ಪಾಕಿಸ್ತಾನ | ಫೇಸ್‌ಬುಕ್‌ ಗೆಳೆಯನನ್ನು ವರಿಸಿದ ಭಾರತೀಯ ಮಹಿಳೆ

Date:

ಭಾರತದಿಂದ ಪಾಕಿಸ್ತಾನ ಕ್ಕೆ ಫೇಸ್‌ಬುಕ್‌ ಗೆಳೆಯನನ್ನು ಹುಡುಕಿಕೊಂಡು ಹೋಗಿದ್ದ 34 ವರ್ಷದ ಭಾರತೀಯ ಮಹಿಳೆ ಅಂಜು ಮಂಗಳವಾರ(ಜುಲೈ 25) ತನ್ನ 29 ವರ್ಷದ ಪಾಕ್‌ ಸ್ನೇಹಿತ ನಸ್ರುಲ್ಲಾ ಅವರನ್ನು ವಿವಾಹವಾಗಿದ್ದಾರೆ.

ಅಂಜು ಅವರು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ ತಮ್ಮ ಹೆಸರನ್ನು ಫಾತಿಮಾ ಎಂದು ಬದಲಿಸಿಕೊಂಡಿದ್ದಾರೆ. ಭಾರತೀಯ ಮಹಿಳೆ ಅಂಜು ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ದೂರದ ಹಳ್ಳಿಗೆ ಕಾನೂನುಬದ್ಧವಾಗಿ ಪ್ರಯಾಣಿಸಿದ್ದರು. ನಸ್ರುಲ್ಲಾ ಮತ್ತು ಅಂಜು 2019 ರಲ್ಲಿ ಫೇಸ್‌ಬುಕ್‌ನಲ್ಲಿ ಸ್ನೇಹಿತರಾಗಿದ್ದರು. ಇಬ್ಬರು ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಅಪ್ಪರ್ ದಿರ್ ಜಿಲ್ಲೆಯ ಸ್ಥಳೀಯ ನ್ಯಾಯಾಲಯದಲ್ಲಿ ವಿವಾಹವಾಗಿದ್ದಾರೆ.

ಮಲಕಂದ್ ವಿಭಾಗದ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ನಾಸಿರ್ ಮೆಹಮೂದ್ ಸತ್ತಿ ಅವರು ಅಂಜು ಮತ್ತು ನಸ್ರುಲ್ಲಾ  ಅವರ ವಿವಾಹವನ್ನು ದೃಢಪಡಿಸಿದ್ದು, ಅಂಜು ಅವರು ಇಸ್ಲಾಂಗೆ ಮತಾಂತರಗೊಂಡ ನಂತರ ಫಾತಿಮಾ ಹೆಸರನ್ನು ಇಟ್ಟುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿವಾಹದಲ್ಲಿ ನಸ್ರುಲ್ಲಾ ಅವರ ಕುಟುಂಬ ಸದಸ್ಯರು, ಪೊಲೀಸ್ ಸಿಬ್ಬಂದಿ ಮತ್ತು ವಕೀಲರು ಹಾಜರಾಗಿದ್ದರು. ಭದ್ರತಾ ಕಾರಣಗಳಿಗಾಗಿ, ಮಹಿಳೆಯನ್ನು ಪೊಲೀಸ್ ಭದ್ರತೆಯಲ್ಲಿ ಗಂಡನ ಮನೆಗೆ ಕರೆದೊಯ್ಯಲಾಗಿದೆ.

ಈ ಸುದ್ದಿ ಓದಿದ್ದೀರಾ? ‘ಮಿಸ್ಟರ್‌ ಮೋದಿ, ನಮ್ಮನ್ನು ಏನೆಂದು ಕರೆದರೂ ಮಣಿಪುರದಲ್ಲಿ ಶಾಂತಿ ಮರಳಿಸುತ್ತೇವೆ’: ಪ್ರಧಾನಿಗೆ ರಾಹುಲ್‌ ತಿರುಗೇಟು

“ಅಂಜು ನನ್ನ ಕುಟುಂಬದ ಇತರ ಮಹಿಳಾ ಸದಸ್ಯರೊಂದಿಗೆ ತನ್ನ ಮನೆಯ ಪ್ರತ್ಯೇಕ ಕೋಣೆಯಲ್ಲಿ ವಾಸಿಸುತ್ತಿದ್ದಾರೆ. ಅಂಜು ಅವರನ್ನು ಮದುವೆಯಾಗುವ ಯಾವುದೇ ಯೋಜನೆ ಇಲ್ಲ. ಅವರ ವೀಸಾ ಅವಧಿ ಮುಗಿದಾಗ ಆಗಸ್ಟ್ 20 ರಂದು ಭಾರತಕ್ಕೆ ಮರಳುತ್ತಾರೆ” ಎಂದು ನಸ್ರುಲ್ಲಾ ಹೇಳಿಕೊಂಡ ಒಂದು ದಿನದ ನಂತರ ಈ ಬೆಳವಣಿಗೆಯಾಗಿದೆ.

ನಸ್ರುಲ್ಲಾ ಅವರನ್ನು ಭೇಟಿಯಾಗಲು ಅಂಜು ಅವರು ಪಾಕಿಸ್ತಾನದ ವೀಸಾದ ಮೇಲೆ ಪಾಕ್‌ನ ಬುಡಕಟ್ಟು ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಅಪ್ಪರ್ ದಿರ್ ಜಿಲ್ಲೆಗೆ ಪ್ರಯಾಣಿಸಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಅಂಜು ಮತ್ತು ಪಾಕ್ ಸ್ನೇಹಿತ ನಸ್ರುಲ್ಲಾ ಕೈ ಹಿಡಿದಿರುವುದನ್ನು ಮತ್ತು ರಮಣೀಯ ಪರ್ವತ ಪ್ರದೇಶಗಳಿಗೆ ಭೇಟಿ ನೀಡುತ್ತಿರುವುದನ್ನು ತೋರಿಸಲಾಗಿದೆ.

ರಾಜಸ್ಥಾನದವರಾದ ಅಂಜು ಭಾರತದಲ್ಲಿದ್ದಾಗಲೇ ಮದುವೆಯಾಗಿದ್ದರು.ಅವರಿಗೆ 15 ವರ್ಷದ ಪುತ್ರಿ ಮತ್ತು ಆರು ವರ್ಷದ ಪುತ್ರ ಇದ್ದು, ಮೊದಲ ಪತಿಯ ಜೊತೆ ವಾಸಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...