ಸಿಜೆಐ ನಿವಾಸಕ್ಕೆ ಪ್ರಧಾನಿ ಭೇಟಿ | ನ್ಯಾಯಾಧೀಶರಿಂದ ‘ನೀತಿ ಸಂಹಿತೆ’ ಉಲ್ಲಂಘನೆ: ಪ್ರಶಾಂತ್ ಭೂಷಣ್

Date:

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ಯಿ ಡಿವೈ ಚಂದ್ರಚೂಡ್ ಅವರ ನಿವಾಸಕ್ಕೆ ಗಣೇಶ ಪೂಜೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿರುವುದನ್ನು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಟೀಕಿಸಿದ್ದಾರೆ. ಸಿಜೆಐ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಪ್ರಶಾಂತ್ ಭೂಷಣ್, “ಸಿಜೆಐ ಚಂದ್ರಚೂಡ್ ಅವರ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿರುವುದು ಎರಡು ರೀತಿಯಲ್ಲಿ ಆಘಾತಕಾರಿಯಾಗಿದೆ” ಎಂದು ಹೇಳಿದ್ದಾರೆ.

“ಮೊದಲನೆಯದಾಗಿ ಕಾರ್ಯಾಂಗದಿಂದ ನಾಗರಿಕರ ಮೂಲಭೂತ ಹಕ್ಕನ್ನು ರಕ್ಷಿಸುವ ಜವಾಬ್ದಾರಿಯನ್ನು, ಸರ್ಕಾರವು ಸಂವಿಧಾನದ ಮಿತಿಯಲ್ಲಿ ಕಾರ್ಯನಿರ್ವಹಿಸುತ್ತದೆಯೇ ಎಂದು ನೋಡಿಕೊಳ್ಳುವ ಜವಾಬ್ದಾರಿಯನ್ನು ನ್ಯಾಯಾಂಗ ಹೊಂದಿದೆ. ಆದ್ದರಿಂದ ತಟಸ್ಥತೆಯನ್ನು ಕಾಯ್ದುಕೊಳ್ಳಬೇಕು ಎಂಬ ನಿಟ್ಟಿನಲ್ಲಿ ನ್ಯಾಯಾಧೀಶರುಗಳಿಗೆ ನೀತಿ ಸಂಹಿತೆ ವಿಧಿಸಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸಿಜೆಐ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ; ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ವಿಪಕ್ಷಗಳ ಕಳವಳ

“ಈಗ ಮುಖ್ಯ ನ್ಯಾಯಮೂರ್ತಿಗಳು ಪ್ರಧಾನಿ ಮಂತ್ರಿ ಅವರನ್ನು ತಮ್ಮ ಖಾಸಗಿ ಧಾರ್ಮಿಕ ಕಾರ್ಯಕ್ರಮಕ್ಕೆ ಭಾಗಿಯಾಗಲು ಅವಕಾಶ ನೀಡಿದ್ದಾರೆ. ಮೊದಲನೆಯದಾಗಿ ನ್ಯಾಯಾಧೀಶರನ್ನು ಪ್ರಧಾನಿ ಖಾಸಗಿ ಕಾರ್ಯಕ್ರಮದಲ್ಲಿ ಭೇಟಿಯಾಗುವುದು ಸರಿಯಲ್ಲ” ಎಂದು ಅಭಿಪ್ರಾಯಿಸಿದ್ದಾರೆ.

“ಎರಡನೆಯದಾಗಿ ಪ್ರಧಾನಿ ಹಾಗೂ ಮುಖ್ಯ ನ್ಯಾಯಮೂರ್ತಿಗಳು ನಿರ್ದಿಷ್ಟವಾದ ಧಾರ್ಮಿಕ ಕಾರ್ಯವನ್ನು ಮಾಡಿ ಸಾರ್ವಜನಿಕವಾಗಿ ಹಂಚಿಕೊಳ್ಳುವುದು ಸರಿಯಲ್ಲ. ಯಾಕೆಂದರೆ ಸುಪ್ರೀಂ ಕೋರ್ಟ್ ಕೂಡಾ ಜಾತ್ಯತೀತತೆಯನ್ನು ಕಾಪಾಡಿಕೊಳ್ಳಬೇಕು. ನನ್ನ ಪ್ರಕಾರ ಇದು ಸಂಪೂರ್ಣವಾಗಿ ನ್ಯಾಯಾಧೀಶರ ನೀತಿ ಸಂಹಿತೆ ಉಲ್ಲಂಘನೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...