ಹೋಳಿ | ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಾಲನೆ; ಶಾಸಕ ತೇಜ್ ಪ್ರತಾಪ್ ಯಾದವ್‌ಗೆ 4 ಸಾವಿರ ರೂ. ದಂಡ

Date:

ಪಾಟ್ನಾದಲ್ಲಿರುವ ಬಿಹಾರ ಮುಖ್ಯಮಂತ್ರಿ ನಿವಾಸದ ಬಳಿಯಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸಿದ್ದಕ್ಕಾಗಿ ಮಾಜಿ ಆರೋಗ್ಯ ಸಚಿವ ಮತ್ತು ಆರ್‌ಜೆಡಿ ಶಾಸಕ ತೇಜ್ ಪ್ರತಾಪ್ ಯಾದವ್ ಅವರಿಗೆ ಬಿಹಾರ ಸಂಚಾರ ಪೊಲೀಸರು 4,000 ರೂಪಾಯಿ ದಂಡ ವಿಧಿಸಿದ್ದಾರೆ.

ಸ್ಕೂಟರ್‌ನ ವಿಮೆ ಮತ್ತು ಮಾಲಿನ್ಯ ಪ್ರಮಾಣಪತ್ರದ ಅವಧಿ ಮುಗಿದಿರುವುದು ಕೂಡಾ ಪೊಲೀಸರ ಗಮನಕ್ಕೆ ಬಂದಿದೆ ಎಂದು ವರದಿಯಾಗಿದೆ. ಬಿಹಾರ ಮುಖ್ಯಮಂತ್ರಿ ನಿವಾಸದ ಹೊರ ಭಾಗದಲ್ಲಿ ಹೋಳಿ ಆಚರಿಸುವ ಸಂದರ್ಭದಲ್ಲಿ ತೇಜ್ ಪ್ರತಾಪ್ ಹೆಲ್ಮೆಟ್ ಧರಿಸದೆ ಸ್ಕೂಟರ್‌ನಲ್ಲಿ ಸವಾರಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಶಾಸಕ ತೇಜ್ ಪ್ರತಾಪ್ ಯಾದವ್ ಆಜ್ಞೆಯಂತೆ ಕುಣಿದ ಕಾನ್‌ಸ್ಟೆಬಲ್ ಅಮಾನತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಸಂಚಾರ ಪೊಲೀಸ್ ಎಸ್‌ಎಚ್‌ಒ ಬ್ರಜೇಶ್ ಕುಮಾರ್ ಚೌಹಾಣ್, “ಶಾಸಕ ಯಾದವ್ ಅವರಿಗೆ ಒಟ್ಟು ನಾಲ್ಕು ಸಾವಿರ ರೂಪಾಯಿ ದಂಡವನ್ನು ವಿಧಿಸಲಾಗಿದೆ” ಎಂದು ಹೇಳಿದ್ದಾರೆ.

“ತೇಜ್ ಪ್ರತಾಪ್ ಅವರು ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದರು. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಮೆ ಮತ್ತು ಮಾಲಿನ್ಯ ಪ್ರಮಾಣಪತ್ರದ ಅವಧಿಯೂ ಕೂಡಾ ಮುಗಿದಿದೆ. ಒಟ್ಟು ನಾಲ್ಕು ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ” ಎಂದು ಹೇಳಿದ್ದಾರೆ.

ಇದಲ್ಲದೆ ತೇಜ್ ಪ್ರತಾಪ್ ಅವರಿಗೆ ಸಂಬಂಧಿಸಿದ ಇನ್ನೊಂದು ವಿಡಿಯೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಾಸಕ ತನ್ನ ನಿವಾಸದ ಬಳಿ ಹೋಳಿ ಆಚರಣೆ ನಡೆಯುತ್ತಿದ್ದ ವೇಳೆ ತನ್ನ ಭದ್ರತಾ ಸಿಬ್ಬಂದಿಯಾಗಿರುವ ಕಾನ್‌ಸ್ಟೆಬಲ್ ದೀಪಕ್ ಕುಮಾರ್ ಅವರಿಗೆ ಕುಣಿಯುವಂತೆ ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ನೃತ್ಯ ಮಾಡದಿದ್ದರೆ ಅಮಾನತು ಮಾಡಿಸುತ್ತೇನೆ: ಪೊಲೀಸ್ ಅಧಿಕಾರಿಯನ್ನು ಕುಣಿಸಿದ ತೇಜ್ ಪ್ರತಾಪ್ ಯಾದವ್

“ಹೆ ಸಿಪಾಯಿ ನಾನು ಹಾಡುತ್ತೇನೆ, ನೀವು ಕುಣಿಯಬೇಕು. ಕುಣಿಯದಿದ್ದರೆ ಅಮಾನತು ಮಾಡಿಸುವೆ. ತಪ್ಪು ತಿಳಿಯಬೇಡಿ ಇದು ಹೋಳಿ ಸಂಭ್ರಮ” ಎಂದು ತೇಜ್ ಪ್ರತಾಪ್ ಹೇಳಿದ್ದಾರೆ. ಶಾಸಕರ ಆಜ್ಞೆಯಂತೆ ಪೊಲೀಸ್ ಸಮವಸ್ತ್ರದಲ್ಲಿದ್ದ ಕಾನ್‌ಸ್ಟೆಬಲ್ ದೀಪಕ್ ಕುಣಿದಿದ್ದಾರೆ. ಆದರೆ ಸಮವಸ್ತ್ರದಲ್ಲಿ ಕುಣಿದ ಕಾರಣಕ್ಕೆ ತೇಜ್ ಭದ್ರತಾ ಸಿಬ್ಬಂದಿ ಸೇವೆಯಿಂದ ದೀಪಕ್ ಅವರನ್ನು ಅಮಾನತು ಮಾಡಲಾಗಿದೆ.

ತೇಜ್ ಪ್ರತಾಪ್ ಯಾದವ್ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದು ಶಾಸಕರ ದರ್ಪ ಎಂದು ಕೆಲವರು ಹೇಳಿದರೆ, ಹೋಳಿ ಸಂದರ್ಭದಲ್ಲಿ ಇದೆಲ್ಲಾ ತಮಾಷೆ ಎಂದೂ ಕೆಲವು ನೆಟ್ಟಿಗರು ಹೇಳಿದ್ದಾರೆ. ಆದರೆ ಬಿಜೆಪಿ, ಕಾಂಗ್ರೆಸ್ ತೇಜ್ ಪ್ರತಾಪ್ ವರ್ತನೆಯನ್ನು ಖಂಡಿಸಿದೆ. ಹಾಗೆಯೇ ಕಾನ್‌ಸ್ಟೆಬಲ್ ಅಮಾನತು ಮಾಡಿರುವುದನ್ನು ಕೂಡಾ ಹಲವು ಮಂದಿ ಖಂಡಿಸಿದ್ದಾರೆ. ಈ ರೀತಿ ಬೆದರಿಸಿ ಕುಣಿಸಿದ ಶಾಸಕರ ಮೇಲೂ ಕ್ರಮವಾಗಬೇಕು ಎಂಬ ಆಗ್ರಹ ಕೇಳಿಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...