ಪೊಲೀಸರ ಮೇಲೆ ಜನಸಮೂಹದಿಂದ ದಾಳಿ; ಹಲವು ಪೊಲೀಸ್‌ ಠಾಣೆಗಳಿಗೆ ಹಾನಿ

Date:

ಪೊಲೀಸ್‌ ಠಾಣೆಯಲ್ಲಿ ಯುವಕನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕ್ರೋಶಗೊಂಡ ಜನಸಮೂಹವು ಪೊಲೀಸರ ಮೇಲೆ ದಾಳಿ ನಡೆಸಿರುವ ಘಟನೆ ಛತ್ತೀಸ್‌ಗಢದ ಬಲರಾಮ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಇತ್ತೀಚಿನ ತಿಂಗಳುಗಳಲ್ಲಿ ಛತ್ತೀಸ್‌ಗಢದಲ್ಲಿ ಪೊಲೀಸರ ಮೇಲೆ ಜನರು ಆಕ್ರೋಶಗೊಂಡಿದ್ದಾರೆ. ಪೊಲೀಸ್‌ ಠಾಣೆಗಳ ಮೇಲೆ ಆಗ್ಗಾಗ್ಗೆ ದಾಳಿ ನಡೆದಿರುವ ಘಟನೆಗಳು ನಡೆದಿವೆ. ಕೊತ್ವಾಲಿ ಪೊಲೀಸ್‌ ಠಾಣೆಯ ಸ್ನಾನದ ಕೊಠಡಿಯಲ್ಲಿ ಯುವಕ ಸಾವನ್ನಪ್ಪಿದ್ದು, ಪೊಲೀಸರು ನೀಡಿದ ಕಿರುಕುಳದಿಂದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಮೃತನನ್ನು ಆರೋಗ್ಯ ಕಾರ್ಯಕರ್ತ ಗುರ್ಚನ್ ಮಂಡಲ್ ಎಂದು ಗುರುತಿಸಲಾಗಿದೆ. ತನ್ನ ಪತ್ನಿ ಕಾಣೆಯಾಗಿದ್ದಾರೆಂದು ಗುರ್ಚನ್‌ ದೂರು ದಾಖಲಿಸಿದ್ದರು. ಅದೇ ಪ್ರಕರಣದ ವಿಚಾರಣೆಗಾಗಿ ಗುರ್ಚನ್‌ನನ್ನು ಪೊಲೀಸ್‌ ಠಾಣೆಗೆ ಪೊಲೀಸರು ಕರೆಸಿಕೊಂಡಿದ್ದರು. ಈ ವೇಳೆ, ಆತನಿಗೆ ಪೊಲೀಸರು ಚಿತ್ರಹಿಂಸೆ ನೀಡಿದ್ದರಿಂದಲೇ, ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಜನರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯಿಂದ ಆಕ್ರೋಶಗೊಂಡ ಜನರು ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಆಸ್ತಿ ಮತ್ತು ವಾಹನಗಳಿಗೆ ಹಾನಿ ಮಾಡಿದ್ದಾರೆ. ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದ್ದಾರೆ. ಕೊತ್ವಾಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಬಲರಾಂಪುರ ಹೆಚ್ಚುವರಿ ಎಸ್‌ಪಿ ನಿಮಿಷಾ ಪಾಂಡೆ ಅವರನ್ನು ಸ್ಥಳೀಯ ಮಹಿಳೆಯರು ಥಳಿಸಿದ್ದಾರೆ.

ಘಟನೆ ಸಂಬಂಧ ಬಲ್ರಾಮ್‌ಪುರ ಜಿಲ್ಲಾ ಪೊಲೀಸ್ ಮುಖ್ಯಸ್ಥ ಕೊತ್ವಾಲಿ ಠಾಣಾ ಪ್ರಭಾರಿ ಮತ್ತು ಕಾನ್‌ಸ್ಟೆಬಲ್‌ನನ್ನು ಅಮಾನತು ಮಾಡಲಾಗಿದೆ.

ಈ ಘಟನೆಗೂ ಮುನ್ನ, ಈ ಹಿಂದೆ, ಬಲೋಡಾಬಜಾರ್, ಸೂರಜ್‌ಪುರ ಮತ್ತು ಕವರ್ಧಾ ಜಿಲ್ಲೆಗಳಲ್ಲಿಯೂ ಪೊಲೀಸ್‌ ಠಾಣೆಗಳ ಮೇಲೆ ದಾಳಿಗಳು ನಡೆದಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...