ವಿಶ್ವ ಸುಂದರಿ 2024 | ಜೆಕ್‌ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೋವಾ ಮುಡಿಗೇರಿದ ಕಿರೀಟ

Date:

ಸುಮಾರು 28 ವರ್ಷಗಳ ಬಳಿಕ ಭಾರತವು 71ನೇ ವಿಶ್ವ ಸುಂದರಿ ಸ್ಪರ್ಧೆಯನ್ನು ಆಯೋಜಿಸಿದ್ದು, ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೋವಾ ಅವರು 2024ನೇ ಸಾಲಿನ ವಿಶ್ವಸುಂದರಿ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ. ಲೆಬನಾನ್‌ನ ಯಾಸ್ಮಿನಾ ಜೈಟೌನ್ ರನ್ನರ್-ಅಪ್ ಆಗಿದ್ದಾರೆ.

ಮುಂಬೈನ ಬಿಕೆಸಿಯ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಈ ಸಮಾರಂಭವು ನಡೆದಿದ್ದು, 112 ಸುಂದರಿಯರು ಸ್ಪರ್ಧೆಯಲ್ಲಿ ಭಾಗಿಯಾಗಿದ್ದಾರೆ. ಕಳೆದ ವರ್ಷದ ವಿಶ್ವ ಸುಂದರಿ ವಿಜೇತೆ ಪೋಲೆಂಡ್‌ನ ಕರೋಲಿನಾ ಬಿಲಾವ್ಸ್ಕಾ ಕ್ರಿಸ್ಟಿನಾ ಪಿಸ್ಕೋವಾಗೆ ಕಿರೀಟಧಾರಣೆ ಮಾಡಿದರು.

ಈ ಸೌಂದರ್ಯ ಸ್ಪರ್ಧೆಯನ್ನು ಸೋನಿಲೈವ್‌ನಲ್ಲಿ ನೇರ ಪ್ರಸಾರ ಮಾಡಲಾಗಿದ್ದು, 140ಕ್ಕೂ ಅಧಿಕ ದೇಶಗಳು ಮತ್ತು ಪ್ರಾಂತ್ಯಗಳಲ್ಲಿ ಪ್ರಸಾರ ಮಾಡಲಾಗಿದೆ. ಈ ವರ್ಷ ಮಿಸ್‌ ಇಂಡಿಯಾ ವಿಜೇತೆ ಉಡುಪಿ ಜಿಲ್ಲೆಯ ಇನ್ನಂಜೆ ಮೂಲದ 22 ವರ್ಷದ ಸಿನಿ ಶೆಟ್ಟಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದು, ಅಗ್ರ 4ರೊಳಗೆ ಬರಲು ಅವರಿಗೆ ಸಾಧ್ಯವಾಗಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್, ಮಾಜಿ ವಿಶ್ವ ಸುಂದರಿ ಫಿಲಿಪ್ಪೀನ್ಸ್‌ನ ಮೇಗನ್ ಯಂಗ್ ಕಾರ್ಯಕ್ರಮ ನಿರ್ವಹಣೆ ಮಾಡಿದ್ದು ಸಮಾರಂಭದಲ್ಲಿ ನಟಿಯರಾದ ಕೃತಿ ಸನೋನ್, ಪೂಜಾ ಹೆಗ್ಡೆ ಮತ್ತು ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್, ರಜತ್ ಶರ್ಮಾ, ಸಮಾಜ ಸೇವಕಿ ಅಮೃತಾ ಫಡ್ನವಿಸ್, ವಿನೀತ್ ಜೈನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

28 ವರ್ಷಗಳ ಬಳಿಕ ಭಾರತದಲ್ಲಿ ವಿಶ್ವ ಸುಂದರಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಭಾರತದಲ್ಲಿ ಈ ಹಿಂದೆ 1996ರಲ್ಲಿ ವಿಶ್ವ ಸುಂದರಿ ಸ್ಪರ್ಧೆಯ 46ನೇ ಆವೃತ್ತಿಯನ್ನು ಆಯೋಜಿಸಲಾಗಿತ್ತು. ಆಗ ಗ್ರೀಸ್‌ನ ಐರಿನ್ ಸ್ಕ್ಲಿವಾ ವಿಶ್ವ ಸುಂದರಿ ಪಟ್ಟ ತನ್ನದಾಗಿಸಿಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...