ಮರ್ಯಾದೆಗೇಡು ಹತ್ಯೆ | ಸ್ನೇಹಿತನೊಂದಿಗೆ ದೆಹಲಿಗೆ ತೆರಳಿದ್ದ ಮಗಳನ್ನ ಕೊಂದ ದುರುಳ ತಂದೆ

Date:

ಮತ್ತೊಂದು ಜಾತಿಯ ಯುವಕನನ್ನು ಪ್ರೀತಿಸಿ, ಆತನೊಂದಿಗೆ ದೆಹಲಿಗೆ ತೆರಳಿದ್ದ ಯುವತಿಯನ್ನು ಆಕೆಯ ತಂದೆ ಹತ್ಯೆಗೈದಿರುವ ಹೃದಯವಿದ್ರಾವಕ, ಅಮಾನುಷ ಮರ್ಯಾದೆಗೇಡು ಹತ್ಯೆ ಘಟನೆ ಬಿಹಾರದಲ್ಲಿ ನಡೆದಿದೆ. ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬಿಹಾರದ ಸಮಷ್ಟಿಪುರ ಪ್ರದೇಶದ ನಿವಾಸಿ ಸಾಕ್ಷಿ ಅವರನ್ನು ಆಕೆಯ ತಂದೆ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಏಪ್ರಿಲ್ 7ರಂದು ಕೃತ್ಯ ಎಸಗಲಾಗಿದ್ದು, ಆಕೆಯ ಮೃತದೇಹವು ಮನೆಯ ಶೌಚಾಲಯದಲ್ಲಿ ಗುರುವಾರ ಪತ್ತೆಯಾಗಿದೆ.

ಯುವತಿಯ ತಂದೆ, ಆರೋಪಿ ಮುಖೇಶ್‌ ಸಿಂಗ್ಅನ್ನು ಬಂಧಿಸಲಾಗಿದೆ. ಆತ ಯುವತಿಯ ಸ್ನೇಹಿತನನ್ನೂ ಕೊಲ್ಲಲು ಯತ್ನಿಸಿದ್ದಾನೆ. ಆದರೆ, ಯುವಕ ಆರೋಪಿಯ ಕೈಗೆ ಸಿಕ್ಕಿಲ್ಲವೆಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಕ್ಷಿ ಅವರು ಮತ್ತೊಂದು ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದರು. ಇಬ್ಬರೂ ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸಾಕ್ಷಿ ತನ್ನ ಸ್ನೇಹಿತನೊಂದಿಗೆ ಮಾರ್ಚ್‌ 4ರಂದು ದೆಹಲಿ ತೆರಳಿದ್ದರು ಎಂದು ಸಾಕ್ಷಿ ಅವರ ಸೋದರ ಮಾವ ವಿಪಿನ್ ಕುಮಾರ್‌ ಹೇಳಿದ್ದಾರೆ.

ಒಂದು ವಾರದ ಹಿಂದೆ ದೆಹಲಿಗೆ ಹೋಗಿದ್ದ ಮುಖೇಶ್‌ ಸಿಂಗ್‌ ತನ್ನ ಮಗಳ ಮನವೊಲಿಸಿ ತಮ್ಮೂರಿಗೆ (ಸಮಷ್ಟಿಪುರ) ಮರಳಿ ಕರೆತಂದಿದ್ದರು. ಆದರೆ, ಕಲ ದಿನಗಳ ಬಳಿಕ, ಆಕೆ ನಾಪತ್ತೆಯಾಗಿದ್ದರು. ಸಾಕ್ಷಿ ಬಗ್ಗೆ ಆಕೆಯ ತಾಯಿ ಪ್ರಶ್ನಿಸಿದಾಗ, ಮತ್ತೆ ಮನೆ ತೊರೆದು ಹೋಗಿದ್ದಾಳೆ ಎಂದು ಆರೋಪಿ ಸಿಂಗ್ ಹೇಳಿದ್ದರು. ಆದರೆ, ಅನುಮಾನಗೊಂಡ ತಾಯಿ ಪೊಲೀಸರಿಗೆ ದೂರು ನೀಡಿದ್ದರು ಎಂದು ವರದಿಯಾಗಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಿಂಗ್‌ ಅವರ ನಿವಾಸದಲ್ಲಿ ಬೀಗ ಹಾಕಿದ್ದ ಶೌಚಾಲಯದಲ್ಲಿ ಕೆಟ್ಟ ವಾಸನ ಬರುತ್ತಿರುವುದನ್ನು ಗಮನಿಸಿದ ಪೊಲೀಸರು, ಶೌಚಾಲಯವನ್ನು ಪರಿಶೀಲಿಸಿದ್ದಾರೆ. ಆಗ, ಆಕೆಯ ಮೃತದೇಹ ದೊರೆತಿದೆ. ಸಿಂಗ್‌ ಅವರನ್ನು ವಿಚಾರಣೆ ಒಳಪಡಿಸಿದಾಗ ತಾನೇ ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...