ಮಣಿಪುರ ಹಿಂಸಾಚಾರ | ಮೈತೇಯಿ ನಾಯಕನ ಬಂಧನ: ನಿಷೇಧಾಜ್ಞೆ ನಡುವೆಯೂ ರಾತ್ರಿಯಿಡೀ ಪ್ರತಿಭಟನೆ

Date:

ಮೈತೇಯಿ ಸಂಘಟನೆಯ ನಾಯಕ ಮತ್ತು ಇತರ ನಾಲ್ವರ ಬಂಧನವನ್ನು ವಿರೋಧಿಸಿ ಮಣಿಪುರದಲ್ಲಿ ಪ್ರತಿಭಟನೆಗಳು ಮುಂದುವರೆದಿದೆ. ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದರೂ ಪ್ರತಿಭಟನಾಕಾರರು ರಾತ್ರಿಯಿಡೀ ಪಂಜಿನ ಮೆರವಣಿಗೆಗಳನ್ನು ನಡೆಸಿದರು. ಸರ್ಕಾರಿ ಕಟ್ಟಡವನ್ನು ಸುಟ್ಟುಹಾಕಿದ್ದು, ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆದಿದೆ.

ಇಂಫಾಲ್ ಪಶ್ಚಿಮ ಜಿಲ್ಲೆಯ ಕ್ವಾಕಿಥೆಲ್ ಮತ್ತು ಸಿಂಗ್ಜಮೈನಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಗಳ ನಡುವೆ ಘರ್ಷಣೆ ನಡೆದಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಹಲವು ಸುತ್ತು ಅಶ್ರುವಾಯು ಪ್ರಯೋಗಿಸಿದ್ದಾರೆ, ರಬ್ಬರ್‌ ಗುಂಡು ಹಾರಿಸಿದ್ದಾರೆ ಎಂದು ಸೋಮವಾರ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಮಣಿಪುರ ಹಿಂಸಾಚಾರ | ಐದು ದಿನ ಇಂಟರ್‌ನೆಟ್ ಸ್ಥಗಿತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಫಾಲ್ ಪೂರ್ವ ಜಿಲ್ಲೆಯ ಯೈರಿಪೋಕ್ ತುಲಿಹಾಲ್‌ನಲ್ಲಿರುವ ಉಪ-ವಿಭಾಗೀಯ ಕಲೆಕ್ಟರ್(ಎಸ್‌ಡಿಸಿ) ಕಚೇರಿಗೆ ಬೆಂಕಿ ಹಚ್ಚಲಾಗಿದೆ. ಕಟ್ಟಡ ಭಾಗಶಃ ಹಾನಿಗೊಳಗಾಗಿದೆ. ಅಧಿಕೃತ ದಾಖಲೆಗಳು ನಾಶವಾಗಿವೆ. ತನಿಖೆ ಆರಂಭಿಸಲಾಗಿದೆ. ಅಹಿತಕರ ಘಟನೆಗಳನ್ನು ತಡೆಗಟ್ಟಲು ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇಂಫಾಲ್ ಪಶ್ಚಿಮ ಜಿಲ್ಲೆಯ ಸೆಕ್ಮೈ ಮತ್ತು ಕೊಯಿರೆಂಗೈ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಸಂಚಾರ ಮಾಡುವುದಕ್ಕೆ ತೊಂದರೆ ಉಂಟು ಮಾಡುವ ಉದ್ದೇಶದಿಂದ ಪ್ರತಿಭಟನಾಕಾರರು ರಸ್ತೆಗಳಲ್ಲಿ ಮಣ್ಣಿನ ದಿಬ್ಬಗಳನ್ನು ಹಾಕಿರುವುದು ಕಂಡುಬಂದಿದೆ. ಇಂಫಾಲ್ ಪೂರ್ವ ಜಿಲ್ಲೆಯ ವಾಂಗ್ಖೈ, ಯೈರಿಪೋಕ್ ಮತ್ತು ಖುರೈನಲ್ಲಿ ರಸ್ತೆಗಳ ಮಧ್ಯದಲ್ಲಿ ಟೈರ್‌ಗಳನ್ನು ಸುಟ್ಟು ಹಾಕಲಾಗಿದ್ದು, ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆದಿದೆ. ಇಲ್ಲಿಯೂ ಅಶ್ರುವಾಯು ಪ್ರಯೋಗಿಸಲಾಗಿದೆ.

ಇನ್ನು ಮಹಿಳೆಯರ ಗುಂಪುಗಳೂ ಪ್ರತಿಭಟನೆಯಲ್ಲಿ ಭಾಗಿಯಾಗಿದೆ. ಖುರೈನಲ್ಲಿ ಪ್ರತ್ಯೇಕವಾಗಿ ಪಂಜಿನ ಮೆರವಣಿಗೆ ನಡೆಸಿದೆ. ಸದ್ಯ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ರಾಜ್ಯದಲ್ಲಿ ತಕ್ಷಣ ಸರ್ಕಾರ ರಚನೆಯಾಗಬೇಕು ಎಂದು ಮಹಿಳೆಯರ ಗುಂಪು ಆಗ್ರಹಿಸಿದೆ.

2023ರ ಮೇ ತಿಂಗಳಿನಿಂದ ಮಣಿಪುರದಲ್ಲಿ ನಿರಂತರವಾಗಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಮೈತೇಯಿ ಮತ್ತು ಕುಕಿ ಜನಾಂಗದ ನಡುವೆ ನಡೆದ ಈ ಹಿಂಸಾಚಾರದಲ್ಲಿ 250ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಹಿಂಸಾಚಾರವನ್ನು ಹತ್ತಿಕ್ಕಲು ಬಿಜೆಪಿ ಸರ್ಕಾರ ವಿಫಲವಾಗುತ್ತಿದ್ದಂತೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಅದಾದ ಬಳಿಕ ಕೇಂದ್ರ ಸರ್ಕಾರವು ಫೆಬ್ರವರಿ 13ರಂದು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಿದೆ. 2027ರವರೆಗೆ ಅಧಿಕಾರಾವಧಿ ಹೊಂದಿರುವ ರಾಜ್ಯ ವಿಧಾನಸಭೆಯನ್ನು ಅಮಾನತಿನಲ್ಲಿ ಇರಿಸಲಾಗಿದೆ.

ಸದ್ಯ 2023ರಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದ ಹಲವು ಅಪರಾಧದಲ್ಲಿ ಭಾಗಿಯಾದ ಆರೋಪದಲ್ಲಿ ಮೈತೇಯಿ ಸಂಘಟನೆ ಅರಾಂಬೈ ಟೆಂಗೋಲ್‌ನ ನಾಯಕ ಕಾನನ್ ಸಿಂಗ್ ಮತ್ತು ಇತರ ನಾಲ್ವರನ್ನು ಬಂಧಿಸಲಾಗಿದೆ. ಈ ಬಂಧನ ಖಂಡಿಸಿ ಮಣಿಪುರದಾದ್ಯಂತ ಶನಿವಾರದಿಂದ ಪ್ರತಿಭಟನೆ, ಹಿಂಸಾಚಾರಗಳು ಭುಗಿಲೆದ್ದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...