ಪ್ರಧಾನಿ ಮೋದಿ ’ಭಾರತ್ ಮಾತಾ ಕೀ ಜೈ’ ಅನ್ನದೆ ’ಅದಾನಿ ಕೀ ಜೈ’ ಅನ್ನಲಿ: ರಾಹುಲ್ ಗಾಂಧಿ

Date:

ಪ್ರಧಾನಿ ನರೇಂದ್ರ ಮೋದಿಯವರು ದಣಿವರಿಯದೆ ಉದ್ಯಮಿ ಗೌತಮ್ ಅದಾನಿಯವರಿಗೆ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ರಾಜಸ್ಥಾನದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿರುವ ಅವರು, “ಪ್ರಧಾನಿ ಮೋದಿಯವರು ಭಾರತ್ ಮಾತಾ ಕಿ ಜೈ (ಭಾರತ ಮಾತೆಗೆ ಜಯವಾಗಲಿ) ಘೋಷಣೆ ಮಾಡುವ ಬದಲು ’ಅದಾನಿ ಜೀ ಕಿ ಜೈ’ ಎಂದು ಘೋಷಿಸಬೇಕು” ಎಂದು ಕುಟುಕಿದ್ದಾರೆ.

ಮೋದಿಯವರು ಅದಾನಿಗಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಅವರು ‘ಜೈ ಭಾರತ್ ಮಾತಾ’ ಎನ್ನುತ್ತಾರೆ. ‘ಅದಾನಿ ಜಿ ಕಿ ಜೈ’ ಎಂದು ಹೇಳಬೇಕು ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡವರು, ರೈತರು, ಕಾರ್ಮಿಕರ ಪಾಲ್ಗೊಳ್ಳುವಿಕೆ ಮತ್ತು ಅವರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವುದರಲ್ಲಿ ಭಾರತ ಮಾತೆಯ ನಿಜವಾದ ವಿಜಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನ ಮಂತ್ರಿಗಳು ಎರಡು ಪ್ರತ್ಯೇಕ ‘ಹಿಂದೂಸ್ಥಾನಗಳನ್ನು’ ರೂಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದಿರುವ ಅವರು, ಒಂದು ಹಿಂದೂಸ್ಥಾನ ಅದಾನಿಗಾಗಿ ಇನ್ನೊಂದು ಕಡಿಮೆ ಸವಲತ್ತು ಉಳ್ಳವರಿಗಾಗಿ ಎಂದು ತಿಳಿಸಿದ್ದಾರೆ.

ಭಾರತ ಮಾತೆಯ ಏಳಿಗೆಯು ಸಮಾಜದ ಎಲ್ಲಾ ವರ್ಗಗಳ ಒಳಗೊಳ್ಳುವಿಕೆಯ ಮೇಲೆ ಅವಲಂಬಿತವಾಗಿದೆ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ.

ಜಾತಿ ಗಣತಿಯನ್ನು ನಡೆಸುವುದನ್ನು ಮೋದಿಯವರು ವಿರೋಧಿಸುತ್ತಿದ್ದಾರೆ ಎಂದಿರುವ ಅವರು, ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಅಂತಹ ಕ್ರಮಗಳನ್ನು ಕೈಗೊಳ್ಳುವ ಸಾಮರ್ಥ್ಯವಿದೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...