ಜಮ್ಮು ಕಾಶ್ಮೀರ | ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ; ಕರ್ನಾಟಕದ ಇಬ್ಬರು ಸೇರಿ 20 ಮಂದಿ ಸಾವು

Date:

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಕನಿಷ್ಠ 20 ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಅವರಲ್ಲಿ ಕರ್ನಾಟಕದ ಇಬ್ಬರು ಬಲಿಯಾಗಿದ್ದಾರೆ. ಹತ್ತು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಕನಿಷ್ಠ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದಾರೆ.ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಸರನ್‌ನಲ್ಲಿ ಇಬ್ಬರು-ಮೂರು ಉಗ್ರರು ಪ್ರವಾಸಿಗರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | ಭಯೋತ್ಪಾದಕ ದಾಳಿ; ವೈದ್ಯ ಸೇರಿ 7 ಕಾರ್ಮಿಕರ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೈಸರನ್‌ ಜನಪ್ರಿಯ ಪ್ರವಾಸಿ ತಾಣವಾಗಿದ್ದು, ಕಾಲ್ನಡಿಗೆಯಲ್ಲಿ ಮಾತ್ರ ಸಾಗಬಹುದಾಗಿದೆ. ಇಲ್ಲಿ ಉಗ್ರರ ದಾಳಿ ನಡೆದ ತಕ್ಷಣ ಪೊಲೀಸ್ ತಂಡವು ಸೇನೆ ಮತ್ತು ಅರೆಸೈನಿಕ ಪಡೆಗಳೊಂದಿಗೆ ಸ್ಥಳಕ್ಕೆ ಧಾವಿಸಿದೆ. ಪ್ರವಾಸಿಗರನ್ನು ಸ್ಥಳಾಂತರಿಸುವ ಕಾರ್ಯವನ್ನು ಮೊದಲು ಮಾಡಿದೆ. ಹಾಗೆಯೇ ದಾಳಿಯ ಹಿಂದಿನ ಉಗ್ರರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ವರದಿಯಾಗಿದೆ.

ಈ ವರ್ಷ ಪ್ರವಾಸಿಗರ ಮೇಲೆ ನಡೆದ ಮೊದಲ ಉಗ್ರಗಾಮಿ ದಾಳಿ ಇದಾಗಿದೆ. ಕಳೆದ ವರ್ಷ ಮೇ ತಿಂಗಳಲ್ಲಿ ಕೊನೆಯ ಬಾರಿಗೆ ಉಗ್ರಗಾಮಿಗಳು ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದರು, ಆಗ ಇಬ್ಬರು ಪ್ರವಾಸಿಗರು ಗಾಯಗೊಂಡಿದ್ದರು. ಆ ಘಟನೆ ಪಹಲ್ಗಾಮ್‌ನಲ್ಲಿಯೇ ನಡೆದಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...