ಕ್ಷೇತ್ರಗಳ ಪುನರ್‌ವಿಂಗಡಣೆಯಿಂದ ದಕ್ಷಿಣ ಭಾರತಕ್ಕೆ ಅಪಾಯ: ಎಂ ಕೆ ಸ್ಟಾಲಿನ್

Date:

ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡಣೆಯ ಪರಿಣಾಮದ ಕುರಿತು ಚರ್ಚಿಸಲು ಮಾರ್ಚ್ 5ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ.

ಸಭೆಗೆ 40 ನೋಂದಾಯಿತ ರಾಜಕೀಯ ಪಕ್ಷಗಳನ್ನು ಆಹ್ವಾನಿಸಲಾಗಿದೆ. ತಮಿಳುನಾಡಿನ ಎಲ್ಲ ರಾಜಕೀಯ ಪಕ್ಷಗಳು ಈ ಸಭೆಯಲ್ಲಿ ಭಾಗವಹಿಸಿ ಒಗ್ಗಟ್ಟಿನಿಂದ ಧ್ವನಿ ಎತ್ತುವಂತೆ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಮನವಿ ಮಾಡಿದ್ದಾರೆ.

ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ ಸ್ಟಾಲಿನ್, ತಮಿಳುನಾಡಿನಲ್ಲಿ ಕುಟುಂಬ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ರಾಜ್ಯವನ್ನು ಅನಾನುಕೂಲಕ್ಕೆ ತಳ್ಳಿದೆ. ಜನಗಣತಿಯ ಆಧಾರದ ಮೇಲೆ ಕ್ಷೇತ್ರಗಳ ಪುನರ್‌ವಿಂಗಡಣೆ ಜಾರಿಗೊಳಿಸಿದರೆ ನಮ್ಮ ಜನಸಂಖ್ಯೆ ಕಡಿಮೆ ಇರುವುದರಿಂದ ತಮಿಳುನಾಡು 8 ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ. ಇದರಿಂದ ಸಂಸತ್ತಿನಲ್ಲಿ ತಮಿಳುನಾಡು ಪ್ರಾತಿನಿಧ್ಯ ಕಳೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಭದ್ರ ಸರ್ಕಾರವನ್ನು ಅಭದ್ರಗೊಳಿಸುತ್ತಿರುವ ಕಾಂಗ್ರೆಸ್ಸಿಗರು

ಪ್ರಸ್ತುತ ತಮಿಳುನಾಡು 39 ಸಂಸದರನ್ನು ಹೊಂದಿದೆ ಮತ್ತು ಜನಗಣತಿಯ ಆಧಾರದಲ್ಲಿ ಕ್ಷೇತ್ರಗಳ ಪುನರ್‌ವಿಂಗಡಣೆಯಾದರೆ ಸಂಸದರ ಸಂಖ್ಯೆ 31ಕ್ಕೆ ಇಳಿಯಬಹುದು. ಕ್ಷೇತ್ರ ಪುನರ್‌ವಿಂಗಡಣೆಯಲ್ಲದೆ ತ್ರಿಭಾಷಾ ನೀತಿ, ಎನ್ಇಪಿಯನ್ನು ವಿರೋಧಿಸಲು ಸಿದ್ಧವಾಗಿದೆ ಎಂದು ಪ್ರತಿಪಾದಿಸಿದ ಸ್ಟಾಲಿನ್, ಮತ್ತೊಂದು ಭಾಷಾ ಯುದ್ಧವನ್ನು ಪುನರುಜ್ಜೀವನಗೊಳಿಸುವ ಚಟುವಟಿಕೆಗಳಲ್ಲಿ ಕೇಂದ್ರ ಸರಕಾರ ತೊಡಗಿಸಿಕೊಂಡಿದೆ ಎಂದು ಆರೋಪಿಸಿದರು.

ಕ್ಷೇತ್ರಗಳ ಪುನರ್‌ವಿಂಗಡಣೆ ಕೇವಲ ತಮಿಳುನಾಡಿಗೆ ಮಾತ್ರವಲ್ಲ, ದಕ್ಷಿಣ ಭಾರತದ ಮೇಲೆ ಪರಿಣಾಮ ಬೀರಲಿದೆ. ದೇಶದ ಜನಸಂಖ್ಯೆಯಲ್ಲಿ ಪ್ರಗತಿ ಸಾಧಿಸದ, ಬೆಳವಣಿಗೆಯಲ್ಲಿ ಹಾಗೂ ರಾಷ್ಟ್ರೀಯ ಪ್ರಗತಿಯಲ್ಲಿ ಕೊಡುಗೆ ನೀಡಿದ ರಾಜ್ಯಗಳಿಗೆ ಪ್ರಜಾಸತ್ತಾತ್ಮಕ ಪ್ರಕ್ರಿಯೆಯು ದಂಡ ವಿಧಿಸಬಾರದು. ನಮಗೆ ಸಂಯುಕ್ತ ವ್ಯವಸ್ಥೆಯನ್ನು ಎತ್ತಿಹಿಡಿಯಲು ನ್ಯಾಯೋಚಿತ, ಪಾರದರ್ಶಕ ಹಾಗೂ ಸಮಾನ ವಿಧಾನದ ಅಗತ್ಯವಿದೆ ಎಂದು ಎಂಕೆ ಸ್ಟಾಲಿನ್‌ ತಿಳಿಸಿದ್ದಾರೆ.

https://twitter.com/mkstalin/status/1894337705368281193
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...