ಸರ್ಕಾರಿ ಯೋಜನೆಗಳ ಪ್ರಚಾರ: ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

Date:

ಪ್ರಚಾರದಲ್ಲಿ ಕೇಂದ್ರ ಸರ್ಕಾರದ ಅನುದಾನಗಳನ್ನು ಬಳಸಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ) ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಟಿಎಂಸಿ ರಾಜ್ಯಸಭಾ ಸದಸ್ಯ ಡೆರಿಕ್ ಒಬ್ರಿಯಾನ್, ವಾರಣಾಸಿ ಕ್ಷೇತ್ರದ ಅಭ್ಯರ್ಥಿಯು ಆಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್‌ 16ರಂದು ಸರ್ಕಾರಿ ಕಾರ್ಯಕ್ರಮಗಳನ್ನು ಸಂದೇಶದ ಮೂಲಕ ಮತದಾರರಿಗೆ ತಲುಪಿಸಿದ್ದಾರೆ. ಇದು ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ಸಂಭವಿಸಿದೆ ಎಂದು ಆರೋಪಿಸಿದ್ದಾರೆ.

ಮೋದಿ ಅವರು ಉದ್ದೇಶಪೂರ್ವಕವಾಗಿ ಮಾರ್ಚ್‌ 15ರಂದು ಪತ್ರದ ಮೂಲಕ ಮತದಾರರಿಗೆ ಸಂದೇಶವನ್ನು ಬರೆದಿದ್ದಾರೆ ಎಂದು ಟಿಎಂಸಿ ನಾಯಕ ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಮಂತ್ರಿ ಕಚೇರಿಯನ್ನು ಬಳಸಿಕೊಂಡು ಬಿಜೆಪಿಯು ಸರ್ಕಾರಿ ಬಿಕ್ಕಸದ ವೆಚ್ಚದಲ್ಲಿ ಭಾರತ ಸರ್ಕಾರದ ಹೆಸರಿನಲ್ಲಿ ಪತ್ರವನ್ನು ವಿತರಿಸಲಾಗಿದೆ. ದೊಡ್ಡ ಸಂಖ್ಯೆಯ ಪತ್ರಗಳ ಪ್ರಸರಣದಲ್ಲಿ ಬಿಜೆಪಿ ಹಾಗೂ ಬಿಜೆಪಿ ಪರವಾಗಿ ಮತದಾರರಿಗೆ ಮನವಿ ಮಾಡಲಾಗಿದೆ. ಇದು ಕೇಂದ್ರ ಚುನಾವಣಾ ಆಯೋಗದ ನಿಯಮವನ್ನು ಉಲ್ಲಂಘಿಸುತ್ತದೆ ಎಂದು ಓಬ್ರಿಯಾನ್ ದೂರಿನಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೇಳುವುದು ಹಬ್ಬ, ಮಾಡುವುದು ಯುದ್ಧ, ಸಾಯುವುದು ಸೈನಿಕರು

ಭವಿಷ್ಯತ್ತಿನ ಪ್ರಚಾರ ಸಭೆಗಳಲ್ಲಿ ಸರ್ಕಾರಿ ಬೊಕ್ಕಸದ ವೆಚ್ಚದಲ್ಲಿ ಪತ್ರಗಳನ್ನು ರವಾನಿಸದಂತೆ ತಡೆಯಲು ಚುನಾವಣಾ ಆಯೋಗವು ಬಿಜೆಪಿ ಹಾಗೂ ಅವರ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಸೂಕ್ತ ನಿರ್ದೇಶನಗಳನ್ನು ನೀಡಬೇಕು ಎಂದು ಓಬ್ರಿಯಾನ್ ಆಗ್ರಹಿಸಿದ್ದಾರೆ.

ಪ್ರಧಾನಮಂತ್ರಿ ಪತ್ರವನ್ನು ಮತದಾರರಿಗೆ ತಲುಪಿಸಿರುವ ವೆಚ್ಚವನ್ನು ಸಹ ಬಿಜೆಪಿ ಮತ್ತು ಮೋದಿ ಅವರ ಚುನಾವಣಾ ಆಯೋಗ ನಿಗದಿಪಡಿಸಿರುವ ಚುನಾವಣಾ ವೆಚ್ಚಕ್ಕೆ ಸೇರಿಸಬೇಕೆಂದು ಓಬ್ರಿಯಾನ್‌ ತಿಳಿಸಿದ್ದಾರೆ.

ಓಬ್ರಿಯಾನ್‌ ಅವರ ಆರೋಪವನ್ನು ಅಲ್ಲಗಳೆದಿರುವ ಬಿಜೆಪಿ ರಾಜ್ಯಸಭಾ ಸದಸ್ಯ ಸಮಿಕ್ ಬಟ್ಟಾಚಾರ್ಯ, ಪ್ರಧಾನಮಂತ್ರಿ ಕಚೇರಿ ಮಾದರಿ ನೀತಿ ಸಂಹಿತೆಯ ಯಾವುದೇ ಉಲ್ಲಂಘನೆಗಳನ್ನು ಮಾಡಿಲ್ಲ. ಅವರು ತಮ್ಮ ಸುಳ್ಳುಗಳನ್ನು ಇಟ್ಟುಕೊಂಡು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...