ಮೇಘಾಲಯ | ಕುಲಪತಿಯಿಂದ ಅಧಿಕಾರ ದುರುಪಯೋಗ; ವಜಾಗೆ ಆಗ್ರಹಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

Date:

ಮೇಘಾಲಯದ ರಾಜಧಾನಿ ಶಿಲ್ಲಾಂಗ್‌ನಲ್ಲಿರುವ ಈಶಾನ್ಯ ಹಿಲ್ ವಿಶ್ವವಿದ್ಯಾಲಯದಲ್ಲಿ (ಎನ್‌ಇಎಚ್‌ಯು) ಉದ್ವಿಗ್ನತೆ ಮುಂದುವರೆದಿದೆ. ವಿಶ್ವವಿದ್ಯಾಲಯದ ಕುಲಪತಿ ಪ್ರಭಾ ಶಂಕರ್ ಶುಕ್ಲಾ ಅವರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನೂ ವಿದ್ಯಾರ್ಥಿಗಳು ಆರಂಭಿಸಿದ್ದಾರೆ.

ಎನ್‌ಇಎಚ್‌ಯುನ ಸ್ಟೂಡೆಂಟ್ಸ್ ಯೂನಿಯನ್ (NEHUSU) ಮತ್ತು ಖಾಸಿ ವಿದ್ಯಾರ್ಥಿ ಸಂಘ (KSU)  ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. “ಕುಲಪತಿ ಪ್ರಭಾ ಅವರು ಅಧಿಕಾರದ ದುರುಪಯೋಗ ಮಾಡಿಕೊಂಡಿದ್ದಾರೆ. ಅವರನ್ನು ಸೇವೆಯಿಂದ ವಜಾಗೊಳಿಸಬೇಕು. ರಿಜಿಸ್ಟ್ರಾರ್ ಮತ್ತು ಡೆಪ್ಯುಟಿ ರಿಜಿಸ್ಟ್ರಾರ್ ಪದಚ್ಯುತಿಗೊಳಿಸಬೇಕು. ಪರಿಷ್ಕೃತ ಹಾಸ್ಟೆಲ್ ಶುಲ್ಕಗಳು, ಶುದ್ಧ ಕುಡಿಯುವ ನೀರು, ವೈ-ಫೈ ಹಾಗೂ ಆಂಬ್ಯುಲೆನ್ಸ್ ಸೇವೆಗಳು ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು” ಎಂದು ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ.

“ನಮ್ಮ ವಿಶ್ವವಿದ್ಯಾನಿಲಯದ ಗುಣಮಟ್ಟ ಕುಸಿಯುತ್ತಿದೆ. ವಿಶ್ವವಿದ್ಯಾಲಯದಲ್ಲಿ ನ್ಯಾಯಸಮ್ಮತತೆ ಇರಬೇಕು. ಅಧಿಕಾರ ದುರುಪಯೋಗಕ್ಕೆ ಅವಕಾಶ ಕೊಡಬಾರದು. ಉಪಕುಲಪತಿಯನ್ನು ಹೊರಹಾಕಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪಕುಲಪತಿಗಳು ತಮ್ಮ ಸ್ವಾರ್ಥಕ್ಕಾಗಿ ವಿಶ್ವವಿದ್ಯಾನಿಲಯವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ತಮ್ಮ ತಾಳಕ್ಕೆ ತಕ್ಕಂತೆ ನಡೆದುಕೊಳ್ಳುವವರನ್ನು ರಿಜಿಸ್ಟಾರ್ ಮತ್ತು ಡೆಪ್ಯೂಟಿ ರಿಜಿಸ್ಟ್ರಾರ್ ಆಗಿ ನೇಮಿಸಿಕೊಂಡಿದ್ದಾರೆ. ಈ ಅಧಿಕಾರಿಗಳು ತಾವು ಮಾಡಬೇಕಾದ ಕೆಲಸಕ್ಕೆ ಸಂಪೂರ್ಣವಾಗಿ ಸಮರ್ಥರಲ್ಲ” ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

“ಕುಲಪತಿ, ರಿಜಿಸ್ಟಾರ್‌ ಓಂಕಾರ್ ಸಿಂಗ್ ಮತ್ತು ಡೆಪ್ಯೂಟಿ ರಿಜಿಸ್ಟಾರ್‌ ಅಮಿತ್ ಗುಪ್ತಾ ಅಧಿಕಾರದಿಂದ ಕೆಳಗಿಳಿಯುವವರೆಗೂ ಉಪವಾಸ ಸತ್ಯಾಗ್ರಹ ಮುಂದುವರೆಯಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ವಿದ್ಯಾರ್ಥಿಗಳ ಹೋರಾಟಕ್ಕೆ ಎನ್‌ಇಎಚ್‌ಯು ಬೋಧಕರ ಸಂಘ (NEHUTA) ಬೆಂಬಲ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...