ಕ್ಕೂ ಅಧಿಕ ಅರ್ಜಿ ಸಲ್ಲಿಸಲಾಗಿದೆ. ಐಯುಎಂಎಲ್ ಮೊದಲ ಬಾರಿಗೆ 2019ರಲ್ಲಿ ಅರ್ಜಿ ಸಲ್ಲಿಸಿತ್ತು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...