ಹೇಮಂತ್ ಸೊರೇನ್ ಬಂಧನ: ಪಿತೂರಿಯ ಅಬ್ಬರದ ಪ್ರದರ್ಶನ ಎಂದ ಎಂ ಕೆ ಸ್ಟಾಲಿನ್

Date:

ಜಾರಿ ನಿರ್ದೇಶನಾಲಯ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಬಂಧಿಸಿರುವ ಕ್ರಮದ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜೆಎಂಎಂ ಮುಖ್ಯಸ್ಥರನ್ನು ಬೆದರಿಸುತ್ತಿರುವುದು ಹತಾಶೆಯನ್ನು ಮರುಕಳಿಸುವ ವರ್ತನೆ ಎಂದು ಎಂ ಕೆ ಸ್ಟಾಲಿನ್ ಹೇಳಿದರೆ, ಲೋಕಸಭಾ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಎಲ್ಲರನ್ನು ಜೈಲಿಗೆ ಕಳಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

“ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹೇಮಂತ್ ಸೊರೇನ್ ಅವರನ್ನು ಬಂಧಿಸುವ ಮೂಲಕ ರಾಜಕೀಯ ಪಿತೂರಿಯ ಅಬ್ಬರದ ಪ್ರದರ್ಶನ ನಡೆಸುತ್ತಿದೆ. ತನಿಖಾ ಸಂಸ್ಥೆಗಳ ಮೂಲಕ ಬುಡಕಟ್ಟು ನಾಯಕನಿಗೆ ಕಿರುಕುಳ ನೀಡುತ್ತಿರುವುದು ಅತ್ಯಂತ ಕೆಳಮಟ್ಟದ್ದಾಗಿದೆ. ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಹತಾಶೆಯನ್ನು ಮರುಕಳಿಸುವ ವರ್ತನೆಯಾಗಿದೆ. ಬಿಜೆಪಿಯ ಕೆಟ್ಟ ತಂತ್ರಗಳು ವಿಪಕ್ಷಗಳ ಧನಿಯನ್ನು ಅಡಗಿಸಲು ಸಾಧ್ಯವಿಲ್ಲ” ಎಂದು ಎಂ ಕೆ ಸ್ಟಾಲಿನ್ ಎಕ್ಸ್‌ನಲ್ಲಿ ಖಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಯ ಪಿತೂರಿಯ ರಾಜಕಾರಣದ ಹೊರತಾಗಿಯೂ ಹೇಮಂತ್ ಸೊರೇನ್ ಗಟ್ಟಿಯಾಗಿ ನಿಂತುಕೊಳ್ಳಲಿದ್ದು, ಯಾವುದೇ ಕಾರಣಕ್ಕೂ ತಲೆಬಾಗುವುದಿಲ್ಲ. ಸಂಕಷ್ಟದ ನಡುವೆಯೂ ಅವರ ಸ್ಥೈರ್ಯ ಶ್ಲಾಘನೀಯ. ಬಿಜೆಪಿಯ ಬೆದರಿಕೆ ತಂತ್ರಗಳನ್ನು ಎದುರಿಸುತ್ತಿರುವ ಅವರ ಬದ್ಧತೆ ನಿಜಕ್ಕೂ ಸ್ಪೂರ್ತಿ” ಎಂದು ಸ್ಟಾಲಿನ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರವಾಹಕ್ಕೆದುರು ದಶಕ ಕಾಲದ ಈಜು-  Scroll.in ಗೆ ಅಭಿನಂದನೆ!

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಹೇಮಂತ್ ಸೊರೇನ್ ಅವರ ಬಂಧನವನ್ನು ಉಗ್ರವಾಗಿ ಟೀಕಿಸಿದ್ದಾರೆ. ಲೋಕಸಭಾ ಚುನಾವಣೆಯನ್ನು ಗೆಲ್ಲುವ ಏಕೈಕ ಉದ್ದೇಶದಿಂದ ಬಿಜೆಪಿ ಎಲ್ಲರನ್ನು ಜೈಲಿಗೆ ಕಳಿಸುತ್ತಿದೆ ಎಂದಿದ್ದಾರೆ.

ಎಎಪಿ ನಾಯಕ ಹಾಗೂ ದೆಹಲಿ ಸಚಿವ ಅತೀಶಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹೇಮಂತ್ ಸೊರೇನ್ ಅವರ ಬಂಧಿಸುತ್ತಿರುವ ಕ್ರಮವು ಲೋಕಸಭಾ ಚುನಾವಣೆಗಳಿಗೂ ಮುನ್ನ ವಿಪಕ್ಷಗಳ ಮೇಲೆ ದಾಳಿ ನಡೆಸುವ ಒಂದು ಪ್ರಯತ್ನವಾಗಿದೆ. ಮುಂದಿನ ಒಂದು ತಿಂಗಳೊಳಗೆ ಹಲವು ವಿಪಕ್ಷ ನಾಯಕರು ಬಂಧನಕ್ಕೊಳಗಾಗಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇ.ಡಿ ಯಿಂದ ಬಂಧನಕ್ಕೊಳಗಾಗಿರುವ ಸೊರೇನ್ ಅವರನ್ನು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಕೋರ್ಟ್ ಆದೇಶಿಸಿದೆ. ಬಂಧನ ಕ್ರಮ ಪ್ರಶ್ನಿಸಿ ಸೊರೇನ್ ಪರ ವಕೀಲರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ನಾಳೆ ವಿಚಾರಣೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...