ಪಶ್ಚಿಮ ಬಂಗಾಳದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

Date:

ಕಳೆದ ವರ್ಷ ಪಶ್ಚಿಮ ಬಂಗಾಳದ ಆರ್‌ಜಿಕರ್‌ ಮೆಡಿಕಲ್‌ ಕಾಲೇಜಿನ ಟ್ರೈನಿ ವೈದ್ಯೆಯನ್ನು ಡ್ಯೂಟಿಯಲ್ಲಿದ್ದಾಗಲೇ ಅತ್ಯಾಚಾರ ಮಾಡಿ ಭೀಕರವಾಗಿ ಕೊಲೆ ಮಾಡಿದ್ದ ಪ್ರಕರಣ ದೇಶಾದ್ಯಂತ ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು. ಕೇವಲ ಆರು ತಿಂಗಳಲ್ಲಿ ಪ್ರಕರಣದ ತನಿಖೆ ಮುಗಿಸಿ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇದೀಗ ಪಶ್ಚಿಮ ಬರ್ಧಮಾನ್ ಜಿಲ್ಲೆಯಲ್ಲಿ ಒಡಿಶಾ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಶನಿವಾರ (ಅ.11) ವರದಿಯಾಗಿದೆ. ಮೆಡಿಕಲ್‌ ಕಾಲೇಜಿನ ಆವರಣದ ಬಳಿಯೇ ಈ ಘಟನೆ ನಡೆದಿದೆ.

ಶುಕ್ರವಾರ (ಅ. 10) ರಾತ್ರಿ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ಆವರಣದ ಹೊರಗೆ ಎರಡನೇ ವರ್ಷದ ವಿದ್ಯಾರ್ಥಿನಿ ತನ್ನ ಸ್ನೇಹಿತರೊಬ್ಬರ ಜೊತೆ ಊಟಕ್ಕೆ ಹೋಗಿದ್ದಾಗ ದೌರ್ಜನ್ಯ ನಡೆದಿದೆ ಎಂದು ಆಕೆಯ ಕುಟುಂಬಸ್ಥರು ತಿಳಿಸಿದ್ದಾರೆ.

ಒಡಿಶಾದ ಜಲೇಶ್ವರ ಮೂಲದ ಸಂತ್ರಸ್ತ ವಿದ್ಯಾರ್ಥಿನಿ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿಯ ಕುಟುಂಬ ಸದಸ್ಯರು ನೀಡಿದ ದೂರಿನ ಆಧರಿಸಿ ನಾವು ತನಿಖೆ ಪ್ರಾರಂಭಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ (ಅಕ್ಟೋಬರ್ 10) ರಾತ್ರಿ 8-8.30ರ ನಡುವೆ ವಿದ್ಯಾರ್ಥಿನಿ ತನ್ನ ಸ್ನೇಹಿತೆಯೊಂದಿಗೆ ಕ್ಯಾಂಪಸ್ ಹೊರಗೆ ಹೋಗಿದ್ದರು. ಈ ವೇಳೆ ಮೂವರು ಅಪರಿಚಿತ ವ್ಯಕ್ತಿಗಳು ಅಲ್ಲಿಗೆ ಬಂದಿದ್ದಾರೆ. ಈ ವೇಳೆ ಸ್ನೇಹಿತೆ ಆಕೆಯನ್ನು ಒಂಟಿಯಾಗಿ ಬಿಟ್ಟು ಹೋಗಿದ್ದಾಳೆ. ಆ ವ್ಯಕ್ತಿಗಳು ಆಕೆಯ ಫೋನ್ ಕಸಿದುಕೊಂಡು ಕ್ಯಾಂಪಸ್‌ ಹೊರಗಿನ ಕಾಡಿಗೆ ಕರೆದೊಯ್ದು, ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.

ಆರೋಪಿಗಳು ವಿದ್ಯಾರ್ಥಿನಿ ಮೊಬೈಲ್ ಫೋನ್ ಹಿಂತಿರುಗಿಸಲೂ ಹಣಕ್ಕೆ ಬೇಡಿಕೆ ಇಟ್ಟಿದ್ದರು. ವಿದ್ಯಾರ್ಥಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ ಬಿಹಾರ | ಸತ್ತಿದ್ದಾರೆಂದು ಮತಪಟ್ಟಿಯಿಂದ ಕಿತ್ತು ಹಾಕಲಾಗಿದ್ದವರು ಬದುಕಿ ಬಂದಿದ್ದಾರೆ!

ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ತಂಡವು ಸಂತ್ರಸ್ತೆ ಮತ್ತು ಆಕೆಯ ಪೋಷಕರನ್ನು ಭೇಟಿ ಮಾಡಲು ದುರ್ಗಾಪುರಕ್ಕೆ ತೆರಳುತ್ತಿದೆ. “ಬಂಗಾಳದಲ್ಲಿ ಮಹಿಳೆಯರ ಮೇಲಿನ ಅಪರಾಧ ಹೆಚ್ಚುತ್ತಿದೆ. ಇಂತಹ ಪ್ರಕರಣಗಳಲ್ಲಿ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಇದು ದುರದೃಷ್ಟಕರ. ಇಂತಹ ಅಪರಾಧಗಳನ್ನು ತಡೆಯಲು ಒಟ್ಟಾಗಿ ಕೆಲಸ ಮಾಡಲು ಮುಖ್ಯಮಂತ್ರಿಗಳು ಮುಂದೆ ಬರಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಎನ್‌ಸಿಡಬ್ಲ್ಯು ಸದಸ್ಯೆ ಅರ್ಚನಾ ಮಜುಂದಾರ್ ಹೇಳಿದ್ದಾಗಿ ವರದಿಗಳು ವಿವರಿಸಿವೆ.

ಪಶ್ಚಿಮ ಬಂಗಾಳ ರಾಜ್ಯ ಆರೋಗ್ಯ ಇಲಾಖೆ ಶನಿವಾರ (ಅಕ್ಟೋಬರ್ 11) ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನಿಂದ ವರದಿ ಕೇಳಿದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...