ಕೆಆರ್‌ಎಸ್‌ನಿಂದ ಕಾವೇರಿಗೆ ಭಾರೀ ನೀರು; 100 ಅಡಿ ದಾಟಿದ ಮೆಟ್ಟೂರು ಡ್ಯಾಂ ನೀರಿನ ಮಟ್ಟ

Date:

ಕಳೆದ 90 ವರ್ಷಗಳಲ್ಲಿ ತಮಿಳುನಾಡಿನ ಮೆಟ್ಟೂರು ಜಲಾಶಯದಲ್ಲಿ ನೀರಿನ ಸಂಗ್ರಹವು 71ನೇ ಬಾರಿಗೆ 100 ಅಡಿಗಳನ್ನು ದಾಟಿದೆ. ಶನಿವಾರ ರಾತ್ರಿರ ವೇಳೆಗೆ ಜಲಾಶಯದ ನೀರಿನ ಮಟ್ಟವು 103.7 ಅಡಿಗಳಿಗೆ ಏರಿಕೆಯಾಗಿದೆ. ಕರ್ನಾಟಕದ ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಕೆಆರ್‌ಎಸ್‌ನಿಂದ ಕಾವೇರಿ ನದಿಗೆ 90,000 ಕ್ಯೂಸೆಕ್ಸ್‌ ನೀರನ್ನು ಹೊರಬಿಡಲಾಗುತ್ತಿದೆ. ಹೀಗಾಗಿ, ತಮಿಳುನಾಡಿಗೆ ಭಾರೀ ಪ್ರಮಾಣದ ನೀರು ಹರಿದುಹೋಗುತ್ತಿದ್ದು, ಮೆಟ್ಟೂರು ಜಲಾಶಯ ಭರ್ತಿಯಾಗುತ್ತಿದೆ.

ಮೆಟ್ಟೂರು ಅಣೆಕಟ್ಟಿನ ನೀರು ಸಂಗ್ರಹ ಸಾಮರ್ಥ್ಯವು 120 ಅಡಿಯಷ್ಟಿದ್ದು, ಸದ್ಯ, 103.7 ಅಡಿ ನೀರು ತುಂಬಿದೆ. ಜಲಾಶಯದಲ್ಲಿ ಸುಮಾರು 70 ಟಿಎಂಟಿ ಅಡಿ (70 ಸಾವಿರ ಮಿಲಿಯನ್ ಘನ ಅಡಿ) ನೀರು ಸಂಗ್ರಹವಾಗಿದೆ ಎಂದು ಅಧಿಕಾರಿಗಳು. ಜಲಾಶಯವು 93 ಟಿಎಂಸಿ ಅಡಿ ನೀರನ್ನು ಸಗ್ರಹಿಸುವ ಸಾಮರ್ಥ್ಯವನ್ನು ಹೊಂದಿದೆ.

ಕರ್ನಾಟಕದ ಕಬಿನಿ ಮತ್ತು ಕೆಆರ್‌ಎಸ್‌ ಅಣೆಕಟ್ಟುಗಳು ಸಂಪೂರ್ಣವಾಗಿ ತುಂಬಿವೆ. ಹೀಗಾಗಿ, ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಿಂದ ಒಟ್ಟು 1,20,000 ಕ್ಯೂಸೆಕ್ಸ್‌ ನೀರನ್ನು ಹರಿಬಿಡಲಾಗುತ್ತಿದೆ. ಕಾವೇರಿ ನದಿಗೆ ಮೂಲಕ ಮೆಟ್ಟೂರು ಅಣೆಕಟ್ಟೆಗೆ 1,23,000 ಕ್ಯೂಸೆಕ್ಸ್‌ ನೀರು ಹರಿದು ಹೋಗುತ್ತಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶನಿವಾರ ರಾತ್ರಿ 8 ಗಂಟೆಯ ವೇಳೆಗೆ, ಮೆಟ್ಟೂರು ಅಣೆಕಟ್ಟೆಗೆ ಒಳಹರಿವು 1.23 ಲಕ್ಷ ಕ್ಯೂಸೆಕ್ಸ್‌ ಇದ್ದು, ಹೊರಹರಿವು 1,000 ಕ್ಯೂಸೆಕ್ಸ್‌ ಇದೆ ಎಂದು ಮೆಟ್ಟೂರು ಅಧಿಕಾರಿಗಳು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮಿಳುನಾಡಿ ನೀರಾವರಿ ಮತ್ತು ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುವಲ್ಲಿ ಮೆಟ್ಟೂರು ಅಣೆಕಟ್ಟು ಪ್ರಮುಖ ಮೂಲವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...