ಹರಿಯಾಣ ಚುನಾವಣೆ | ಬಿಎಸ್‌ಪಿ ಸೋಲಿಗೆ ಜಾಟ್‌ಗಳ ಜಾತಿವಾದಿ ಮನಸ್ಥಿತಿ ಕಾರಣ: ಮಾಯಾವತಿ

Date:

ಹರಿಯಾಣ ವಿಧಾನಸಭೆ ಚುನಾವಣಾ ಫಲಿತಾಂಶ ಬಂದ ಒಂದು ದಿನದ ಬಳಿಕ, “ಹರಿಯಾಣದಲ್ಲಿ ಬಿಎಸ್‌ಪಿ ಸೋಲಿಗೆ ಜಾಟ್ ಸಮುದಾಯದ ‘ಜಾತಿವಾದಿ ಮನಸ್ಥಿತಿಯೇ ಕಾರಣ” ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಹೇಳಿದ್ದಾರೆ. ಜೊತೆಗೆ ಜಾಟ್ ಸಮುದಾಯ ಕಾಂಗ್ರೆಸ್‌ಗೆ ಬೆಂಬಲ ನೀಡಿರುವುದೇ ಬಿಎಸ್‌ಪಿ ಸೋಲಿಗೆ ಕಾರಣ ಎಂದಿದ್ದಾರೆ.

ಹರಿಯಾಣದಲ್ಲಿ ಬಿಎಸ್‌ಪಿ ಭಾರತೀಯ ರಾಷ್ಟ್ರೀಯ ಲೋಕದಳದೊಂದಿಗೆ (ಐಎನ್‌ಎಲ್‌ಡಿ) ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದೆ. ಐಎನ್‌ಎಲ್‌ಡಿ ಒಟ್ಟಾಗಿ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ದಬ್ವಾಲಿ ಮತ್ತು ರಾನಿಯಾ ಎಂಬ ಎರಡು ಸ್ಥಾನಗಳಲ್ಲಿ ಗೆದ್ದು ಶೇಕಡ 4.14 ಮತಗಳನ್ನು ಪಡೆದಿದೆ. ಬಿಎಸ್‌ಪಿ ಕೇವಲ ಶೇಕಡ 1.82ರಷ್ಟು ಮತಗಳನ್ನು ಪಡೆದಿದೆ. ಆದರೆ ಯಾವುದೇ ಕ್ಷೇತ್ರದಲ್ಲೂ ಜಯಗಳಿಸಿಲ್ಲ.

ಈ ಬಗ್ಗೆ ಬುಧವಾರ ನವದೆಹಲಿಯಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಮಾಯಾವತಿ, ಹರಿಯಾಣದ ಜಾಟ್ ಸಮುದಾಯವು ರಾಜ್ಯ ಮತ್ತು ಕೇಂದ್ರದಲ್ಲಿ ತನ್ನ ಸರ್ಕಾರದ ರೈತ ವಿರೋಧಿ ನೀತಿಯಿಂದಾಗಿ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದೆ. ಅದರಿಂದಾಗಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಹೆಚ್ಚಿನ ಜಾಟ್‌ಗಳು ಕಾಂಗ್ರೆಸ್‌ಗೆ ಮತ ಹಾಕಿದರು. ಜಾಟ್‌ಗಳು ಬೇರೆ ಬೇರೆ ಮೈತ್ರಿಗಳಿಗೆ ಮತ ವಿಭಜನೆಯಾಗದಂತೆ ನೋಡಿಕೊಂಡರು. ಐಎನ್‌ಎಲ್‌ಡಿ-ಬಿಎಸ್‌ಪಿ ಮೈತ್ರಿಕೂಟವೂ ಕೂಡಾ ಜಾಟ್ ಸಮುದಾಯದ ಮತವನ್ನು ಅತೀ ಕಡಿಮೆ ಪಡೆದಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಿಎಸ್‌ಪಿ ರಾಷ್ಟ್ರ ಘಟಕದ ಅಧ್ಯಕ್ಷೆಯಾಗಿ ಮಾಯಾವತಿ ಮರು ಆಯ್ಕೆ

“ಜಾಟ್ ಸಮುದಾಯದ ಜಾತಿವಾದಿ ಮನಸ್ಥಿತಿಯಿಂದಾಗಿ ಬಿಎಸ್‌ಪಿ ಅಭ್ಯರ್ಥಿಗಳು ಜಾಟ್‌ಗಳ ಮತಗಳನ್ನು ಪಡೆದಿಲ್ಲ. ಮತ್ತೊಂದೆಡೆ, ಬಿಎಸ್‌ಪಿಯ ದಲಿತ ಮತಗಳು ಸಂಪೂರ್ಣವಾಗಿ ಐಎನ್‌ಎಲ್‌ಡಿ ಅಭ್ಯರ್ಥಿಗಳಿಗೆ ವರ್ಗಾವಣೆಯಾಗಿದೆ. ಐಎನ್‌ಎಲ್‌ಡಿಯಲ್ಲಿನ ಚೌತಾಲ ಕುಟುಂಬದ ಬಿರುಕಿನಿಂದ ಜಾಟ್‌ ಮತಗಳು ಕಾಂಗ್ರೆಸ್‌ಗೆ ಹೋಗಿದೆ” ಎಂದು ಹೇಳಿದರು.

ಹರಿಯಾಣದಲ್ಲಿ ಜಾಟ್‌ಗಳು ಮತ್ತು ಜಾಟೇತರರ ನಡುವೆ ಚುನಾವಣೆ ನಡೆದಂತಾಗಿದೆ. ಇದು ಬಿಎಸ್‌ಪಿಗೆ ಹಾನಿ ಮಾಡಿದೆ, ಬಿಜೆಪಿ ಲಾಭ ನೀಡಿದೆ. ನಾವು ಐಎನ್‌ಎಲ್‌ಡಿ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಆದರೆ ನಮಗೆ ಜಾಟ್ ಮತಗಳು ಬರಲಿಲ್ಲ. ಅವರು ಕಾಂಗ್ರೆಸ್‌ಗೆ ಮತ ಹಾಕಿದರು. ಬಿಎಸ್‌ಪಿಗೆ ದಲಿತರ ಮತಗಳು ಮಾತ್ರ ಲಭಿಸಿದೆ. ಜಾಟ್‌ಗಳ ಶೇಕಡ 2-3ರಷ್ಟು ಮತಗಳನ್ನು ನಾವು ಪಡೆದಿದ್ದರೂ ಕೂಡಾ ಗೆಲ್ಲಬಹುದಿತ್ತು” ಎಂದು ಮಾಯಾವತಿ ಅಭಿಪ್ರಾಯಿಸಿದ್ದಾರೆ.

ಹರಿಯಾಣದಲ್ಲಿ ನಿನ್ನೆ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆದಿದೆ. ಬಿಜೆಪಿ 48 ಸ್ಥಾನಗಳನ್ನು ಪಡೆದರೆ ಕಾಂಗ್ರೆಸ್ 37 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...