‘ಮಿಯಾ’ ಮುಸ್ಲಿಮರು ಬಿಜೆಪಿ ಶತ್ರುಗಳಲ್ಲ: ಹೈಕೋರ್ಟ್ ನೋಟಿಸ್ ಬಳಿಕ ಅಸ್ಸಾಂ ಸಿಎಂ ವರಸೆ ಬದಲು

Date:

‘ಮಿಯಾ’ ಮುಸ್ಲಿಮರನ್ನು ಬಿಜೆಪಿ ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ದ್ವೇಷ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಗುವಾಹಟಿ ಹೈಕೋರ್ಟ್ ಅವರಿಗೆ ನೋಟಿಸ್ ನೀಡಿದ ಒಂದು ವಾರದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.

ಆದರೆ ಆ ಸಮುದಾಯದ ಕೆಲವರಲ್ಲಿ ಕಂಡುಬರುವ ವಿವಿಧ ರೀತಿಯ ‘ಜಿಹಾದ್’ ಚಟುವಟಿಕೆಗಳು ಹಾಗೂ ಬಾಲ್ಯವಿವಾಹಗಳಂತಹ ಪದ್ಧತಿಗಳ ಬಗ್ಗೆ ಬಿಜೆಪಿಗೆ ವಿರೋಧವಿದೆ ಎಂದು ಅವರು ಹೇಳಿದ್ದಾರೆ.

ಉತ್ತರ ಭಾರತದಲ್ಲಿ ‘ಮಿಯಾ’ ಎಂಬ ಪದವನ್ನು ಸಾಮಾನ್ಯವಾಗಿ ಗೌರವ ಸೂಚಕವಾಗಿ ಬಳಸಲಾಗುತ್ತದೆ. ಆದರೆ ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಅಥವಾ ಬಂಗಾಳ ಮೂಲದ ಮುಸ್ಲಿಮರನ್ನು ಸೂಚಿಸಲು ಈ ಪದವನ್ನು ಹಲವೊಮ್ಮೆ ಅವಹೇಳನಾತ್ಮಕವಾಗಿ ಬಳಸಲಾಗುತ್ತದೆ. ಇಂತಹವರನ್ನು ಹೆಚ್ಚಾಗಿ ಬಾಂಗ್ಲಾದೇಶ ಮೂಲದವರು ಅಥವಾ ಅಕ್ರಮ ವಲಸಿಗರು ಎಂದು ಉಲ್ಲೇಖಿಸುವ ಪ್ರವೃತ್ತಿಯೂ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆ ನಡೆಯಲಿರುವ ಅಸ್ಸಾಂ ರಾಜ್ಯದಲ್ಲಿ ಅಲ್ಪಸಂಖ್ಯಾತರ ಪ್ರಾಬಲ್ಯದ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಬಿಜೆಪಿಯ ಚುನಾವಣಾ ಕಾರ್ಯತಂತ್ರವನ್ನು ವಿವರಿಸುತ್ತಾ ಗುವಾಹಟಿಯಲ್ಲಿರುವ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಅವರು ಮಾ.5ರಂದು ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದರು. ರಾಷ್ಟ್ರವನ್ನು ಪ್ರೀತಿಸುವ ಹಾಗೂ ‘ಭಾರತ್ ಮಾತಾ ಕಿ ಜೈ’ ಅಥವಾ ‘ವಂದೇ ಮಾತರಂ’ ಎಂದು ಹಿಂಜರಿಕೆಯಿಲ್ಲದೆ ಹೇಳುವ ಯಾರೊಂದಿಗೂ ತಮ್ಮ ಪಕ್ಷವು ಸಹಜವಾಗಿ ಹೊಂದಿಕೊಳ್ಳುತ್ತದೆ ಎಂದು ಅವರು ಹೇಳಿದರು.

ಇದನ್ನು ಓದಿದ್ದೀರಾ? ಪಶ್ಚಿಮ ಏಷ್ಯಾದಲ್ಲಿ ಅಮೆರಿಕದ ವಿನಾಶಕಾರಿ ನೀತಿ, ಭಾರತೀಯ ವಿಮಾನಯಾನಕ್ಕೆ ದುಃಸ್ವಪ್ನ

“ಮಿಯಾ ಜನರು ನಮ್ಮ ಶತ್ರುಗಳಲ್ಲ. ಆದರೆ ಲವ್ ಜಿಹಾದ್, ಭೂ ಅತಿಕ್ರಮಣ, ಬಾಲ್ಯವಿವಾಹ ಮತ್ತು ‘ರಸಗೊಬ್ಬರ ಜಿಹಾದ್’ ಎಂಬ ವಿಷಯಗಳ ಬಗ್ಗೆ ನಮಗೆ ವಿರೋಧವಿದೆ” ಎಂದು ಶರ್ಮಾ ಹೇಳಿದರು.

ಸಮುದಾಯದ ಕೆಲ ರೈತರು ಸಾಮೂಹಿಕ ಬಳಕೆಗಾಗಿ ಬೆಳೆಯುವ ಆಹಾರ ಬೆಳೆಗಳ ಮೇಲೆ ರಾಸಾಯನಿಕಗಳನ್ನು ಬಳಸುತ್ತಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ‘ರಸಗೊಬ್ಬರ ಜಿಹಾದ್’ ಎಂಬ ಪದವನ್ನು ಬಳಸಲಾಗಿದೆ ಎಂದು ಅವರು ವಿವರಿಸಿದರು. ಈ ಸಮಸ್ಯೆಗಳು ಪರಿಹಾರವಾದರೆ ಬಿಜೆಪಿ ಸಮುದಾಯವನ್ನು ವಿರೋಧಿಗಳೆಂದು ಪರಿಗಣಿಸುವುದಿಲ್ಲ ಎಂದು ಅವರು ಹೇಳಿದರು.

ಅಲ್ಪಸಂಖ್ಯಾತರ ಪ್ರಾಬಲ್ಯದ ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಸ್ಪರ್ಧಿಸಲಿದೆ. ಗೆಲುವಿನ ಸಾಧ್ಯತೆಯನ್ನು ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳ ಆಯ್ಕೆ ಧರ್ಮವನ್ನು ಆಧರಿಸಿಲ್ಲ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಸ್ಪಷ್ಟಪಡಿಸಿದರು.

‘ಮಿಯಾ’ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಲಾಗಿದೆ ಹಾಗೂ ಸಾಂಕೇತಿಕ ಹಿಂಸಾಚಾರಕ್ಕೆ ಪ್ರೇರೇಪಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಹಲವು ಅರ್ಜಿಗಳನ್ನು ಫೆಬ್ರವರಿ 26ರಂದು ವಿಚಾರಣೆ ನಡೆಸಿದ ಗುವಾಹಟಿ ಹೈಕೋರ್ಟ್, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ನೋಟಿಸ್ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...