ನಾಗರಿಕರ ಹತ್ಯೆಯ ತಪ್ಪುಗಳು ಮರುಕಳಿಸಬಾರದು: ಸೇನೆಗೆ ರಾಜನಾಥ್ ಸಿಂಗ್ ಸೂಚನೆ

Date:

ವಿಚಾರಣೆ ವೇಳೆಯಲ್ಲಿ ಸೇನೆಯಿಂದ ಮೃತಪಟ್ಟ ಮೂವರು ನಾಗರಿಕರ ಬಗ್ಗೆ ಸ್ಪಷ್ಟವಾಗಿ ಸೂಚನೆ ನೀಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ‘ಸೇನೆಯು ದೇಶವನ್ನು ಸುರಕ್ಷಿತವಾಗಿಡುತ್ತದೆ, ಆದರೆ ಕೆಲವೊಮ್ಮೆ ಇಂತಹ ತಪ್ಪುಗಳು ಉಂಟಾಗುತ್ತವೆ. ಮುಂದೆ ಇಂತಹ ತಪ್ಪುಗಳು ಮರುಕಳಿಸಬಾರದು’ ಎಂದು ಆದೇಶಿಸಿದ್ದಾರೆ.

‘ದೇಶದ ರಕ್ಷಣೆ ಮಾಡುವ ಸಂದರ್ಭದಲ್ಲಿ ನಾಗರಿಕರ ಹೃದಯವನ್ನು ಗೆಲ್ಲುವುದು ಸೇನೆಯ ಜವಾಬ್ದಾರಿಯಾಗಿದೆ’ ಎಂದು ಭದ್ರತಾ ಸ್ಥಿತಿಯ ಪರಿಶೀಲನೆಗಾಗಿ ಜಮ್ಮು ಕಾಶ್ಮೀರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಅವರು ತಿಳಿಸಿದ್ದಾರೆ.

“ನೀವು ದೇಶದ ರಕ್ಷಕರು. ದೇಶದ ಭದ್ರತೆಯನ್ನು ನಿಭಾಯಿಸುವ ಸಂದರ್ಭದಲ್ಲಿ ನಾಗರಿಕರ ಹೃದಯವನ್ನು ಗೆಲ್ಲುವುದು ಸಹ ನಿಮ್ಮ ಜವಾಬ್ದಾರಿಯಾಗಿದೆ. ಈ ದಿಸೆಯಲ್ಲಿಯೂ ನೀವು ಪ್ರಯತ್ನ ಮಾಡುತ್ತಿದ್ದೀರಿ. ಆದರೆ ಕೆಲವೊಮ್ಮೆ ತಪ್ಪುಗಳು ಸಂಭವಿಸುತ್ತದೆ. ದೇಶದ ನಾಗರಿಕರನ್ನು ನೋಯಿಸುವ ಇಂತಹ ತಪ್ಪುಗಳು ನಡೆಯಬಾರದು” ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಯೋತ್ಪಾದವನ್ನು ಕೊನೆಗೊಳಿಸಿ ಯುದ್ಧವನ್ನು ಗೆಲ್ಲಿ. ಹಾಗೆಯೇ ಇದೇ ಸಂದರ್ಭದಲ್ಲಿ ನಾಗರಿಕರ ಹೃದಯವನ್ನು ಗೆಲ್ಲಬೇಕು. ಇದು ನಿಮ್ಮ ಹೊಣೆಗಾರಿಕೆಯಾಗಿದೆ. ಭಾರತೀಯ ಸೇನೆ ಸಾಮಾನ್ಯ ಸೇನೆಯಾಗಿ ಉಳಿದಿಲ್ಲ. ಅತ್ಯುತ್ತಮ ಶಸ್ತ್ರಾಸ್ತ್ರ ಉಪಕರಣಗಳನ್ನು ಹೊಂದಿರುವ ಶಕ್ತಿಯುತ ಸೇನೆಯಾಗಿದೆ. ಭಾರತದ ಭದ್ರತೆ ನಿಮ್ಮ ಕೈಯಲಿದೆ” ಎಂದು ರಾಜನಾಥ್ ಸಿಂಗ್‌ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?

ಪೂಂಚ್‌ನಲ್ಲಿ ದಾಳಿಯ ನಂತರ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ರಾಜೌರಿ ಮತ್ತು ಜಮ್ಮುವಿಗೆ ಒಂದು ದಿನದ ಭೇಟಿಗಾಗಿ ಆಗಮಿಸಿದ್ದಾರೆ.

ಪೂಂಚ್‌ ಜಿಲ್ಲೆಯಲ್ಲಿ ಉಗ್ರರಿಂದ ಹತರಾದ ನಾಲ್ವರು ಸೈನಿಕರ ಸಾವಿನ ನಂತರ ವಿಚಾರಣೆಗಾಗಿ ಕರೆದೊಯ್ದಿದ್ದ ಸಂದರ್ಭದಲ್ಲಿ ಮೂವರು ನಾಗರಿಕರು ಮೃತಪಟ್ಟಿದ್ದರು. ಅವರು ಪೊಲೀಸರ ಚಿತ್ರಹಿಂಸೆಯಿಂದ ಮೃತಪಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತವಾದ ನಂತರ ಕೇಂದ್ರ ರಕ್ಷಣಾ ಸಚಿವರು ಹೇಳಿಕೆ ನೀಡಿದ್ದಾರೆ.

ಜಮ್ಮು ಕಾಶ್ಮೀರ ಆಡಳಿತವು ಮೃತಪಟ್ಟ ನಾಗರಿಕರ ಕುಟುಂಬಗಳಿಗೆ ಉದ್ಯೋಗ ಮತ್ತು ಪರಿಹಾರವನ್ನು ನೀಡಿದೆ. ಘಟನೆಯ ಬಗ್ಗೆ ಸೂಕ್ತ ಕ್ರಮ ಜರುಗಿಸಲು ಸೇನೆ ಈಗಾಗಲೇ ಆಂತರಿಕ ತನಿಖೆ ಮೂಲಕ ಕ್ರಮ ಕೈಗೊಂಡಿದೆ. ಅಲ್ಲದೆ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿಯೂ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...