ತಕ್ಷಣ ಹೆಚ್ಚು ಮಕ್ಕಳು ಪಡೆಯಿರಿ: ತಮಿಳು ಜನರಿಗೆ ಕರೆ ನೀಡಿದ ಸಿಎಂ ಎಂ ಕೆ ಸ್ಟಾಲಿನ್

Date:

ರಾಜ್ಯದಲ್ಲಿ ಕುಟುಂಬ ಯೋಜನೆ ಅಳವಡಿಸುವುದರಿಂದ ಹೆಚ್ಚು ಅನಾನುಕೂಲವಾಗಲಿದ್ದು, ತಮಿಳುನಾಡಿನ ಜನರು ತಕ್ಷಣವೇ ಹೆಚ್ಚು ಮಕ್ಕಳು ಪಡೆಯಬೇಕೆಂದು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಕರೆ ನೀಡಿದ್ದಾರೆ.

ಜನಸಂಖ್ಯೆ ಆಧಾರಿತ ಕ್ಷೇತ್ರ ವಿಂಗಡನೆ ತಮಿಳುನಾಡು ರಾಜಕೀಯ ಪ್ರಾತಿನಿಧಿಸುವಿಕೆಯಲ್ಲಿ ಪರಿಣಾಮ ಬೀರಲಿದ್ದು, ನಾಗರಿಕರು ಹೆಚ್ಚು ಮಕ್ಕಳು ಹೊಂದಬೇಕೆಂದು ಮನವಿ ಮಾಡಿದರು.

“ಈ ಮೊದಲು ನಾವು ಸಮಯ ಹೊಂದಾಣಿಕೆ ಮಾಡಿಕೊಂಡು ಮಕ್ಕಳನ್ನು ಪಡೆಯಿರಿ ಎಂದು ಹೇಳುತ್ತಿದ್ದೆವು. ಆದರೆ ಈಗ ತಕ್ಷಣವೇ ಪಡೆದುಕೊಳ್ಳಬೇಕಿದೆ. ನಾವು ಕುಟುಂಬ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದೆವು. ಅದರಿಂದ ಸಮಸ್ಯೆ ಎದುರಾಗುತ್ತಿದೆ. ಆದ ಕಾರಣದಿಂದ ಸಮಯಾವಕಾಶ ನೋಡದೆ ತಕ್ಷಣ ಮಕ್ಕಳನ್ನು ಪಡೆಯಿರಿ” ಎಂದು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯ ‘ಗುಜರಾತ್ ಮಾಡೆಲ್’ ಬಚ್ಚಿಟ್ಟ ಸತ್ಯಗಳು!

ಕ್ಷೇತ್ರ ಮರುವಿಂಗಡಣಾ ಸಂಬಂಧವಾಗಿ ಸ್ಟಾಲಿನ್‌ ಅವರು ಮಾರ್ಚ್‌ 5 ರಂದು ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ತಮಿಳುನಾಡು ಭವಿಷ್ಯಕ್ಕಾಗಿ ಪ್ರತಿಯೊಬ್ಬರು ಒಟ್ಟಾಗಬೇಕಿದೆ. ಸಂಕಷ್ಟ ಪರಿಸ್ಥಿತಿಯಿರುವುದರಿಂದ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಖಂಡಿತಾ ಹೋರಾಟ ನಡೆಸಬೇಕಿದೆ. ಎಲ್ಲರು ತಮ್ಮ ಅಹಂ ಅನ್ನು ಮರೆತು ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಬೇಕೆಂದು ನಾನು ಆಗ್ರಹಿಸುತ್ತೇನೆ. ನೀವು ನನ್ನ ಮಾತನ್ನು ಏಕೆ ಕೇಳಬೇಕೆಂದು ಯೋಚಿಸಬೇಡಿ, ತಮಿಳುನಾಡಿನ ಮೇಲೆ ಕತ್ತಿ ತೂಗಾಡುತ್ತಿದೆ ರಾಜ್ಯದ ಸಮಸ್ಯೆ ಪರಿಹಾರಕ್ಕಾಗಿ ಭಾಗವಹಿಸಿ ಎಂದು ಸ್ಟಾಲಿನ್‌ ಮನವಿ ಮಾಡಿದ್ದಾರೆ.

ಫೆ.25ರಂದು ಸಂಪುಟ ಸಭೆಯಲ್ಲಿ ಮಾತನಾಡಿದ್ದ ಎಂ ಕೆ ಸ್ಟಾಲಿನ್ ಕ್ಷೇತ್ರ ಪುನರ್‌ವಿಂಗಡನೆಯಿಂದ ತಮಿಳುನಾಡು 8 ಸಂಸದರನ್ನು ಕಳೆದುಕೊಳ್ಳಲಿದ್ದು, ಸಂಸತ್ತಿನಲ್ಲಿ ನಮ್ಮ ಪ್ರಾತಿನಿಧ್ಯ ಕಡಿಮೆಯಾಗಲಿದೆ ಎಂದು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...