ಮೇಹುಲ್ ಚೋಕ್ಸಿಗೆ ಸೇರಿದ 46 ಕೋಟಿ ರೂ. ಮೌಲ್ಯದ ಆಸ್ತಿ ಹರಾಜು; ಕೋರ್ಟ್‌ ಅನುಮತಿ

Date:

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) ವಂಚಿಸಿ, ದೇಶದಿಂದ ಪರಾರಿಯಾಗಿರುವ ಉದ್ಯಮಿ ಮೇಹುಲ್ ಚೋಕ್ಸಿಗೆ ಸಂಬಂಧಿಸಿದ 46 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹರಾಜು ಹಾಕಲು ಮುಂಬೈ ವಿಶೇಷ ನ್ಯಾಯಾಲಯವು ಅನುಮತಿ ನೀಡಿದೆ. ಹರಾಜಜಿನಿಂದ ಬಂದ ಹಣವನ್ನು ನ್ಯಾಯಾಲಯದ ಹೆಸರಿನಲ್ಲಿ ಸ್ಥಿರ ಠೇವಣಿಯಾಗಿ ಇರಿಸುವಂತೆ ಸೂಚಿಸಿದೆ.

ಮುಂಬೈನಲ್ಲಿರುವ ತಮ್ಮ ‘ಗೀತಾಂಜಲಿ ಜೆಮ್ಸ್ ಲಿಮಿಟೆಡ್‌’ ಸಂಸ್ಥೆಯ ಹೆಸರಿನಲ್ಲಿ ಚೋಕ್ಸಿ ಅವರು ಪಿಎನ್‌ಬಿಯಿಂದ ಬೃಹತ್ ಮೊತ್ತದ ಸಾಲ ಪಡೆದುಕೊಂಡಿದ್ದರು. ಸಾವವನ್ನು ಮರುಪಾವತಿ ಮಾಡದೆ, 2014ರಿಂದ 17ರವರೆಗೆ 14,850 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಮೇಹುಲ್ ಚೋಕ್ಸಿ ಅವರಿಗೆ ಸಂಬಂಧಿಸಿದ ಫ್ಲಾಟ್‌ಗಳು ಮತ್ತು ರತ್ನಗಳು ಸೇರಿದಂತೆ 13 ಅಸುರಕ್ಷಿತ ಆಸ್ತಿಗಳನ್ನು ಹರಾಜು ಹಾಕಲು ಪಿಎನ್‌ಬಿ ನಿರ್ಧರಿಸಿತ್ತು. ಅದಕ್ಕಾಗಿ, ನ್ಯಾಯಾಲಯದ ಅನುಮತಿಗಾಗಿ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿರುವ ವಿಶೇಷ ನ್ಯಾಯಾಲಯವು, ಹರಾಜಿಗೆ ಅನುಮತಿ ನೀಡಿದೆ.

ಹರಾಜು ಹಾಕಲು ಗುರುತಿಸಲಾಗಿರುವ ಆಸ್ತಿಗಳಲ್ಲಿ ಬೋರಿವಲಿಯಲ್ಲಿರುವ ನಾಲ್ಕು ಫ್ಲಾಟ್‌ಗಳು (ಸುಮಾರು ರೂ.2.6 ಕೋಟಿ), ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ನಲ್ಲಿನ ಭಾರತ್ ಡೈಮಂಡ್ ಬೋರ್ಸ್‌ನ ವಾಣಿಜ್ಯ ಘಟಕ (ಸುಮಾರು ರೂ.19.7 ಕೋಟಿ), ಗೋರೆಗಾಂವ್ ಪೂರ್ವದಲ್ಲಿ ಆರು ಕೈಗಾರಿಕಾ ಗಾಲಾಗಳು ಹಾಗೂ ಗೋರೆಗಾಂವ್‌ನ ಉದ್ಯೋಗ್ ನಗರದಲ್ಲಿ ಮತ್ತೊಂದು ಗಾಲಾ ಸೇರಿವೆ. ಜೊತೆಗೆ,ಜೈಪುರದಲ್ಲಿರುವ ಬೆಳ್ಳಿ ಇಟ್ಟಿಗೆಗಳು, ಹವಳದ ಕಲ್ಲುಗಳು ಹಾಗೂ ಯಂತ್ರಗಳನ್ನು ಸಹ ಒಳಗೊಂಡಿದೆ. ಈ ಆಸ್ತಿಗಳ ಮೌಲ್ಯಮಾಪನವನ್ನು 2018ರಲ್ಲಿ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣವನ್ನು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಪ್ರಕರಣದಲ್ಲಿ ಜೋಕ್ಸಿಯನ್ನು ಆರ್ಥಿಕ ಅಪರಾಧಿ ಎಂದು ಘೋಷಿಸಲಾಗಿದೆ. ಚೋಕ್ಸಿ ಭಾರತದಿಂದ ಪರಾರಿಯಾಗಿದ್ದು, ಬೆಲ್ಜಿಯಂನಲ್ಲಿ ನೆಲೆಸಿದ್ದರು. ಅವರನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಕಳೆದ ತಿಂಗಳು, ಬೆಲ್ಜಿಯಂ ನ್ಯಾಯಾಲಯವು ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮತಿ ನೀಡಿದೆ.

ಬೆಲ್ಜಿಯಂ ನ್ಯಾಯಾಲಯದ ಆದೇಶದ ಪ್ರಕಾರ, ಚೋಕ್ಸಿ ಬೆಲ್ಜಿಯಂ ಪ್ರಜೆಯಲ್ಲ. ಅವರು ವಿದೇಶಿ ಪ್ರಜೆ. ಚೋಕ್ಸಿ ವಿರುದ್ಧ ಕ್ರಿಮಿನಲ್ ಗ್ಯಾಂಗ್‌ನಲ್ಲಿ ಭಾಗವಹಿಸುವುದು, ವಂಚನೆ, ಭ್ರಷ್ಟಾಚಾರ ಹಾಗೂ ನಕಲಿ ದಾಖಲೆಗಳ ಬಳಕೆ ಆರೋಪಗಳಿವೆ. ಇವೆಲ್ಲವನ್ನೂ ಗಂಭೀರ ಅಪರಾಧಗಳೆಂದು ಪರಿಗಣಿಸಲಾಗಿದೆ. ಆದ್ದರಿಂದ, ಅವರನ್ನು ಭಾರತಕ್ಕೆ ಹಸ್ತಾಂತರಿಸಬಹುದು ಎಂದು ಹೇಳಿತ್ತು.

ಬೆಲ್ಜಿಯಂ ನ್ಯಾಯಾಲಯದ ಆದೇಶವನ್ನು ಚೋಕ್ಸಿ ಅವರು ಬೆಲ್ಜಿಯಂನ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಗ್ರಾಹಕರಿಗೆ ಬಂಪರ್‌ ಆಫರ್! ಗ್ರಾಂ ಚಿನ್ನಕ್ಕೆ ₹8-10 ಸಾವಿರ?

ದಿನೇ ದಿನೇ ಏರುತ್ತಲೇ ಇದ್ದ ಚಿನ್ನದ ದರ ಕಳೆದ ಒಂದು ವಾರದಿಂದ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...