ಸುಂದರ್ ವಿಕೆಟ್‌ ಕಿತ್ತು ಬೂಮ್ರಾ ಅಬ್ಬರ – ಗುಜರಾತ್ ತತ್ತರ; ಫೈನಲ್‌ಗಾಗಿ ನಾಳೆ ಮುಂಬೈ-ಪಂಜಾಬ್ ಕಾದಾಟ

Date:

ಮಾಡು ಇಲ್ಲವೇ ಮಡಿ ಪಂದ್ಯವೆಂದೇ ಪರಿಗಣಿಸಲಾಗಿದ್ದ ಐಪಿಎಲ್‌ನ ‘ಎಲಿಮಿನೇಟರ್’ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡ ಗೆದ್ದು ಬೀಗಿದೆ. ದಿಟ್ಟ ಹೋರಾಟ ನಡೆಸಿದ ಹೊರತಾಗಿಯೂ ಐಪಿಎಲ್ 2025 ಟೂರ್ನಿಯಿಂದ ಗುಜರಾತ್ ಟೈಟಾನ್ಸ್‌ ತಂಡ ಹೊರಬಿದ್ದಿದೆ. ಪಂದ್ಯದಲ್ಲಿ ಗೆದ್ದ ಮುಂಬೈ ತಂಡವು ಪಂಜಾಬ್ ತಂಡದ ಜೊತೆ ಭಾನುವಾರ ನಡೆಯಲಿರುವ ‘ಕ್ವಾಲಿಫೈಯರ್-2’ ಪಂದ್ಯದಲ್ಲಿ ಫೈನಲ್‌ಗಾಗಿ ಸೆಣೆಸಾಟ ನಡೆಸಲಿದೆ.

ಶುಕ್ರವಾರ, ಪಂಜಾಬ್‌ನ ನ್ಯೂ ಚಂಡೀಗಢದಲ್ಲಿರುವ ‘ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣ’ದಲ್ಲಿ ಮುಂಬೈ ಮತ್ತು ಗುಜರಾತ್ ನಡುವೆ ಭಾರೀ ಹಣಾಹಣಿ ನಡೆಯಿತು. ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ ಮುಂಬೈ ತಂಡ ಬರೋಬ್ಬರಿ 229 ರನ್‌ಗಳಿಸಿತ್ತು. ಬೃಹತ್ ಮೊತ್ತದ ಬೆನ್ನತ್ತಿದ ಗುಜರಾತ್ 8 ವಿಕೆಟ್‌ ನಷ್ಟದೊಂದಿಗೆ 208 ರನ್‌ಗಳನ್ನಷ್ಟೇ ಕಲೆಹಾಕಿ, ಸೋಲುಂಡಿತು.

ಗುಜರಾತ್ ತಂಡದಲ್ಲಿ ಸಾಯಿ ಸುದರ್ಶನ್ ಮತ್ತು ವಾಷಿಂಗ್ಟನ್ ಸುಂದರ್ ಅತ್ಯುತ್ತಮ ಆಟ ಪ್ರದರ್ಶಿಸಿದರು. ಸಾಯಿ ಸುದರ್ಶನ್ 49 ಎಸೆತಗಳನ್ನು ಎದುರಿಸಿ 80 ರನ್‌ಗಳಿಸಿದರೆ, ಸುಂದರ್ 24 ಎಸೆತಗಳನ್ನು ಎದುರಿಸಿ 48 ಕಲೆಹಾಕಿದರು. ಈ ಇಬ್ಬರೂ ಜೊತೆಯಾಟದಲ್ಲಿ 84 ರನ್‌ ಬಾರಿಸಿದರು. ಆದಾಗ್ಯೂ, ವಾಷಿಂಗ್ಟನ್ ಸುಂದರ್ ಅವರು ಜಸ್‌ಪ್ರೀತ್ ಬೂಮ್ರಾ ಅವರ ಅಬ್ಬರದ ಬೌಲಿಂಗ್‌ಗೆ ವಿಕೆಟ್‌ ಒಪ್ಪಿಸಿದರು. ಅಂತೆಯೇ, ಸಾಯಿ ಸುದರ್ಶನ್‌ ಕೂಡ ರಿಚರ್ಡ್‌ ಗ್ಲೀಸನ್ ಅವರ ಬೌಲಿಂಗ್‌ಗೆ ವಿಕೆಟ್‌ ಒಪ್ಪಿಸಿ, ಪೆವಿಲಿಯನ್‌ಗೆ ಮರಳಿದರು. ಇನ್ನು, ಉಳಿದ ಆಟಗಾರರು ಮುಂಬೈ ತಂಡದ ಬೌಲರ್‌ಗಳನ್ನು ಎದುರಿಸುವಲ್ಲಿ ವಿಫಲರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತ್ರಾಸದಾಯಕ ಸೆಣೆಸಾಟದ ನಡುವೆ 208 ರನ್‌ ಗಳಿಸಿದ ಗುಜರಾತ್, ಸೋಲುಂಡು ಟೂರ್ನಿಯಿಂದ ಹೊರನಡೆಯಿತು.

ಇನ್ನು, ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಕ್ವಾಲಿಫಯರ್-2’ ಪಂದ್ಯ ನಡೆಯಲಿದೆ. ಪಂದ್ಯದಲ್ಲಿ ಫೈನಲ್‌ ಪ್ರವೇಶಕ್ಕಾಗಿ ಮುಂಬೈ ಮತ್ತು ಪಂಜಾಬ್ ತಂಡಗಳ ನಡುವೆ ಹಣಾಹಣಿ ನಡೆಯಲಿದೆ. ಪಂದ್ಯದಲ್ಲಿ ಗೆದ್ದವರು. ಅದೇ ಸ್ಟೇಡಿಯಂನಲ್ಲಿ ಜೂನ್ 3ರಂದು ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಆಟವಾಡಲಿದ್ದಾರೆ. ಬಹುತೇಕ ಕ್ರಿಕೆಟ್ ಅಭಿಮಾನಿಗಳು ‘ಕ್ವಾಲಿಫಯರ್-2’ನಲ್ಲಿ ಪಂಜಾಬ್ ತಂಡ ಗೆಲ್ಲಬೇಕು. ಆರ್‌ಸಿಬಿ ಮತ್ತು ಪಂಜಾಬ್‌ ಫೈನಲ್‌ ಪಂದ್ಯ ನಡೆಯಬೇಕು. ಈ ಬಾರಿ, ಐಪಿಎಲ್‌ ಕಪ್‌ ಹೊಸ ವಿನ್ನರ್‌ಗಳ ಕೈಸೇರಬೇಕು ಎಂದು ಆಶಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...