ಪಾತಕಿ ಲಾರೆನ್ಸ್‌ನನ್ನು ಸಮರ್ಥಿಸುತ್ತಿದೆ ಮೋದಿ ಭಕ್ತ ಪಡೆ!

Date:

ನಟ ಸಲ್ಮಾನ್ ಖಾನ್ ಅವರ ಆಪ್ತ, ಮಹಾರಾಷ್ಟ್ರ ಮಾಜಿ ಸಚಿವ, ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ತಾವೇ ಹತ್ಯೆ ಮಾಡಿದ್ದೇವೆಂದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೇಳಿಕೊಂಡಿದೆ. ಈ ಗ್ಯಾಂಗ್‌ನ ಕೃತ್ಯಗಳಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ಕೆನಡಾ ಆರೋಪಿಸಿದೆ. ಈ ನಡುವೆ, ಪಾತಕಿ ಲಾರೆನ್ಸ್‌ ತಮ್ಮ ಹೀರೋ ಎಂದು ಬಿಜೆಪಿ ಅರ್ಥಾತ್ ಪ್ರಧಾನಿ ಮೋದಿ ಅಭಿಮಾನಿಗಳು, ಬೆಂಬಲಿಗರು ಹೇಳಿಕೊಳ್ಳುತ್ತಿದ್ದಾರೆ.  ಲಾರೆನ್ಸ್‌ ಬಿಷ್ಣೋಯ್‌ನ ಕೃತ್ಯಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಅಂದಹಾಗೆ, 25 ವರ್ಷಗಳ ಹಿಂದೆ ಕೃಷ್ಣಮೃಗವನ್ನು ಕೊಂದಿದ್ದಕ್ಕಾಗಿ ನಟ ಸಲ್ಮಾನ್ ಖಾನ್ ಅವರನ್ನೂ ಕೊಲ್ಲುತ್ತೇವೆಂದು ಈ ಲಾರೆನ್ಸ್‌ ಗ್ಯಾಂಗ್ ಹೇಳಿಕೊಂಡಿದೆ. ಸಲ್ಮಾನ್‌ ಖಾನ್ ಜೊತೆಗೆ ನಿಕಟ ಆಪ್ತತೆ ಹೊಂದಿವವರನ್ನೂ ಬಿಡುವುದಿಲ್ಲವೆಂದು ಬೆದರಿಕೆ ಹಾಕಿದೆ. ಸಲ್ಮಾನ್ ಖಾನ್ ಮಾತ್ರವಲ್ಲದೆ, ಇನ್ನೂ ಹಲವರು ತಮ್ಮ ಹಿಟ್‌ಲಿಸ್ಟ್‌ನಲ್ಲಿ ಇರುವುದಾಗಿ ಲಾರೆನ್ಸ್‌ ಗ್ಯಾಂಗ್ ಹೇಳಿದೆ.

ಪಾತಕಿ ಕೃತ್ಯ, ಹತ್ಯೆಗಳನ್ನು ನಡೆಸುತ್ತಿರುವ ಲಾರೆನ್ಸ್‌ನನ್ನು ಮೋದಿ ಭಕ್ತರ ಪಡೆ ಬೆಂಬಲಿಸುತ್ತಿದೆ. ಸಮರ್ಥಿಸಿಕೊಳ್ಳುತ್ತಿದೆ. ಆತನೇ ನಮ್ಮ ಹೀರೋ ಎಂದೂ ಹೇಳಿಕೊಳ್ಳುತ್ತಿದೆ. ಹತ್ತಾರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಕುಖ್ಯಾತ ಪಾತಕಿಯನ್ನು ತಮ್ಮ ಹೀರೋ ಎಂದು ಹೇಳಿಕೊಳ್ಳುವುದು ಭಾರತದ ವ್ಯವಸ್ಥೆ ಹೇಗೆ ಮುನ್ನಡೆಯುತ್ತಿದೆ ಎಂಬುದಕ್ಕೆ ಕನ್ನಡಿ ಹಿಡಿಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಾರೆನ್ಸ್‌ನ ಫೋಟೋವನ್ನು ಹಂಚಿಕೊಂಡಿರುವ ಬಿಜೆಪಿ ಬೆಂಬಲಿಗ ಮುತ್ತು ಕರಮುಡಿ ಎಂಬಾತ, “ಅವರು ಅಫ್ಜಲ್ ನನ್ನು ತಮ್ಮ ‘ನಾಯಕ’ ಎನ್ನುತ್ತಾರೆ. ನಾವ್ಯಾಕೆ ಬಿಷ್ಣೋಯಿಯನ್ನು ನಮ್ಮ ‘ಹೀರೋ’ ಎಂದು ಪರಿಗಣಿಸಬಾರದು…!! ಜೈ ಶ್ರೀ ರಾಮ್” ಎಂದು ಪೋಸ್ಟ್‌ ಮಾಡಿದ್ದಾರೆ.

“ಲಾರೆನ್ಸ್ ಬಿಷ್ಣೋಯ್ ಅವರು ನಮ್ಮ ಹೀರೋ ಮತ್ತು ನಾವು ಯಾವಾಗಲೂ ಅವರನ್ನು ಬೆಂಬಲಿಸುತ್ತೇವೆ” ಎಂದು ಮತ್ತೊಮ್ಮ ಹಿಂದುತ್ವವಾದಿ, ಮೋದಿ ಬೆಂಬಲಿಗ ರಿಗ್ತಿಸ್ಟ್‌ ಸಿಂಗ್ ಪೋಸ್ಟ್‌ ಮಾಡಿದ್ದಾರೆ.

“ಹಿಂದುಗಳು ಲಾರೆನ್ಸ್ ಬಿಷ್ಣೋಯಿ ಅವರೊಂದಿಗೆ ದೃಢವಾಗಿ ನಿಲ್ಲಬೇಕು. ಸಲ್ಮಾನ್‌ಖಾನ್ ತನ್ನ ಕೃತ್ಯದ ಪರಿಣಾಮಗಳನ್ನು ಎದುರಿಸಬೇಕು ಅಥವಾ ಬಿಷ್ಣೋಯಿ ಸಮುದಾಯದ ಬಳಿ ಕ್ಷಮೆಯಾಚಿಸಬೇಕು” ಎಂದು ಎಂದು ಸಂಜಯ್ ಯಾದವ್ ಎಂಬಾತ ಟ್ವೀಟ್ ಮಾಡಿದ್ದಾರೆ.

“ಲಾರೆನ್ಸ್‌ ಬಿಷ್ಣೋಯ್‌ಗೆ ಸಲ್ಮಾನ್ ಖಾನ್ ಸೂಪರ್ ಕೌಂಟರ್ ಬೆದರಿಕೆ ಹಾಕಬೇಕು. ಇಲ್ಲದಿದ್ದರೆ ಅವರು ಹೇಡಿಯಂತೆ ಕಾಣಿಸುತ್ತಾರೆ. ಬಿಷ್ಣೋಯ್‌ ನೋಡಲು ಸುಂದರವಾಗಿದ್ದಾನೆ. ಅವನ ಮುಂದೆ ಚೆಂದವಾಗಿ ಕಾಣುವ ಯಾವ ಬಾಲಿವುಡ್‌ ನಟರೂ ನನಗೆ ನೆನಪಾಗುತ್ತಿಲ್ಲ” ಎಂದು ತೆಲುಗು ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಾ ಟ್ವೀಟ್ ಮಾಡಿದ್ದಾರೆ.

ಈ ಲಾರೆನ್ಸ್‌ ಬಿಷ್ಣೋಯ್ ಗ್ಯಾಂಗ್ ಇತ್ತೀಚೆಗೆ, ಕೆನಡಾದಲ್ಲಿದ್ದ ಖಲಿಸ್ತಾನಿ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಎಂಬಾತನನ್ನು ಹತ್ಯೆಗೈದಿತ್ತು. “ಈ ಹತ್ಯೆಯ ಹಿಂದೆ ಭಾರತದ ಕೇಂದ್ರ ಸರ್ಕಾರ ಕುಮ್ಮಕ್ಕು ಇದೆ. ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅನುಮತಿ ನೀಡಿದ ನಂತರವೇ ನಿಜ್ಜಾರ್ ಹತ್ಯೆ ಮಾಡಲಾಗಿದೆ. ನಿಜ್ಜಾರ್‌ ಹತ್ಯೆಗೈಯಲು ಲಾರೆನ್ಸ್‌ ಗ್ಯಾಂಗ್‌ಗೆ ಭಾರತೀಯ ರಾಯಭಾರಿಯೇ ಎಲ್ಲ ರೀತಿಯಲ್ಲೂ ನೆರವು ನೀಡಿದ್ದಾರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ತನ್ನ ವಿರೋಧಿಗಳು, ಪ್ರಭಾವಿ ವಿಮರ್ಶಕರು, ಎದುರಾಳಿಗಳನ್ನು ಹತ್ತಿಕ್ಕಲು, ಕೊಲ್ಲಲು, ಬೆದರಿಕೆ ಹುಟ್ಟು ಹಾಕಲು ಲಾರೆನ್ಸ್‌ ಗ್ಯಾಂಗ್‌ಅನ್ನು ಬಳಸಿಕೊಳ್ಳುತ್ತಿದೆ” ಎಂದು ಕೆನಡಾ ಆರೋಪಿಸಿದೆ. ಈ ಆರೋಪಗಳ ಬೆನ್ನಲ್ಲೇ, ಕೆನಡಾದ ರಾಜತಾಂತ್ರಿಕರನ್ನು ಭಾರತ ಹೊರಗಟ್ಟಿದೆ.

ಈ ವರದಿ ಓದಿದ್ದೀರಾ?: ಪಾತಕಿ ಲಾರೆನ್ಸ್‌ ಗ್ಯಾಂಗ್ ಜೊತೆ ಬಿಜೆಪಿ ನಂಟು?

ಇದೀಗ, ಕೆನಡಾ ಆರೋಪವನ್ನು ಅಲ್ಲಗಳೆದಿರುವ ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ಕೆನಡಾದ ಆರೋಪಕ್ಕೆ ಸಂಬಂಧಿಸಿದಂತೆ ನಾವು ನಿರಂತರವಾಗಿ ಸಾಕ್ಷ್ಯಗಳನ್ನು ಕೇಳುತ್ತಿದ್ದೆವು. ನಮಗೆ ಇಂದು ಉತ್ತರ ಸಿಕ್ಕಿದೆ. ಕೆನಡಾವು ಭಾರತ ಮತ್ತು ಭಾರತೀಯರ ವಿರುದ್ಧ ಮಾಡಿದ ಗಂಭೀರ ಆರೋಪಗಳಿಗೆ ಗುಪ್ತಚರ ಇಲಾಖೆಗೆ ವರದಿಯಲ್ಲದೆ ಬೇರಾವುದೇ ಪುರಾವೆಗಳನ್ನು ಕೆನಡಾ ನಮಗೆ ಒದಗಿಸಿಲ್ಲ. ಭಾರತ-ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧಗಳಿಗೆ ಉಂಟಾದ ಹಾನಿಗೆ ಸಂಪೂರ್ಣವಾಗಿ ಕೆನಡಾ ಪ್ರಧಾನಿ ಟ್ರುಡೋ ಅವರೇ ಜವಾಬ್ದಾರಿ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...