ಹೆರಿಗೆ ರಜೆ ಮಹಿಳೆಯರ ಸಂತಾನೋತ್ಪತ್ತಿ ಹಕ್ಕುಗಳ ಅವಿಭಾಜ್ಯ ಅಂಗ: ಸುಪ್ರೀಂ ಕೋರ್ಟ್

Date:

ಹೆರಿಗೆ ರಜೆಯು ಹೆರಿಗೆ ಸೌಲಭ್ಯಗಳ ಅವಿಭಾಗ್ಯ ಅಂಗವಾಗಿದೆ. ಮಾತ್ರವಲ್ಲ, ಮಹಿಳೆಯರ ಸಂತಾನೋತ್ಪತ್ತಿ ಹಕ್ಕುಗಳ ಪ್ರಮುಖ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.

ಹೆರಿಗೆ ರಜೆಯ ಕುರಿತಾಗಿ ತಮಿಳುನಾಡಿನ ಸರ್ಕಾರಿ ಶಿಕ್ಷಕಿಯೊಬ್ಬರು ಎರಡನೇ ಮದುವೆಯಾಗಿ, ಮಗುವಿಗೆ ಜನ್ಮ ನೀಡಿದ್ದರು. ಆದರೆ, ಅವರಿಗೆ ಹೆರಿಗೆ ರಜೆ ನೀಡಲು ನಿರಾಕರಿಸಲಾಗಿತ್ತು.

“ಶಿಕ್ಷಕಿಯು ಮೊದಲ ಮದುವೆಯಾಗಿದ್ದಾಗ ಇಬ್ಬರು ಮಕ್ಕಳಿಗೆ ಜನ್ಮ ನೀಡಿದ್ದರು. ಈಗ, ಎರಡನೇ ವಿವಾಹವಾದ ಬಳಿಕ ಮತ್ತೊಂದು ಮಗುವಿಗೆ ಜನ್ಮ ನೀಡಿದ್ದಾರೆ. ಅವರಿಗೆ ರಜೆ ನೀಡಲು ಸಾಧ್ಯವಿಲ್ಲ” ಎಂದಿದ್ದ ಶಿಕ್ಷಣ ಇಲಾಖೆ, ಹೆರಿಗೆ ರಜೆ ನೀಡಲು ನಿರಾಕರಿಸಿತ್ತು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಣ ಇಲಾಖೆಯ ಧೋರಣೆಯ ವಿರುದ್ಧ ಶಿಕ್ಷಕಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಶಿಕ್ಷಕಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭೂಯಾನ್ ಅವರಿದ್ದ ಪೀಠವು ವಿಚಾರಣೆ ನಡೆಸಿದೆ. “ಯಾವುದೇ ಸಂಸ್ಥೆಯು ಮಹಿಳೆಯರ ಹೆರಿಗೆ ರಜೆಯ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದೆ.

ಅರ್ಜಿಯಲ್ಲಿ ಶಿಕ್ಷಕಿ, “ಮೊದಲ ಎರಡು ಮಕ್ಕಳನ್ನು ಹಡೆದ ಸಮಯದಲ್ಲಿ ತಾವು ನೌಕರಿಯಲ್ಲಿ ಇರಲಿಲ್ಲ. ಆಗ ಯಾವುದೇ ಹೆರಿಗೆ ರಜೆ ಅಥವಾ ಹೆರಿಗೆಗೆ ಸಂಬಂಧಿಸಿದ ಪ್ರಯೋಜನಗಳನ್ನು ಪಡೆದಿಲ್ಲ. 2ನೇ ವಿವಾಹವಾದ ಬಳಿಕ ನಾನು ನೌಕರಿಗೆ ಸೇರಿದೆ. ಈಗ ಹೆರಿಗೆ ರಜೆಯನ್ನು ಪಡೆಯುವ ಹಕ್ಕು ನನಗಿದೆ. ಆದರೆ, ಇಲಾಖೆ ಹೆರಿಗೆ ರಜೆ ನೀಡಲು ನಿರಾಕರಿಸುತ್ತಿದೆ” ಎಂದು ವಾದಿಸಿದ್ದರು.

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ವಕೀಲ ಕೆ.ವಿ. ಮುತ್ತುಕುಮಾರ್, “ತಮಿಳುನಾಡಿನ ಹೆರಿಗೆ ಸೌಲಭ್ಯಗಳಿಗೆ ಸಂಬಂಧಿಸಿದ ನಿಬಂಧನೆಗಳ ಅಡಿಯಲ್ಲಿ ಶಿಕ್ಷಕಿ ಈ ಹಿಂದೆ ಯಾವುದೇ ಸೌಲಭ್ಯಗಳನ್ನು ಪಡೆದಿಲ್ಲ. ಈಗ, ಅವರಿಗೆ ಹೆರಿಗೆ ರಜೆ ನೀಡದಿರುವ ಸರ್ಕಾರದ ನಿರ್ಧಾರವು ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘನೆಯಾಗಿದೆ” ಎಂದು ನ್ಯಾಯಾಲಯದ ಗಮನ ಸೆಳೆದರು.

ಈ ಲೇಖನ ಓದಿದ್ದೀರಾ?:ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷಗಳು: ಆಗಿದ್ದೇನು, ಆಗಬೇಕಿರುವುದೇನು?

ವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್‌, ಹೆರಿಗೆ ಸೌಲಭ್ಯಗಳ ವ್ಯಾಪ್ತಿಯನ್ನು ವಿಸ್ತರಿಸಿದೆ. ಹೆರಿಗೆ ರಜೆಯನ್ನು ಈಗ ಮೂಲಭೂತ ಸಂತಾನೋತ್ಪತ್ತಿ ಹಕ್ಕುಗಳ ಭಾಗವಾಗಿ ಗುರುತಿಸಲಾಗುತ್ತದೆ ಎಂದು ಹೇಳಿದೆ.

ಈ ಹಿಂದೆ, ಹೆರಿಗೆ ರಜೆ ನೀತಿಯಡಿಯಲ್ಲಿ, ಯಾವುದೇ ಮಹಿಳೆ ಮಗುವನ್ನು ಹೆತ್ತ ನಂತರ 12 ವಾರಗಳವರೆಗೆ ಪಾವತಿಸಿದ ಹೆರಿಗೆ ರಜೆಯನ್ನು ಪಡೆಯಲು ಅವಕಾಶವಿತ್ತು. 2017ರಲ್ಲಿ, ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಹೆರಿಗೆ ಸೌಲಭ್ಯ ಕಾಯ್ದೆಗೆ ಗಮನಾರ್ಹ ತಿದ್ದುಪಡಿಗಳನ್ನು ಮಾಡಲಾಗಿದ್ದು, ಎಲ್ಲ ಮಹಿಳಾ ಉದ್ಯೋಗಿಗಳಿಗೆ ಹೆರಿಗೆ ರಜೆಯನ್ನು 26 ವಾರಗಳಿಗೆ ಹೆಚ್ಚಿಸಲಾಗಿದೆ. ಮಾತ್ರವಲ್ಲದೆ, ಮಗುವನ್ನು ದತ್ತು ಪಡೆದ ಮಹಿಳೆಯರು ಕೂಡ 12 ವಾರಗಳ ಹೆರಿಗೆ ರಜೆಯನ್ನು ಪಡೆಯಲು ಅವಕಾಶವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...