ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ ಯಾದವ್ ಆಯ್ಕೆ

Date:

ಹಲವು ದಿನಗಳ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ಬಿಜೆಪಿ ಹೈಕಮಾಂಡ್ ಮಧ್ಯಪ್ರದೇಶದ ಮುಖ್ಯಮಂತ್ರಿ ಯಾರು ಎನ್ನುವ ವಿಚಾರದಲ್ಲಿ ಅಂತಿಮ ನಿರ್ಣಯ ಕೈಗೊಂಡಿದೆ. ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ ಯಾದವ್ ಆಯ್ಕೆಯಾಗಿದ್ದಾರೆ.

ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಹಲವು ಹಿರಿಯರಿದ್ದ ಸ್ಪರ್ಧೆಯಲ್ಲಿ ಬಿಜೆಪಿ ಹೈಕಮಾಂಡ್ ಅಚ್ಚರಿಯ ನಿರ್ಧಾರ ಕೈಗೊಂಡಿದೆ. ಕೇವಲ ಮೂರು ಬಾರಿ ಶಾಸಕರಾಗಿರುವ ಮೋಹನ ಯಾದವ್‌ಗೆ ಮುಖ್ಯಮಂತ್ರಿಯಾಗುವ ಅವಕಾಶ ನೀಡಿದೆ. ಅವರು ಉಜ್ಜೈನ್ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.

ಮೋಹನ ಯಾದವ್ ಕಾಲೇಜು ದಿನಗಳಿಂದಲೂ ಎಬಿವಿಪಿಯಲ್ಲಿ ತೊಡಗಿಕೊಂಡಿದ್ದವರು. ಅವರು 2013ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಮಧ್ಯಪ್ರದೇಶದಲ್ಲಿ 2020ರಲ್ಲಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆಯಾದಾಗ ಮೋಹನ ಯಾದವ್ ಅದರಲ್ಲಿ ಉನ್ನತ ಶಿಕ್ಷಣ ಖಾತೆಯ ಸಚಿವರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...