ನ್ಯಾ. ಮುರಳೀಧರ್ ವರ್ಗಾವಣೆಗೆ ‘ಕೊಲಿಜಿಯಂ’ ಮೇಲೆ ಮೋದಿ ಸರ್ಕಾರ ಒತ್ತಡ ಹೇರಿತ್ತು: ನ್ಯಾ. ಲೋಕೂರ್

Date:

ನ್ಯಾಯಮೂರ್ತಿ ಎಸ್ ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ವರ್ಗಾವಣೆ ಮಾಡುವಂತೆ ಕೇಂದ್ರ ಸರ್ಕಾರವು ಕೊಲಿಜಿಯಂ ಮೇಲೆ ನಿರಂತರವಾಗಿ ಒತ್ತಡ ಹೇರುತ್ತಿತ್ತು. ಆದಾಗ್ಯೂ, ಮುರುಳೀಧರ್ ಅವರ ವರ್ಗಾವಣೆಯನ್ನು ಹಲವಾರು ನ್ಯಾಯಾಧೀಶರು ವಿರೋಧಿಸಿದ್ದರು. ವಿರೋಧಿಸಿದ್ದ ಪ್ರಮುಖ ನ್ಯಾಯಾಧೀಶರು ನಿವೃತ್ತರಾಗುವವರೆಗೂ ಅದು ಸಾಧ್ಯವಾಗಿರಲಿಲ್ಲ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮದನ್ ಬಿ ಲೋಕೂರ್ ಆರೋಪಿಸಿದ್ದಾರೆ.

“ನಾನು ಸುಪ್ರೀಂ ಕೋರ್ಟ್‌ನಲ್ಲಿದ್ದಾಗ ನ್ಯಾ. ಎಸ್ ಮುರಳೀಧರ್ ಅವರನ್ನು ವರ್ಗಾವಣೆ ಮಾಡುವಂತೆ ಕೇಂದ್ರ ಸರ್ಕಾರ ಒತ್ತಾಯಿಸಿತ್ತು. ಆದರೆ, ನಾನು ವಿರೋಧಿಸಿದ್ದರಿಂದ ಅದು ಕಾರ್ಯಸಾಧ್ಯ ಆಗಲಿಲ್ಲ ಎಂದು ನ್ಯಾ. ಮರಳೀಧರ್ ಸಂಗ್ರಹದ ಇತ್ತೀಚೆಗೆ ಪ್ರಕಟಗೊಂಡ “[ಇನ್]ಕಂಪ್ಲೀಟ್ ಜಸ್ಟೀಸ್? ಸುಪ್ರೀಂ ಕೋರ್ಟ್ ಅಟ್ 75” ಎಂಬ ಪುಸ್ತಕದಲ್ಲಿ ಬರೆದ ಪ್ರಬಂಧದಲ್ಲಿ ನ್ಯಾ.ಲೋಕೂರ್ ನೆನಪಿಸಿಕೊಂಡಿದ್ದಾರೆ ಎಂದು livelaw.in ವರದಿ ಮಾಡಿದೆ.

“ಡಿಸೆಂಬರ್ 2018ರಲ್ಲಿ ತಾನು ನಿವೃತ್ತಿ ಹೊಂದಿದ ನಂತರ ಮುರಳೀಧರ್ ಅವರ ವರ್ಗಾವಣೆ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿತ್ತು. ಆ ಕೊಲಿಜಿಯಂನಲ್ಲಿದ್ದ ನ್ಯಾ. ಎ.ಕೆ ಸಿಕ್ರಿ ಅವರು ಅದನ್ನು ವಿರೋಧಿಸಿದ್ದರು. ನ್ಯಾ. ಸಿಕ್ರಿ ಮಾರ್ಚ್ 2019ರಲ್ಲಿ ನಿವೃತ್ತರಾದ ನಂತರ, ಮುರಳೀಧರ್ ಅವರ ವರ್ಗಾವಣೆ ವಿಷಯ ಮತ್ತೆ ಚರ್ಚೆಗೆ ಬಂತು. ಅಂತಿಮವಾಗಿ, ಫೆಬ್ರವರಿ 2020ರಲ್ಲಿ ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ‘ನಿರಂಕುಶವಾಗಿ’ ವರ್ಗಾಯಿಸಲಾಯಿತು ಎಂದು ನ್ಯಾಯಮೂರ್ತಿ ಲೋಕೂರ್ ತಮ್ಮ ಪ್ರಬಂಧದಲ್ಲಿ ಬರೆದಿಕೊಂಡಿದ್ದಾರೆ ಎಂದು ವರದಿ ವಿವರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುಪ್ರೀಂ ಕೋರ್ಟ್ ಕೊಲಿಜಿಯಂನ ಕಾರ್ಯನಿರ್ವಹಣೆಯ ಪಾರದರ್ಶಕತೆಯ ಬಗ್ಗೆ ಹೇಳಲೇಬೇಕಾದ ವಿಷಯವಿದೆ. ಒಂದು ಸಂದರ್ಭದಲ್ಲಿ, ಕಾರ್ಯಾಂಗವು ಸಿಜೆಐ ಅವರಿಗೆ ವರ್ಗಾವಣೆ ಮಾಡಲು ಸಲಹೆ ನೀಡಿದೆ ಎಂಬ ಸ್ಪಷ್ಟವಾದ ಅನಿಸಿಕೆ ನನಗೆ ಬಂತು. ಅದು ನ್ಯಾ. ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ವರ್ಗಾವಣೆ ಮಾಡಿದ ವಿಷಯದಲ್ಲಿ. ಏನೋ ಒಂದು ವಿಷಯ ಖಂಡಿತವಾಗಿಯೂ ವರ್ಗಾವಣೆಗೆ ಆಧಾರವಾಗುವುದಿಲ್ಲ. ಹಾಗಾಗಿ, ನಾನು ವರ್ಗಾವಣೆ ಪ್ರಸ್ತಾವನೆಗೆ ನನ್ನ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದೆ. ಸಿಜೆಐ ನನ್ನ ಅಭಿಪ್ರಾಯವನ್ನು ಸುಲಭವಾಗಿ ಒಪ್ಪಿಕೊಂಡಿದ್ದರು. ನಾನು ಸುಪ್ರೀಂ ಕೋರ್ಟ್‌ನಿಂದ ನಿವೃತ್ತಿಯಾದ ನಂತರ, ವರ್ಗಾವಣೆ ವಿಷಯ ಮತ್ತೆ ಮುನ್ನಲೆಗೆ ಬಂದಿತ್ತು. ಆದರೆ, ಸುಪ್ರೀಂ ಕೋರ್ಟ್ ಕೊಲಿಜಿಯಂಗೆ ಹೊಸದಾಗಿ ಸೇರ್ಪಡೆಯಾದ ನ್ಯಾ. ಸಿಕ್ರಿ ಕೂಡ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದರು. ಅವರು ಕೂಡ ಪ್ರಸ್ತಾವಿತ ವರ್ಗಾವಣೆಯನ್ನು ವಿರೋಧಿಸಿದ್ದರು. ಸಿಕ್ರಿ ಅವರ ನಿವೃತ್ತಿಯ ನಂತರ, ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ನಿರಂಕುಶವಾಗಿ ವರ್ಗಾಯಿಸಲಾಯಿತು” ಎಂದು ಲೋಕೂರ್ ಬರೆದಿದುಕೊಂಡಿದ್ದಾರೆ.

ಈ ಲೇಖನ ಓದಿದ್ದೀರಾ?: ರಷ್ಯಾದಿಂದ ಕಚ್ಚಾ ತೈಲ ಆಮದು: ಕನಿಷ್ಠ ಬೆಲೆಗೆ ಸಿಕ್ಕರೂ ಪೆಟ್ರೋಲ್-ಡೀಸೆಲ್ ಬೆಲೆ ಏಕೆ ಕಡಿಮೆಯಾಗಿಲ್ಲ?

ಸ್ವತಂತ್ರ ಮತ್ತು ತೀಕ್ಷ್ಣ ತೀರ್ಪುಗಳಿಗೆ ಹೆಸರುವಾಸಿಯಾಗಿದ್ದ ನ್ಯಾಯಮೂರ್ತಿ ಮುರಳೀಧರ್ ಅವರನ್ನು ಅಂತಿಮವಾಗಿ ಫೆಬ್ರವರಿ 2020ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು. ಈ ನಿರ್ಧಾರವು ಆ ಸಮಯದಲ್ಲಿ ಸಾಕಷ್ಟು ವಿವಾದವನ್ನು ಹುಟ್ಟುಹಾಕಿತ್ತು. ಏಕೆಂದರೆ, 2020ರ ದೆಹಲಿ ಗಲಭೆಯ ಸಮಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಹೊತ್ತಿರುವ ರಾಜಕಾರಣಿಗಳ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲು ವಿಫಲವಾದ ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಕೆಲವೇ ಗಂಟೆಗಳ ನಂತರ ಮುರಳೀಧರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು ಎಂದು livelaw.in ವಿವರಿಸಿದೆ.

ದೆಹಲಿ ಗಲಭೆ ವಿಷಯದಲ್ಲಿ ನ್ಯಾಯಮೂರ್ತಿ ಮುರಳೀಧರ್ ಅವರು ನೀಡಿದ್ದ ದಿಟ್ಟ ಆದೇಶಗಳಿಂದಾಗಿ ಅವರು ಪರಿಣಾಮಗಳನ್ನು ಎದುರಿಸಿರಬಹುದು ಎಂದು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಓಕಾ ಇತ್ತೀಚಿಗೆ ಹೇಳಿದ್ದರು ಎಂದು ವರದಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...