ಹಿಂದೂಗಳ ವಿವಾಹ ‘ಪವಿತ್ರವಾದುದ್ದು’ ವರ್ಷದಲ್ಲೇ ರದ್ದುಗೊಳಿಸಲಾಗದು: ಅಲಹಾಬಾದ್ ಹೈಕೋರ್ಟ್

Date:

“ಇಬ್ಬರು ಹಿಂದೂಗಳ ನಡುವೆ ನಡೆಯುವ ವಿವಾಹವು ಪವಿತ್ರವಾದುದ್ದು, ಹಿಂದೂ ವಿವಾಹ ಕಾಯ್ದೆಯ ಪ್ರಕಾರವಾಗಿ ವಿವಾಹ ಸಂಬಂಧದಲ್ಲಿ ತೀವ್ರ ತೊಂದರೆ ಇಲ್ಲದ ಹೊರಗಾಗಿ ಒಂದು ವರ್ಷದಲ್ಲೇ ವಿವಾಹ ಸಂಬಂಧವನ್ನು ಮುರಿಯಲಾಗದು” ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಅಶ್ವನಿ ಕುಮಾರ್ ಮಿಶ್ರಾ ಮತ್ತು ದೊನಾಡಿ ರಮೇಶ್ ನೇತೃತ್ವದ ದ್ವಿಸದಸ್ಯ ಪೀಠವು ವಿಚಾರಣೆಯೊಂದರ ವೇಳೆ ಈ ಹೇಳಿಕೆ ನೀಡಿದೆ. ಸೆಕ್ಷನ್ 14ರ ಅಡಿಯಲ್ಲಿ ವಿಚ್ಛೇದನೆಗೆ ಒಂದು ವರ್ಷ ಅವಧಿ ಬೇಕು ಎಂದು ಹೈಕೋರ್ಟ್ ತಿಳಿಸಿದೆ.

ಇದನ್ನು ಓದಿದ್ದೀರಾ? ಅಲಹಾಬಾದ್ ಹೈಕೋರ್ಟ್‌ನ ಕಾರ್ಯನಿರ್ವಹಣೆ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಶಾಂತ್ ಭಾರದ್ವಾಜ್ ಮತ್ತು ರಿಷಿಕಾ ಗೌತಮ್ ಎಂಬ ದಂಪತಿಯು ಪರಸ್ಪರ ಒಪ್ಪಂದದ ಮೇರೆಗೆ ಹಿಂದೂ ವಿವಾಹ ಕಾಯ್ದೆ 1955ರ ಸೆಕ್ಷನ್ 13-ಬಿ ಅಡಿಯಲ್ಲಿ ವಿಚ್ಛೇದನೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಸಹಾರನ್‌ಪುರದ ಕೌಟುಂಬಿಕ ನ್ಯಾಯಾಲಯವು ಸೆಕ್ಷನ್ 14ರ ಅಡಿಯಲ್ಲಿ ವಿಚ್ಛೇದನೆ ಪಡೆಯಲು ಅರ್ಹತೆಯಿಲ್ಲ. ವಿವಾಹವಾಗಿ ಒಂದು ವರ್ಷವಾದರೂ ಆಗಬೇಕು ಎಂದು ಹೇಳಿ ಅರ್ಜಿ ತಿರಸ್ಕರಿಸಿತ್ತು.

ಅದಾದ ಬಳಿಕ ನಿಶಾಂತ್ ಭಾರದ್ವಾಜ್ ಕೌಟುಂಬಿಕ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಕೂಡಾ ಅರ್ಜಿಯನ್ನು ತಿರಸ್ಕರಿಸಿದೆ. ಒಂದು ವರ್ಷವಾದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ತಿಳಿಸಿದೆ.

ಅರ್ಜಿಯು ಇಬ್ಬರು ಜೊತೆಯಾಗಿ ಜೀವಿಸಲು ಯಾವುದೇ ಕಷ್ಟವಿದೆ ಎಂಬುದನ್ನು ಉಲ್ಲೇಖಿಸಿಲ್ಲ. ಹಾಗಿರುವಾಗ ಒಂದು ವರ್ಷ ಸಮಯ ತೆಗೆದುಕೊಳ್ಳಿ. ಇಬ್ಬರು ಹಿಂದೂಗಳ ನಡುವೆ ನಡೆಯುವ ವಿವಾಹವು ಪವಿತ್ರವಾದುದ್ದು ಎಂದು ಹೈಕೋರ್ಟ್ ಹೇಳಿಕೊಂಡಿದೆ.

ಕಾನೂನು ಅಡಿಯಲ್ಲಿ ವಿಚ್ಛೇದನಕ್ಕೆ ಒಂದು ವರ್ಷ ಅವಧಿ ಬೇಕಾಗುತ್ತದೆ ಎಂಬುದು ಒಪ್ಪಬಹುದಾದರೂ ‘ಇಬ್ಬರು ಹಿಂದೂಗಳ ನಡುವಿನ ವಿವಾಹ ಪವಿತ್ರವಾದುದ್ದು’ ಎಂಬ ಹೈಕೋರ್ಟ್ ಹೇಳಿಕೆಯು ಚರ್ಚೆಗೆ ಗ್ರಾಸವಾಗಬೇಕಾಗಿರುವುದು. ಅಂತರ್‌ಧರ್ಮೀಯ ವಿವಾಹವನ್ನು ಕೀಳಾಗಿ ನ್ಯಾಯಮೂರ್ತಿಗಳು ಕಾಣುವುದೇ?

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...