ಏಕನಾಥ್ ಶಿಂಧೆ ಬಣ ತೊರೆಯಲಿರುವ 22 ಶಾಸಕರು, 9 ಸಂಸದರು?

Date:

  • ಮಾತೃಪಕ್ಷದ ಕಡೆಗೆ ಒಲವು ತೋರಿಸುತ್ತಿರುವ ಶಿವಸೇನೆಯ ಶಿಂಧೆ ಬಣ ಶಾಸಕರು
  • ಆಡಳಿತಾರೂಢ ಬಿಜೆಪಿ-ಶಿವಸೇನೆ ಮೈತ್ರಿಕೂಟದಲ್ಲಿ ಭಿನ್ನಮತ ಎಂದ ಸಾಮ್ನಾ

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ ಶಿವಸೇನೆಯ 22 ಶಾಸಕರು ಮತ್ತು ಒಂಬತ್ತು ಲೋಕಸಭಾ ಸಂಸದರು ಬಿಜೆಪಿಯ ಮಲತಾಯಿ ಧೋರಣೆಯಿಂದ ಅಸಮಾಧಾನಗೊಂಡಿದ್ದು, ಶೀಘ್ರದಲ್ಲಿಯೇ ಪಕ್ಷ ತೊರೆಯಬಹುದು ಎಂದು ಶಿವಸೇನಾ (ಯುಬಿಟಿ) ಪಕ್ಷದ ಮುಖವಾಣಿ ಸಾಮ್ನಾ ಹೇಳಿದೆ.

ಶಿವಸೇನೆ (ಯುಬಿಟಿ) ಸಂಸದ ವಿನಾಯಕ ರಾವುತ್, “ಶಾಸಕರು ತಮ್ಮ ಪಕ್ಷದ ಸಂಪರ್ಕದಲ್ಲಿದ್ದಾರೆ ಮತ್ತು ಅವರ ಕ್ಷೇತ್ರಗಳಲ್ಲಿ ಯಾವುದೇ ಅಭಿವೃದ್ಧಿಯಾಗದ ಕಾರಣ ಶಿಂಧೆ ನೇತೃತ್ವದ ಪಕ್ಷ ತೊರೆಯಲು ಬಯಸಿದ್ದಾರೆ. ಶಿವಸೇನೆಯ ಹಿರಿಯ ನಾಯಕ ಗಜಾನನ ಕೀರ್ತಿಕರ್ ಅವರು ಬಿಜೆಪಿಯ ವರ್ತನೆಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ-ಶಿವಸೇನೆ ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಹೇಳಿರುವ ಶಿಂಧೆ ಬಣದ ಸಂಸದ ಗಜಾನನ್ ಕೀರ್ತಿಕರ್, “ಬಿಜೆಪಿ ತಾರತಮ್ಯ ಮಾಡುತ್ತಿದೆ. ನಾವು 13 ಸಂಸದರಿದ್ದು, ಎನ್‌ಡಿಎ ಭಾಗವಾಗಿದ್ದೇವೆ. ನಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆದ್ಯತೆಯ ಆಧಾರದ ಮೇಲೆ ಪರಿಹರಿಸಬೇಕು ಎನ್ನುವ ನಿರೀಕ್ಷೆಯಲ್ಲಿದ್ದೇವೆ. ಆದರೆ ಯಾವುದೇ ಕೆಲಸಕಾರ್ಯಗಳು ನಡೆಯುತ್ತಿಲ್ಲ” ಎಂದು ಬೇಸರ ಹೊರಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತೆಲಂಗಾಣ | ಸರ್ಕಾರಿ ಉದ್ಯೋಗ ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ವಂಚನೆ

ರಾಜ್ಯಸಭಾ ಸದಸ್ಯ ಹಾಗೂ ಸಾಮ್ನಾದ ಸಂಪಾದಕರಾದ ಸಂಜಯ್‌ ರಾವತ್, “ಬಿಜೆಪಿ ಮೊಸಳೆ ಅಥವಾ ಹೆಬ್ಬಾವಿನಂತಿದೆ. ಯಾರ ಜೊತೆ ಹೋದರೂ ಅವರನ್ನು ನುಂಗಲಾಗುತ್ತದೆ. ಅವರು ನಮ್ಮನ್ನು(ಉದ್ಧವ್‌ ಠಾಕ್ರೆ ಬಣ) ನುಂಗಲು ಪ್ರಯತ್ನಿಸಿದರು. ಆದರೆ ನಾವು ಅವರಿಂದ ದೂರ ಸರಿದೆವು” ಎಂದು ಹೇಳಿದ್ದಾರೆ.

ಪ್ರಸ್ತುತ ವಿಧಾನಸಭೆಯಲ್ಲಿ ಬಿಜೆಪಿ 105 ಸ್ಥಾನಗಳನ್ನು ಹೊಂದಿದ್ದರೆ, ಏಕನಾಥ್ ಶಿಂಧೆ ಬಣದಲ್ಲಿ 40 ಶಾಸಕರಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ವಿಭಜನೆಪೂರ್ವ ಶಿವಸೇನೆ 23 ಸ್ಥಾನಗಳನ್ನು ಪಡೆದಿತ್ತು. ಬಿಜೆಪಿ 25ರಲ್ಲಿ 23 ಮತ್ತು ಶಿವಸೇನೆ 23ರಲ್ಲಿ 18 ಸ್ಥಾನಗಳನ್ನು ಗೆದ್ದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...